ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳು ಅಸಲಿ, FSL ವರದಿಯಲ್ಲಿ ಬಹಿರಂಗ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋಗಳ ಎಫ್​ಎಸ್​ಎಲ್​ ವರದಿ ಬಂದಿದ್ದು, ವಿಡಿಯೋಗಳು ಅಸಲಿ ಎಂದು ಬಹಿರಂಗವಾಗಿದೆ.

ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳು ಅಸಲಿ, FSL ವರದಿಯಲ್ಲಿ ಬಹಿರಂಗ
ಪ್ರಜ್ವಲ್ ರೇವಣ್ಣ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Aug 01, 2024 | 11:10 PM

ಬೆಂಗಳೂರು/ಹಾಸನ, (ಆಗಸ್ಟ್ 01): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅವು ಎಡಿಟ್ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ​ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್​, ಮಾರ್ಫ್​ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆದರೆ, ಆ ವಿಡಿಯೋ ನಕಲಿ, ವಿರೋಧಿಗಳು ಎಡಿಟ್, ಮಾರ್ಫಿಂಗ್​ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಎಸ್​ಐಟಿ ವಿಡಿಯೋಗಳ ಅಸಲಿಯತ್ತು ತಿಳಿಯಲು ಎಫ್​ಎಸ್​ಎಲ್​ಗೆ ಕಳುಹಿಸಿತ್ತು. ಇದೀಗ ವಿಡಿಯೋಗಳ ಎಫ್​ಎಸ್​ಎಲ್​ ವರದಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋ ಅಸಲಿ ಎಂಬುದು ಸಾಬೀತಾಗಿದೆ. ​​ ಇನ್ನು ವಿಡಿಯೋದಲ್ಲಿರುವ ವ್ಯಕ್ತಿಗೂ, ಬಂಧಿತ ಆರೋಪಿಯೇ ಎಂಬುದು ಇನ್ನೂ ಸಾಬೀತಾಗಿಲ್ಲ. ಈ ಸಂಬಂಧ ಇನ್ನಷ್ಟೇ ವರದಿ ಬರಬೇಕಿದೆ.

Published On - 11:08 pm, Thu, 1 August 24