ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
ಪ್ರಜ್ವಲ್ ಕೇಸ್: ಸಿದ್ದರಾಮಯ್ಯ ಪೋಸ್ಟ್ ರಿಟ್ವೀಟ್ ಮಾಡಿ ಮೋದಿಗೆ ಪ್ರಶ್ನೆ ಕೇಳಿದ ರಾಹುಲ್ ಗಾಂಧಿ
Follow us
ಗಂಗಾಧರ​ ಬ. ಸಾಬೋಜಿ
|

Updated on: May 23, 2024 | 8:56 PM

ಬೆಂಗಳೂರು, ಮೇ 23: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ರಕ್ಕೆ ಸ್ಪಂದನೆ ಬಾರದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಇದೀಗ ಅವರ ಟ್ವೀಟ್​ ಅನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ರಿಟ್ವೀಟ್​ ಮಾಡಿದ್ದಾರೆ.

ಪ್ರಜ್ವಲ್​ನನ್ನು ಕರೆತರುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​​ನ್ನು ರಿಟ್ವೀಟ್​ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಅತ್ಯಾಚಾರಿಯನ್ನು ಏಕೆ ರಕ್ಷಿಸುತ್ತಿದ್ದೀರಿ ಪ್ರಧಾನಮಂತ್ರಿಗಳೇ? ನಿಮಗೆ ಯಾವ ರೀತಿಯ ಒತ್ತಾಯವಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ರಾಹುಲ್​ ಗಾಂಧಿ ಟ್ವೀಟ್​ 

ಎರಡೆರಡು ನೋಟಿಸ್ ಕೊಟ್ಟಿದ್ರು, ಲುಕ್‌ಔಟ್ ನೋಟಿಸ್ ಹೊರಡಿಸಿದ್ರು, ಬ್ಲೂಕಾರ್ನರ್‌ ಕೊಟ್ರು ಪ್ರಜ್ವಲ್‌ ಮಾತ್ರ ಪತ್ತೆಯಿಲ್ಲ. ಅಷ್ಟೇ ಯಾಕೆ ಕೋರ್ಟ್‌ ಮೂಲಕ ಅರೆಸ್ಟ್ ವಾರಂಟ್ ಅಸ್ತ್ರ ಹೂಡಿದ್ದರು. ಪ್ರಜ್ವಲ್ ಬಾರಲೇ ಇಲ್ಲ. ಹೀಗಾಗಿ ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರೋ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾಪಸ್ಸು ಬಂದು ಶರಣಾಗೆಂದು ಹೇಳುವ ದೇವೇಗೌಡರೇ ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿದ್ದು: ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದಂಥಾ ಗಂಭೀರ ಪ್ರಕರಣವಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ದುರ್ಬಳಕೆಯಾಗುತ್ತಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದ್ರೆ ವಾಪಸ್ ಬರಲೇಬೇಕು. ಎಸ್‌ಐಟಿ ವಿಚಾರಣೆಗೆ ಪ್ರಜ್ವಲ್ ಹಾಜರಾಗಬೇಕಿದೆ. ಹೀಗಾಗಿ ಪಾಸ್‌ಪೋರ್ಟ್ ರದ್ದು ಮಾಡಿ ಅಂತಾ ಪತ್ರದ ಮೂಲಕ ಸಿಎಂ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಎಲ್ಲಿರಬಹುದೆಂದು ಸಿಡಿ ಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್​ ಕಿಡಿ

ಸದ್ಯ ವಿದೇಶಾಂಗ ಇಲಾಖೆ ಪತ್ರ ಸ್ವೀಕರಿಸಿದ್ದು, ಮುಂದಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸ್ತಿದೆ. ಪರಿಶೀಲನೆ ಬಳಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ವರದಿ: ಬ್ಯುರೋರಿಪೋರ್ಟ್ -ಸಂತೋಷ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ