Prajwal Revanna: ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣ ಎಸ್ಐಟಿ ವಶಕ್ಕೆ
34 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಬಂದು ಇಳಿಯುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು, ಮೇ 31: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಐಎಬಿ ವಿಮಾನ ನಿಲ್ದಾಣಕ್ಕೆ ಆರೋಪಿ ಬಂದಿಳಿಯುತ್ತಿದ್ದಂತೆ ಪೊಲೀಸ್ ಪಡೆ ಅಲರ್ಟ್ ಆಗಿದ್ದು, ನೇರವಾಗಿ ಜೀಪ್ ಹತ್ತಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಎಸ್ಐಟಿ, ಕೆಐಎಬಿ ಹಿಂದಿನ ಗೇಟ್ ಮೂಲಕ ಕರೆದೊಯ್ದಿದ್ದಾರೆ. ಏರ್ಪೋರ್ಟ್ನಿಂದ ಬೆಂಗಳೂರಿನ ಎಸ್ಐಟಿ ಕಚೇರಿಯತ್ತ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇತ್ತ ಸಿಐಡಿ ಕಚೇರಿ ಬಳಿ ಪೊಲೀಸರು ಅಲರ್ಟ್ ಆಗಿದ್ದು, ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ: Prajwal Revanna Back to Bengaluru: ಬೆಂಗಳೂರಿಗೆ ಬಂದಿಳಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ
ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೋಟಿಸ್ ಇರೋದ್ರಿಂದ ಇಮಿಗ್ರೇಷನ್ ಅಧಿಕಾರಿಗಳೇ ಪ್ರಜ್ವಲ್‌ನನ್ನು ಮೊದಲು ವಶಕ್ಕೆ ಪಡೆದುಕೊಂಡಿದ್ದರು. ಅರೆಸ್ಟ್ ವಾರಂಟ್ ಕೂಡ ಇರೋದ್ರಿಂದ ಎಸ್‌ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಮಧ್ಯರಾತ್ರಿಯೇ ಪ್ರಜ್ವಲ್‌ನನ್ನ ವಶಕ್ಕೆ ಪಡೆದಿರುವ ಎಸ್‌ಐಟಿ ನಾಳೆ ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ಜಡ್ಜ್ ಮುಂದೆ ಹಾಜರು ಪಡಿಸಲಿದ್ದು ಬಳಿಕ ತಮ್ಮ ವಶಕ್ಕೆ ಕೇಳಲಿದ್ದಾರೆ.
ಇದನ್ನೂ ಓದಿ: ಬೆಂಗಳೂರಿಗೆ ಪ್ರಜ್ವಲ್ ಬಂದಿಳಿದ ಕೂಡಲೇ ಬಂಧನ: ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸ್ ಸಜ್ಜು
ಮೂರು ದಿನದ ಹಿಂದೆ ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31 ಎಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ಹಾಜರಾಗೋದಾಗಿ ಹೇಳಿದ್ದರು. ಅದರಂತೆ ಇಂದು ಜರ್ಮನಿಯಿಂದ ವಿಮಾನದಲ್ಲಿ ಬಂದಿದ್ದರು. ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 4ಗಂಟೆಗೆ ಜರ್ಮನಿಯ ಮ್ಯೂನಿಕ್‌ನಿಂದ ಹೊರಟಿದ್ದ ವಿಮಾನದಲ್ಲಿ ಪ್ರಜ್ವಲ್ ಹತ್ತಿದ್ದರು. 2 ಟ್ರ್ಯಾಲಿ ಬ್ಯಾಗ್ ಸೇರಿದಂತೆ ಒಟ್ಟು ನಾಲ್ಕು ಬ್ಯಾಗ್‌ನೊಂದಿಗೆ ಬಂದಿರೋ ಪ್ರಜ್ವಲ್, ಮಧ್ಯರಾತ್ರಿ 12ಗಂಟೆ 48 ನಿಮಿಷಕ್ಕೆ ಲ್ಯಾಂಡ್ ಆಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:31 am, Fri, 31 May 24