ಪ್ರಜ್ವಲ್​ ವಿರುದ್ಧದ ಆರೋಪಗಳೇನು, ರೇವಣ್ಣ ಬಂಧನವಾಗಿದ್ದೇಕೆ? ಇಲ್ಲಿದೆ ಪ್ರಕರಣದ ಎಲ್ಲ ಆರೋಪಿಗಳ ಕೇಸ್​ ಹಿಸ್ಟ್ರಿ

ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ, ಹಾಲಿ ಶಾಸಕ ಹೆಚ್​ ಡಿ ರೇವಣ್ಣ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳೇನು? ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಲು ಕಾರಣವೇನು? ಇಬ್ಬರಿಗೂ ಸಂಬಂಧಿಸಿದ ಪ್ರಕರಣದಲ್ಲಿ ಇಲ್ಲಿಯವರಗೆ ಆದ ಬೆಳವಣಿಗೆಗಳೇನು? ಹೆಚ್​ಡಿ ರೇವಣ್ಣ ಸೇರಿದಂತೆ ಯಾರು ಯಾರನ್ನು ಬಂಧಿಸಲಾಗಿದೆ? ಇಲ್ಲಿದೆ ಮಾಹಿತಿ..

ಪ್ರಜ್ವಲ್​ ವಿರುದ್ಧದ ಆರೋಪಗಳೇನು, ರೇವಣ್ಣ ಬಂಧನವಾಗಿದ್ದೇಕೆ? ಇಲ್ಲಿದೆ ಪ್ರಕರಣದ ಎಲ್ಲ ಆರೋಪಿಗಳ ಕೇಸ್​ ಹಿಸ್ಟ್ರಿ
ಹೆಚ್​ಡಿ ರೇವಣ್ಣ, ಪ್ರಜ್ವಲ್​ ರೇವಣ್ಣ
Follow us
|

Updated on: May 13, 2024 | 2:41 PM

ಬೆಂಗಳೂರು, ಮೇ 13: ಸದ್ಯ ರಾಜ್ಯದಲ್ಲಿ ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prjwal Revanna) ಮತ್ತು ಶಾಸಕ ಹೆಚ್.ಡಿ ರೇವಣ್ಣ (HD Revanna) ಅವರಿಗೆ ಸಂಬಂಧಿಸಿದ ಹಲವು ವಿಚಾರಗಳು ಚರ್ಚೆಯಲ್ಲಿವೆ. ಲೈಂಗಿಕ ದೌರ್ಜನ್ಯ (Sexual Assault) ಆರೋಪ ಹೊತ್ತಿರುವ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದರೇ, ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಶಾಸಕ ಹೆಚ್​ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಇಬ್ಬರಿಗೂ ಸಂಬಂಧಿಸಿದ ಈ ಪ್ರಕರಣಗಳನ್ನು ವಿಶೇಷ ತನಿಖಾ ದಳ (SIT) ತನಿಖೆ ನಡೆಸುತ್ತಿದೆ. ತಂದೆ-ಮಗನ ವಿರುದ್ಧ ಕೇಳಿಬಂದಿರುವ ಆರೋಪಗಳೇನು? ಇಬ್ಬರಿಗೂ ಸಂಬಂಧಿಸಿದ ಪ್ರಕರಣದಲ್ಲಿ ಇಲ್ಲಿಯವರಗೆ ಆದ ಬೆಳವಣಿಗೆಗಳೇನು? ಹೆಚ್​ಡಿ ರೇವಣ್ಣ ಸೇರಿದಂತೆ ಯಾರು ಯಾರನ್ನು ಬಂಧಿಸಲಾಗಿದೆ? ಇಲ್ಲಿದೆ ಮಾಹಿತಿ..

ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಪ್ರಕರಣ

ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳ ಪೆನ್​ಡ್ರೈವ್​ ಹಾಸನ ಜಿಲ್ಲೆಯಲ್ಲಿ ಹರಿದಾಡಲು ಆರಂಭಿಸಿತು. ಈ ಸಂಬಂಧ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ನಡುವೆ ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆ ನರಸೀಪುರ ಪೊಲೀಸ್​ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಯಿತು. ಈ ವಿಚಾರ ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದಂತೆ, ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿತು.

ಪ್ರಕರಣ ಎಸ್ಐಟಿಗೆ ವರ್ಗ, ಮೂವರ ಬಂಧನ

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಎಸ್​ಐಟಿಗೆ ವರ್ಗವಾಯಿತು. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್​ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್, ಪುಟ್ಟಿ ಆಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹೆಸರು ತಳುಕು ಹಾಕಿಕೊಂಡಿದ್ದು, ಇವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇನ್ನು ಅಶ್ಲೀಲ ವಿಡಿಯೋಗಳು ಇದ್ದ ಪೆನ್​ಡ್ರೈವ್​ ಇಟ್ಟುಕೊಂಡ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಲಿಖಿತ ಮತ್ತು ಚೇತನ್​ ಎಂಬುವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಚಿಕ್ಕಮಗಳೂರಿನಲ್ಲಿ ಪ್ರಜ್ವಲ್​ ಎಂಬಾತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪೆನ್​ಡ್ರೈವ್​ ಪ್ರಕರಣ ಬೆಳಕಿಗೆ ಬರುವ ಮುಂಚೆಯೇ ಪ್ರೀತಂಗೌಡ ಆಪ್ತನ ವಿರುದ್ಧ ದೂರು ನೀಡಿದ್ದ ಜೆಡಿಎಸ್

ಪ್ರಜ್ವಲ್​ ವಿರುದ್ಧ 2ನೇ ಪ್ರಕರಣ ದಾಖಲು

ಅಶ್ಲೀಲ ವಿಡಿಯೋದ ಪ್ರಕರಣ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್​ಐಟಿ ಅಧಿಕಾರಿಗಳ ಬಳಿ “ಪ್ರಜ್ವಲ್​ ರೇವಣ್ಣ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ” ಎಂದು ಹೇಳಿದರು. ಈ ಸಂಬಂಧ ಪ್ರಜ್ವಲ್​ ರೇವಣ್ಣ ವಿರುದ್ಧ ಎರಡನೇ ದೂರು ದಾಖಲಾಯಿತು.

ವಿದೇಶದಲ್ಲಿರುವ ಪ್ರಜ್ವಲ್​ಗೆ ನೋಟಿಸ್​

ವಿಚಾರಣೆಗೆ ಹಾಜರಾಗುವಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಎಸ್​ಐಟಿ ಅಧಿಕಾರಿಗಳು ಲುಕ್‌ಔಟ್ ಮತ್ತು ಬ್ಲೂ ಕಾರ್ನರ್ ನೋಟಿಸ್​ ಹೊರಡಿಸಿದ್ದಾರೆ.

ಹೆಚ್​ಡಿ ರೇವಣ್ಣ ಬಂಧನ

ಶಾಸಕ ಹೆಚ್​​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂದು ಮೇ 2 ರಂದು ಮೈಸೂರು ಕೆಆರ್​ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಅವರು ಕಣ್ಮರೆಯಾಗಿದ್ದಾರೆ ಅಂತ ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್​ಐಟಿ ಬಂಧಿಸಿತ್ತು. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.

ಮಹಿಳೆಯ ಪತ್ತೆಗಾಗಿ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಸಂತ್ರಸ್ತೆ ಹೆಚ್​ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಬಳಿಕ ಮೇ 03ರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್​​ಐಟಿ ಮೂರನೇ ನೋಟಿಸ್ ನೀಡಿತ್ತು.

ಎಸ್​ಐಟಿ ನೋಟಿಸ್​ ನೀಡುತ್ತಿದ್ದಂತೆ ಮಾಜಿ ಹೆಚ್​ಡಿ ರೇವಣ್ಣ ವಕೀಲರ ಮೊರೆ ಹೋಗಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಜಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಸಿದ್ದರು. ಆದರೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಕೊನೆಗೆ ಎಸ್​ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಡಿ ಹೆಚ್​ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ.

ಸದ್ಯ ಹೆಚ್​ಡಿ ರೇವಣ್ಣ ಅವರ ಜಾಮೀನು ಅರ್ಜಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇನ್ನು ಪ್ರಜ್ವಲ್​ ರೇವಣ್ಣ ಅವರು ವಿದೇಶದಿಂದ ಬರುವುದನ್ನೇ ಎಸ್​ಐಟಿ ಅಧಿಕಾರಗಳು ಕಾಯುತ್ತಿದ್ದಾರೆ. ಬಂದ ಕೂಡಲೆ ಅವರನ್ನೂ ಬಂಧಿಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು