ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​ಡ್ರೈವ್​ ಪ್ರಕರಣದಲ್ಲಿ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಅವರದ್ದೂ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಆಡಿಯೋ ಸಂಭಾಷಣೆಯೊಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ
ಎಲ್​ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on: May 20, 2024 | 10:19 AM

ಬೆಂಗಳೂರು, ಮೇ 20: ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​ಡ್ರೈಪ್ (Pen Drive)​ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎನ್ನಲಾಗಿರುವ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ (LR Shivaramegowda) ಅವರ ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ.

ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳು ಪೊಲೀಸರನ್ನು ಕಂಡು ಅವರ ಕಣ್ಣು ತಪ್ಪಿಸಿ ಎಲ್​ಆರ್ ಶಿವರಾಮೇಗೌಡ ಮನೆ ಮುಂದೆ 5-6 ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆದು ಹೋದ ಬಳಿಕ ಪೊಲೀಸರು ಎಲ್​ಆರ್​​ ಶಿವರಾಮೇಗೌಡ ಮನೆ ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದಾರೆ.

ಇದನ್ನೂ ಓದಿ: ಪೆನ್​ಡ್ರೈವ್​ ಕೇಸ್: ಶಿವರಾಮೇಗೌಡ, ದೇವರಾಜೇಗೌಡ, ಡಿಕೆಶಿ ​ಸೀಕ್ರೆಟ್ ಆಡಿಯೋ​ ವೈರಲ್

ಜೆಡಿಎಸ್​ ಪ್ರತಿಭಟನೆ

ಆಡಿಯೋ ಸಂಭಾಷಣೆಯೊಂದರಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನು ಖಂಡಿಸಿ ಇಂದು (ಮೇ 20) ಜೆಡಿಎಸ್ ನಾಯಕರು ಬೃಹತ್​ ಪ್ರತಿಭಟನೆ ಮಾಡಲಿದ್ದಾರೆ.

ಎಲ್​.ಆರ್​. ಶಿವರಾಮೇಗೌಡರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವಿಚಾರಣೆಗೊಳಪಡಿಸಬೇಕು. ಪೆನ್​​ಡ್ರೈವ್​ ಕೇಸ್ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿ ಬೆಳಗ್ಗೆ 11ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್​​​ನಲ್ಲಿ ಧರಣಿ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್