AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಾಜೇಗೌಡ್ರ ಮೇಲೂ ಲೈಂಗಿಕ ದೌರ್ಜನ್ಯದ ಆರೋಪ: ಬಂಧನ ಭೀತಿಯಲ್ಲಿ ಬಿಜೆಪಿ ಮುಖಂಡ

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕೇಸ್ ನಲ್ಲಿ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿವೆ. ಮತ್ತೊಂದೆಡೆ ಕೇಸ್​ಗೆ ಸ್ಪೋಟಕ ತಿರುವು ನೀಡಿದ್ದ ದೇವರಾಜೇಗೌಡ್ರು ಮೇಲೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು ಎಲ್ಲರಿಗೂ ಬಂಧನ ಭೀತಿ ಎದುರಾಗಿದೆ.

ದೇವರಾಜೇಗೌಡ್ರ ಮೇಲೂ ಲೈಂಗಿಕ ದೌರ್ಜನ್ಯದ ಆರೋಪ: ಬಂಧನ ಭೀತಿಯಲ್ಲಿ ಬಿಜೆಪಿ ಮುಖಂಡ
ದೇವರಾಜೇಗೌಡ್ರ ಮೇಲೂ ಲೈಂಗಿಕ ದೌರ್ಜನ್ಯದ ಆರೋಪ, ಬಂಧನ ಭೀತಿಯಲ್ಲಿ ಬಿಜೆಪಿ ಮುಖಂಡ
ಗಂಗಾಧರ​ ಬ. ಸಾಬೋಜಿ
|

Updated on:May 10, 2024 | 7:03 PM

Share

ಹಾಸನ, ಮೇ 10: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕೇಸ್ ನಲ್ಲಿ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿವೆ. ಇದೀಗ ಪ್ರಜ್ವಲ್ ರೇವಣ್ಣ ಅವರ ಮೇಲೆ ಮತ್ತೊಂದು ಅತ್ಯಾಚಾರ ಕೇಸ್ ದಾಖಲಾಗಿದೆ. ಕಿಡ್ನಾಪ್ ಆರೋಪದಲ್ಲಿ ಮಾಜಿ ಸಚಿವ ರೇವಣ್ಣ ಬಂಧನಕ್ಕೆ ಕಾರಣವಾಗಿದ್ದ ಕೇಸ್​​ನಲ್ಲೇ ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ವಿಡಿಯೋ ವೈರಲ್ ಮಾಡಿದ ಆರೋಪದಲ್ಲಿ ನಾಲ್ವರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದೆ. ಮತ್ತೊಂದೆಡೆ ಕೇಸ್​ಗೆ ಸ್ಪೋಟಕ ತಿರುವು ನೀಡಿದ್ದ ದೇವರಾಜೇಗೌಡ್ರು (Devarajegowda) ಮೇಲೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು ಎಲ್ಲರಿಗೂ ಬಂಧನ ಭೀತಿ ಎದುರಾಗಿದೆ.

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 1 ರಂದು ಎಫ್​ಐಆರ್ ದಾಖಲಾಗಿರುವ ಮಾಹಿತಿ ಬಹಿರಂಗಗೊಂಡಿದೆ. ಸಂತ್ರಸ್ಥೆಗೆ ವಾಟ್ಸಾಪ್ ಕಾಲ್ ಮಾಡಿ ಖಾಸಗಿ ಅಂಗಾಂಗ ಪ್ರದರ್ಶಿಸುವಂತೆ ಕಿರುಕುಳ ನೀಡಿದ್ದಲ್ಲದೇ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಒಂದಕ್ಕಿಂತ ಒಂದು ಕಠಿಣ ಕೇಸ್‌ಗಳನ್ನ ದಾಖಲಿಸಿದ ಎಸ್‌ಐಟಿ, ಪ್ರಜ್ವಲ್‌ಗೆ ಬಿಗಿಯಾದ ಉರುಳು, ಏನೇನು ಶಿಕ್ಷೆ?!

ಸಂತ್ರಸ್ಥೆ ಜೊತೆಗೆ ವಿಡಿಯೋ ಹರಿಬಿಡೋದಾಗಿ ಹೆದರಿಸಿದ್ದಲ್ಲದೇ, ನಮ್ಮ ಮನೆ ಬಳಿ ಅವರ ಬೆಂಬಲಿಗರನ್ನ ಕಳಿಸಿ ತಂಟೆಗೆ ಬಾರದಂತೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಇದೊಂದು ಹನಿಟ್ರ್ಯಾಪ್ ಪ್ರಕರಣ ಎಂದು ಬೆಂಗಳೂರಿನ ಹೆಬ್ಬಾಳ ಠಾಣೆಯಲ್ಲಿ ದೂರು ನೀಡಿರುವ ದೇವರಾಜೇಗೌಡ ಕಾನೂನು ಹೋರಾಟ ಆರಂಭಿಸಿದ್ದು ಜಾಮೀನಿಗಾಗಿ ಹಾಸನದ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ

ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಕೇಸ್​ನಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಲಾಗಿದ್ದು ಅಧಿಕೃತವಾಗಿ ಪ್ರಜ್ವಲ್ ವಿರುದ್ಧ ಎರಡನೇ ಅತ್ಯಾಚಾರ ಕೇಸ್ ದಾಖಲಾದಂತಾಗಿದೆ. ಈಗಾಗಲೇ ಸಂತ್ರಸ್ಥೆಯಿಂದ ಸಿಆರ್​ಪಿಸಿ ಕಾಯಿದೆ ಸೆಕ್ಷನ್ 164 ಅಡಿ ನ್ಯಾಯಾಧೀಶರ ಎದುರು ಹೇಳಿಕೆಯನ್ನು ದಾಖಲಿಸಿರುವ ಎಸ್​ಐಟಿ ತಂಡ ನಿನ್ನೆ ಸಂಸ್ರಸ್ಥೆಯೊಂದಿಗೆ ಚನ್ನರಾಯಪಟ್ಟಣ ತಾಲೂಕಿನ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರ್ ನಡೆಸಲಾಗಿದೆ. ಈ ಮೂಲಕ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದ್ದು ಹಾಸನ ಜಿಲ್ಲೆಯ ಪೊಲೀಸರು ಕೂಡ ಟೀಂಗೆ ಸೇರ್ಪಡೆ ಮಾಡಿಕೊಂಡಿದೆ.

ಎಎಸ್ಪಿ ತಮ್ಮಯ್ಯ, ಸೈಬರ್ ಠಾಣೆಯ ಇನ್ಸ್ ಪೆಕ್ಟರ್ ಜಗದೀಶ್, ಯಸಳೂರು ಹಾಗೂ ಶ್ರವಣಬೆಳಗೊಳ ಪೊಲೀಸ್ ಠಾಣೆಯ ಪಿಸೈಗಳನ್ನು ಒಒಡಿ ಮೇರೆಗೆ ಸೇರ್ಪಡೆ ಮಾಡಿಕೊಂಡಿದೆ. ದಿನಕ್ಕೊಂದರಂತೆ ಕೇಸ್ ಗಳು ದಾಖಲಾಗುತ್ತಿದ್ದು ಕಾನೂನಿನ ಉರುಳಿನಲ್ಲಿ ಪ್ರಜ್ವಲ್ ಮತ್ತಷ್ಟು ಭದ್ರವಾಗುತ್ತಿದ್ದಾರೆ.

ಇದನ್ನೂ ಓದಿ: HD Revanna Kidnap Case: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ಈಗಾಗಲೇ ಓರ್ವ ಮಹಿಳೆ ನೀಡಿದ್ದ ಅತ್ಯಾಚಾರ ಕೇಸ್​ನಲ್ಲೇ ಸಂಕಷ್ಟಕ್ಕೀಡಾಗಿದ್ದ ಪ್ರಜ್ವಲ್​ಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಇನ್ನೊಂದೆಡೆ ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನ ಎಸ್​ಐಟಿಗೆ ನಿನ್ನೆ ಹಸ್ತಾಂತರ ಮಾಡಲಾಗಿದೆ. ಈಗಾಗಲೇ ಕಾರ್ತಿಕ್, ಪುಟ್ಟರಾಜು, ನವೀನ್ ಗೌಡ, ಚೇತನ್ ಹಾಗೂ ಶರತ್ ಎಂಬುವವರ ಮೇಲೆ ದೂರು ದಾಖಲಾಗಿತ್ತು. ಅಲ್ಲದೇ ಇವೆರೆಲ್ಲರೂ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ವಜಾಗೊಂಡಿತ್ತು.

ಇದೀಗ ಎಸ್​ಐಟಿಗೆ ಕೇಸ್ ವರ್ಗಾವಣೆ ಆಗಿರೋದ್ರಿಂದ ಎಲ್ಲರಿಗೂ ಬಂಧನದ ಭೀತಿ ಎದುರಾಗಿದೆ. ಎಸ್​ಐಟಿ ಅಧಿಕಾರಿಗಳು ವಿಡಿಯೋ ವೈರಲ್ ವಿಚಾರದಲ್ಲಿ ಆರೋಪ ಹೊತ್ತಿರುವ ಕಾರ್ತಿಕ್ ಹಾಗೂ ಪುಟ್ಟರಾಜ್ ಆಲಿಯಾಸ್ ಪುಟ್ಟಿ ಸೇರಿದಂತೆ ನಾಲ್ವರಿಗೂ 24 ಗಂಟೆಯೊಳಗೆ ಹಾಜರಾಗುವಂತೆ ನೊಟೀಸ್ ನೀಡಿದೆ. ಲೈಂಗಿಕ ಹಗರಣದ ಬೆನ್ನತ್ತಿರುವ ಎಸ್​ಐಟಿ ತನಿಖೆ ಚುರುಕುಗೊಳಿಸಿದ್ದರೆ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ಸುಳಿವು ಮಾತ್ರ ಇನ್ನೂ ಪತ್ತೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:14 pm, Fri, 10 May 24