ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ: ಕೋಚ್ ಫೋನ್​ ನಲ್ಲಿ ಮಹಿಳೆಯರ 2500 ರಾಸಲೀಲೆ ವಿಡಿಯೋ

ಅತ್ಯಾಚಾರದ ಅಪರಾಧಿ ಪ್ರಜ್ವಲ್‌ ರೇವಣ್ಣ ಸಂತ್ರಸ್ತೆಯ ಜತೆ ತಾನು ನಡೆಸಿದ ಲೈಂಗಿಕ ಕ್ರಿಯೆಯ ವಿಡಿಯೊ ಪ್ರಕಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಮಹಿಳೆಯರ ಜೊತೆ ದೈಹಿಕ ಸಂಪರ್ಕದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಲ್ಲದೇ, ಅಸ್ತ್ರವಾಗಿ ಬಳಸಿ ದುಷ್ಕೃತ್ಯ ಮೆರೆದಿದ್ದಾನೆ. ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿರುವ ಸಾಕಷ್ಟು ವಿಡಿಯೋಗಳು ಇವೆ ಎಂದು ಹೇಳಲಾಗಿದ್ದು, ಕೆಲವು ಮಾತ್ರ ವೈರಲ್ ಆಗಿವೆ. ಇದೇ ಮಾದರಿಯ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ: ಕೋಚ್ ಫೋನ್​ ನಲ್ಲಿ ಮಹಿಳೆಯರ 2500 ರಾಸಲೀಲೆ ವಿಡಿಯೋ
ಪ್ರಾತಿನಿಧಿಕ ಚಿತ್ರ

Updated on: Sep 23, 2025 | 10:23 PM

ಬೆಂಗಳೂರು, (ಸೆಪ್ಟೆಂಬರ್ 23):  ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  (Prajwal Revanna) ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.   ಕ್ರಿಕೆಟ್ ಕೋಚ್ ಮತ್ತು ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎನ್ನುವಾತನ ವಿರುದ್ಧ ಮಹಿಳೆ ಆರೋಪಿಸಿದ್ದು, ಕೆಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣವನ್ನು ಮ್ಯಾಥ್ಯೂ ಸೆರೆ ಹಿಡಿದುಕೊಂಡಿದ್ದಾನೆ. ಸುಮಾರು 2500 ವಿಡಿಯೋಗಳಿವೆ ಎಂಬುವುದನ್ನು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಮ್ಯಾಥ್ಯೂ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾಳೆ ಎಂದು ತಿಳಿದುಬಂದಿದೆ.

ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಇದಲ್ಲದೇ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನು ಸಹ ಮ್ಯಾಥ್ಯೂ ಸೆರೆಹಿಡಿದುಕೊಂಡಿದ್ದು, ಒಟ್ಟು 2500 ವಿಡಿಯೋಗಳು ಆತನ ಬಳಿಯಿವೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಗಳ ಮುಂದೆಯೇ ಪತ್ನಿಗೆ 11 ಬಾರಿ ಇರಿದು ಕೊಂದ ಪತಿ: ಇಷ್ಟಪಟ್ಟು ಮದ್ವೆಯಾಗಿದ್ದವಳನ್ನ ಹತ್ಯೆಗೈದಿದ್ಯಾಕೆ?

ಸಂತ್ರಸ್ತೆಯ ದೂರಿನ ಪ್ರಕಾರ, ಮ್ಯಾಥ್ಯೂ ತನ್ನ ಖಾಸಗಿ ಕ್ಷಣಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದಾನೆ. ಈ ಆರೋಪಗಳಿಗೆ ಪುಷ್ಟಿ ನೀಡುವಂತೆ ಕೆಲವು ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳು ಸಂತ್ರಸ್ತೆಯ ಬಳಿಯಿವೆ. ಈ ವಿಡಿಯೋಗಳಲ್ಲಿ ಇತರ ಯುವತಿಯರು ಮತ್ತು ಮಹಿಳೆಯರ ಜೊತೆಗಿನ ದೃಶ್ಯಗಳೂ ಇವೆ ಎಂದು ಹೇಳಲಾಗಿದೆ.

ಸಂತ್ರಸ್ತೆಗೆ ಈಗಾಗಲೇ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ತನ್ನ ಪತಿಯಿಂದ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿರುವ ಈ ಮಹಿಳೆ, ತನ್ನ ಮಗಳು ಓದುತ್ತಿದ್ದ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ಪರಿಚಯವಾಗಿದೆ.ಮ್ಯಾಥ್ಯೂ ಆ ಶಾಲೆಯಲ್ಲಿ ಕ್ರಿಕೆಟ್ ಕೋಚ್ ಮತ್ತು ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಪರಿಚಯ ಬೆಳೆದು, ಕೆಲವು ಕಾಲ ಜೊತೆಯಾಗಿ ವಾಸಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯಂತೆ ಇಬ್ಬರು ಚರ್ಚ್‌ನ ಮುಂದೆ ಮದುವೆಯಾಗಿದ್ದಾರೆ. ಆದರೆ, ಈ ಸಂದರ್ಭದಲ್ಲಿ ದೈಹಿಕ ಸಂಪರ್ಕದ ಕ್ಷಣಗಳನ್ನು ಮ್ಯಾಥ್ಯೂ ರಹಸ್ಯವಾಗಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮದುವೆಯಾದ ನಂತರ ಮ್ಯಾಥ್ಯೂ ನ ನಿಜವಾದ ಸ್ವರೂಪ ತಿಳಿದುಬಂದಿದೆ ಎಂದು ಸಂತ್ರಸ್ತೆ ಹೇಳಿದ್ದಾಳೆ. “ನಾವು ಕೆಲ ವರ್ಷಗಳ ಕಾಲ ಜೊತೆಯಾಗಿದ್ದೆವು. ಆದರೆ, ಒಂದು ರಾತ್ರಿ ನಾನು ಮಲಗಿದ್ದಾಗ ನನ್ನ ಮೊಬೈಲ್ ಸಮೇತ ಆತ ಓಡಿಹೋಗಿದ್ದಾನೆ. ಆ ಮೊಬೈಲ್‌ನಲ್ಲಿ ಈತನ ಕೃತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಾಕ್ಷಿಗಳಿದ್ದವು ಎಂದು ಸಂತ್ರಸ್ತೆ ಹೇಳಿದ್ದಾಳೆ. ಇನ್ನು ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ತೆಗೆದುಕೊಳ್ಳಲುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದು, ಕೊನೆಗೆ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ಬಳಿಕ ಮಹಿಳೆ ಮಾಡಿರುವ ಆರೋಪದ ಸತ್ಯಾಸತ್ಯತೆ ಆಚೆ ಬರಲಿದೆ.

Published On - 9:07 pm, Tue, 23 September 25

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us