AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ದೋಷಿ: ಈ ಪ್ರಕರಣದಲ್ಲಿ ಹೊಸ ದಾಖಲೆ ಬರೆದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಮೈಸೂರಿನ ಕೆ.ಆರ್ .ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯವು ತೀರ್ಪು ನೀಡಿದೆ. ಇಂದು (ಆಗಸ್ಟ್ 01) ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸುತ್ತಿದ್ದಂತೆಯೇ, ಮಾಜಿ ಸಂಸದ ಕೋರ್ಟ್ ಹಾಲ್​​ ನಲ್ಲೇ ಕಣ್ಣೀರಿಟ್ಟರು. ಇನ್ನು ಈ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್​ ಜಡ್ಜ್​ ಸಂತೋಷ್ ಗಜಾನನ ಭಟ್ ಅವರು ಹೊಸ ದಾಖಲೆ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ದೋಷಿ:  ಈ ಪ್ರಕರಣದಲ್ಲಿ ಹೊಸ ದಾಖಲೆ ಬರೆದ ಜನಪ್ರತಿನಿಧಿಗಳ ವಿಶೇಷ ಕೋರ್ಟ್
Prajval Revanna
ರಮೇಶ್​ ಎಮ್​.
| Edited By: |

Updated on: Aug 01, 2025 | 3:50 PM

Share

ಬೆಂಗಳೂರು, (ಆಗಸ್ಟ್​ 01): ಕೆ.ಆರ್ .ನಗರ ಅತ್ಯಾಚಾರ ಪ್ರಕರಣದಲ್ಲಿ ಕಳೆದ 14 ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು (Bengaluru Special Court)ಇಂದು (ಆಗಸ್ಟ್ 01) ತೀರ್ಪು ಪ್ರಕಟಿಸಿದ್ದು, ನಾಳೆ(ಆಗಸ್ಟ್ 02) ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ. ಇನ್ನು ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ನ ಜಡ್ಜ್​ ಗಜಾನನ ಭಟ್​ ಹೊಸ ದಾಖಲೆ ಬರೆದಿದ್ದಾರೆ. ಹೌದು..ಈ ರೀತಿಯ ಅತ್ಯಾಚಾರ ಪ್ರಕರಣವನ್ನು ತ್ವರಿತ ಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಕೇವಲ 7 ತಿಂಗಳಲ್ಲೇ ತೀರ್ಪು ಪ್ರಕಟಿಸಿರುವುದು ದಾಖಲೆಯಾಗಿದೆ. ಈವರೆಗೂ ಈ ರೀತಿ ಪ್ರಕರಣದಲ್ಲಿ ಇಷ್ಟು ಬೇಗ ವಿಚಾರಣೆ ನಡೆಸಿ ತೀರ್ಪು ನೀಡಿದ ಉದಾಹರಣೆಗಳಿಲ್ಲ. ಹೀಗಾಗಿ ನ್ಯಾಯಾಧೀಶ ಗಜಾನನ ಭಟ್ ಅವರು ಈ ದಾಖಲೆ ಮಾಡಿದ್ದಾರೆ.

ಸಾಮಾನ್ಯವಾಗಿ ಪ್ರಕರಣ ಕೋರ್ಟ್​ನಲ್ಲಿದೆ ಅಂದ್ರೆ ಸ್ವಲ್ಪ ವಿಳಂಬವಾಗುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಈ ರೀತಿ ಕೇಸ್​​ ನಲ್ಲಿ ವಾದ ಪ್ರತಿವಾದ, ಆ ಅರ್ಜಿ , ಈ ಅರ್ಜಿ ಹಾಕಿಕೊಂಡು ಮುಂದೂಡಕೆಯಾತ್ತಲೇ ಇರುತ್ತವೆ. ಆದ್ರೆ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೋರ್ಟ್​,  ತ್ವರಿತಗತಿಯಲ್ಲಿ ಸಾಕ್ಷ್ಯ ವಿಚಾರಣೆ ನಡೆಸಿ ಒಂದು ವರ್ಷದೊಳಗೆ ಕೇವಲ ಏಳೇ ಏಳು ತಿಂಗಳಲ್ಲಿ ತೀರ್ಪು ನೀಡಿರುವುದು ದಾಖಲೆಯಾಗಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಗೂಗಲ್ ಮ್ಯಾಪ್​​ ಅನ್ನು ಸಾಕ್ಷಿಯಾಗಿ ಪರಿಗಣಿಸಿಸಬಹುದೇ? ಸ್ಯಾಮ್​ಸಂಗ್ ಜೆ 4 ಮೊಬೈಲ್ ಸೀಜ್ ಮಾಡಿರುವ ಬಗ್ಗೆಯೂ ವಿವರಣೆ ಕೇಳಿತ್ತು. ಕೆಲ ಕಾಲ ವಿಚಾರಣೆಯನ್ನು ಮುಂದೂಡಿದ್ದ ಕೋರ್ಟ್​, ಇದೀಗ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣ ಸಂಬಂಧ ತ್ವರಿತಗತಿಯಲ್ಲಿ ಕೇವಲ ಏಳೇ ತಿಂಗಳಲ್ಲಿ ಎಲ್ಲಾ ವಿಚಾರಣೆ ನಡೆಸಿ ಕೋರ್ಟ್ ತೀರ್ಪು ನೀಡಿರುವುದು ವಿಶೇಷವಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಕೆ. ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಒಟ್ಟು 424 ಪುಟಗಳ ತೀರ್ಪುನ್ನು ಪ್ರಕಟಿಸಿದೆ. ಇನ್ನೂ ಮೂರು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.

ಕೆಲ ತಿಂಗಳ ಹಿಂದೆ ನಡೆದ ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯಲ್ಲಿ ಬೆಳಕಿಗೆ ಬಂದಿತ್ತು. ಕಾರು ಚಾಲಕನಿಂದ ಪಡೆದ ಫೋಟೋ, ವಿಡಿಯೋ ಸಾಕ್ಷಿಯನ್ನು ನೀಡುವಂತೆ ಪ್ರಜ್ವಲ್‌ ರೇವಣ್ಣ ಅವರು ಹೈಕೋರ್ಟ್‌ನಲ್ಲಿ ಮನವಿ ಮಾಡಿದ ಸಂದರ್ಭದಲ್ಲಿ ಎಲ್ಲಾವೂ ಅಶ್ಲೀಲವಾಗಿವೆ ಎಂದು ಕೋರ್ಟ್‌ ಕಿಡಿಕಾರಿತ್ತು. ಜತೆಗೆ ಈ ಎಲ್ಲಾ ಸಾಕ್ಷಿ ವಿಡಿಯೋ, ಫೋಟೋಗಳನ್ನು ನೀಡುವುದಿಲ್ಲ ಎಂದು ನಿರಾಕರಣೆ ಮಾಡಿತ್ತು.

ಪ್ರಕರಣ ಹಿನ್ನೆಲೆ

2024ರ ಏಪ್ರಿಲ್‌ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಮೈಸೂರಿನ ಕೆ ಆರ್‌ ನಗರದ ಸಂತ್ರಸ್ತ ಮಹಿಳೆ ಈ ಸಂಬಂಧ ದೂರು ನೀಡಿದ್ದರು. ಮಹಿಳೆ ನಿಡಿದ್ದ ದೂರಿನ ಮೇರೆಗೆ ಸೈಬರ್‌ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಬಳಿಕ ಈ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಈ ತಂಡದ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2,000 ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 2024ರ ಅಂತ್ಯದಲ್ಲಿ ಈ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು