ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ; ಪರಮೇಶ್ವರ

ಹಾಸನ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಮಾತನಾಡಿ ಯಾರೆ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ; ಪರಮೇಶ್ವರ
ಗೃಹ ಸಚಿವ ಜಿ ಪರಮೇಶ್ವರ್​
Follow us
Anil Kalkere
| Updated By: ವಿವೇಕ ಬಿರಾದಾರ

Updated on: Apr 29, 2024 | 10:46 AM

ಬೆಂಗಳೂರು ಏಪ್ರಿಲ್​ 29: ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ (Prjwal Revanna) ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ (HD Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಹೆಚ್​​ಡಿ.ರೇವಣ್ಣ ಇರಲಿ, ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ (G Parameshwara) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದರು.

ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಿದ್ದೇವೆ. ತನಿಖಾ ತಂಡದಲ್ಲಿ ಎಸ್​ಪಿ ಮಟ್ಟದ ಅಧಿಕಾರಿಗಳು ಇದ್ದಾರೆ. ಎಸ್​​ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತೆ. ಅಧಿಕಾರಿಗಳು ಪೆನ್​ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವಿಡಿಯೋಗಳನ್ನು ಎಫ್​ಎಸ್​ಲ್​​ಗೆ ಕಳುಹಿಸುತ್ತೇವೆ ಎಂದು ಹೇಳಿದರು.

ಬಂಧನಕ್ಕೆ ಒತ್ತಾಯ

ಹಾಸನ ಜಿಲ್ಲೆಯ ಹಲವು ಮಹಿಳೆಯರ ಜೊತೆಗಿನ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸುವಂತೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಆಗ್ರಹಿಸಿದೆ. ಅಲ್ಲದೆ ಪೆನ್​​ಡ್ರೈವ್ ಮೂಲಕ ಮಹಿಳೆಯರ ಅಶ್ಲೀಲ ವೀಡಿಯೋ ಹಂಚಿ ಅವರ ಖಾಸಗಿ ಜೀವನಕ್ಕೆ ಧಕ್ಕೆ ತಂದವರ ವಿರುದ್ಧವೂ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು, ಜನಪರ, ದಲಿತ, ಮಹಿಳಾ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಲಿವೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕ ಒತ್ತಾಯ

ಜೆಡಿಎಸ್​ನಿಂದಲೂ ದೂರು

ಏಪ್ರಿಲ್ 21ರಂದು ಪೆನ್​​ಡ್ರೈವ್, ಸಿಡಿ ಮೂಲಕ ಹಾಸನ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಲಾಗಿತ್ತು. ಇದರ ಬೆನ್ನಲ್ಲೇ ಜೆಡಿಎಸ್ ಚುನಾವಣಾ ಏಜೆಂಟ್, ಏಪ್ರಿಲ್ 23ರಂದು ಅರೇಹಳ್ಳಿ ನವೀನ್ ಗೌಡ ಎಂಬುವರ ವಿರುದ್ಧ ಹಾಸನದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಹಾಸನ ಎನ್ ಡಿ ಎ. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಮಣಿಸಲು ಅವರ ಮುಖವನ್ನ ಮಾರ್ಫ್ ಪೋಟೋ ವಿಡಿಯೋ ಮಾಡಿ ಮತದಾರರಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ನವೀನ್ ಗೌಡ ಎಂಬುವರ ವಿರುದ್ಧ FIR ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್