Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ಭಾರತಕ್ಕೆ: ಉನ್ನತ ಮೂಲಗಳಿಂದ ಮಾಹಿತಿ

ಸದ್ಯ ಬಂದಿರುವ ಮಾಹಿತಿ ಪ್ರಕಾರ ಚುನಾವಣೆ ಬಳಿಕ, ಅಂದರೆ ಮೇ 7ರ ನಂತರ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. 2ನೇ ಹಂತದ ಮತದಾನ ಬಳಿಕ ಪ್ರಜ್ವಲ್ ಶರಣಾಗತಿಯಾಗುವ ಸಾಧ್ಯತೆಯೂ ಇದೆ. ಈ ಬಗ್ಗೆ ಉನ್ನತ ಮೂಲಗಳು ‘ಟಿವಿ9’ಗೆ ಮಾಹಿತಿ ನೀಡಿವೆ.

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ಭಾರತಕ್ಕೆ: ಉನ್ನತ ಮೂಲಗಳಿಂದ ಮಾಹಿತಿ
ಪ್ರಜ್ವಲ್ ರೇವಣ್ಣ
Follow us
TV9 Web
| Updated By: Ganapathi Sharma

Updated on: May 06, 2024 | 1:00 PM

ಬೆಂಗಳೂರು, ಮೇ 6: ಚುನಾವಣೆ ಹೊತ್ತಲ್ಲಿ ದೇಶಾದ್ಯಂತ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಕೇಸ್ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ (Congress) ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ಟೀಕಿಸುತ್ತಿದೆ. ರಾಷ್ಟ್ರ ನಾಯಕರೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಪ್ರಜ್ವಲ್ ಕೇಸ್ ಅ​ನ್ನೇ ದಾಳ ಮಾಡಿಕೊಂಡಿದ್ದಾರೆ. ಈ ಮಧ್ಯೆ ಮೇ 7ರಂದು ಮತದಾನ ಮುಗಿದ ನಂತರ ಪ್ರಜ್ವಲ್ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಮೂಲಗಳು ‘ಟಿವಿ9’ಗೆ ತಿಳಿಸಿವೆ.

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್ ದೇಶ ಬಿಟ್ಟು ಹೊರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು. ಮೇ 5ರಂದೇ ಪ್ರಜ್ವಲ್ ಬೆಂಗಳೂರಿಗೆ ಆಗಮಿಸುವ ಪುಕಾರು ಹಬ್ಬಿತ್ತು. ಬೆಂಗಳೂರು, ಮಂಗಳೂರು, ಗೋವಾ ಅಥವಾ ಕೊಚ್ಚಿ ಏರ್​ಪೋರ್ಟ್​ಗಳಲ್ಲಿ ಎಸ್​ಐಟಿ ಅಧಿಕಾರಿಗಳು ಕಾದು ಕುಳಿತಿದ್ದರು. ಆದ್ರೆ ಪ್ರಜ್ವಲ್ ಬರಲೇ ಇಲ್ಲ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಚುನಾವಣೆ ಬಳಿಕ, ಅಂದರೆ ಮೇ 7ರ ನಂತ್ರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. 2ನೇ ಹಂತದ ಮತದಾನ ಬಳಿಕ ಪ್ರಜ್ವಲ್ ಶರಣಾಗತಿಯಾಗುವ ಸಾಧ್ಯತೆಯೂ ಇದೆ. ಈ ಮಧ್ಯೆ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಜ್ವಲ್​ಗೆ ನೋಟಿಸ್ ನೀಡಲು ಮಹಿಳಾ ಆಯೋಗವೂ ಸಿದ್ಧತೆ ನಡೆಸಿದೆ.

ಏಪ್ರಿಲ್ 26ರಂದು ಜರ್ಮನಿಗೆ ತೆರಳಿದ್ದ ಪ್ರಜ್ವಲ್ ಅಂದೇ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದರು. ಮೇ 15ಕ್ಕೆ ವಾಪಸ್ ಬರಲು ರಿಟರ್ನ್ ಟಿಕೆಟ್ ಬುಕ್ ಆಗಿತ್ತು. ಇದಾದ ಬಳಿಕ ಎಸ್​ಐಟಿ ನೋಟಿಸ್ ಹಿನ್ನೆ ಮೇ 3ಕ್ಕೆ ವಾಪಸ್ ಬರಲು ಮತ್ತೊಂದು ಟಿಕೆಟ್ ಬುಕ್ ಮಾಡಲಾಗಿತ್ತು. ಇನ್ನು ಪ್ರಜ್ವಲ್​ಗಾಗಿ ಎಸ್​ಐಟಿ ಅಧಿಕಾರಿಗಳು 2 ದಿನದಿಂದ ಕಾಯುತ್ತಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್​ಐಟಿ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಇಮಿಗ್ರೇಷನ್​ನಲ್ಲಿ ಬೆಂಗಳೂರಿಗೆ ಬರುವ ವಿಮಾನಗಳ ಪ್ರಯಾಣಿಕರ ಲಿಸ್ಟ್ ಪರಿಶೀಲನೆ ನಡೆಸಿದ್ದಾರೆ. ಪ್ರಜ್ವಲ್ ಪಾಸ್​ಪೋರ್ಟ್ ನಂಬರ್ ಸಮೇತ ಟಿಕೆಟ್ ಪರಿಶೀಲನೆ ಮಾಡಿದ್ದಾರೆ. ಆದರೆ, ಈವರೆಗೂ ಯಾವುದೇ ಫ್ಲೈಟ್​ನಲ್ಲಿ ಪ್ರಜ್ವಲ್ ಟಿಕೆಟ್ ಬುಕ್ ಆಗಿಲ್ಲ. ದುಬೈ, ಮಸ್ಕತ್, ಫ್ರಾಂಕ್​ಫರ್ಟ್ ಸೇರಿ ಹಲವು ದೇಶಗಳ ವಿಮಾನಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಎರಡು ಪಾಳಿಯಲ್ಲಿ ಎರಡು ತಂಡಗಳಿಂದ ಏರ್ಪೋಟ್​ನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಜ್ವಲ್​ಗೆ ಬಂದ್ರೆ ಏರ್ಪೋಟ್​ನಿಂದಲೇ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಲೆಮರೆಸಿಕೊಂಡದ್ದು ಸಾಕು, ವಿಚಾರಣೆಗೆ ಹಾಜರಾಗು: ಪ್ರಜ್ವಲ್​ಗೆ ಕುಟುಂಬಸ್ಥರು, ಆಪ್ತರಿಂದಲೇ ಹೆಚ್ಚಾದ ಒತ್ತಡ

ಈ ಮಧ್ಯೆ, ಪ್ರಜ್ವಲ್ ಲೈಂಗಿಕ ದೌರ್ಜನ್ಯ ಕೇಸ್​ನಿಂದ ಮುಜುಗರಕ್ಕೀಡಾಗಿರುವ ಕುಟುಂಬದವರು ವಿಚಾರಣೆಗೆ ಹಾಜರಾಗುವಂತೆ ಸಂಸದ ಪ್ರಜ್ವಲ್ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ಇರುವುದು ಬೇಡ ಎಂದು ಸಲಹೆ ನೀಡಿದ್ದಾರೆ. ಇದ್ರಿಂದ ಕುಟುಂಬ, ಪಕ್ಷಕ್ಕೆ ಮುಜುಗರ ಉಂಟು ಆಗ್ತಿದೆ. ಮೊದಲು ಎಸ್​ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸು. ಕಾನೂನು ಹೋರಾಟದಿಂದ ಸತ್ಯಾಂಶ ಹೊರಬರುತ್ತದೆ. ವಿಚಾರಣೆಗೆ ಹಾಜರಾಗದೇ ಕಾನೂನು ಹೋರಾಟಕ್ಕೆ ಮೊರೆ ಹೋದ್ರೆ ಮತ್ತಷ್ಟು ಸಮಸ್ಯೆಯಾಗುತ್ತದೆ. ಈಗಾಗಲೇ ಈ ಪ್ರಕರಣದಿಂದ ಸಾಕಷ್ಟು ಡ್ಯಾಮೇಜ್ ಆಗ್ತಿದೆ. ಕೂಡಲೇ ವಕೀಲರ ಜತೆ ಚರ್ಚಿಸಿ ವಿಚಾರಣೆಗೆ ಹಾಜರಾಗು ಎಂದು ಕುಟುಂಬದವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ