ಪ್ರಜ್ವಲ್​ ವಿಡಿಯೋ ಕೇಸ್: ಅಶ್ಲೀಲ ವಿಡಿಯೋ ಶೇರ್ ಮಾಡಿದ್ರೆ ಜೈಲಿಗೆ ಹೋಗ್ತೀರಿ ಹುಷಾರ್..!

|

Updated on: May 06, 2024 | 4:05 PM

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಬೆಳಕಿಗೆ ಬಂದಿದ್ದು, ಇದೀಗ ಒಬ್ಬರಿಂದ ಒಬ್ಬರಿಗೆ ಹಂಚಿಕೆಯಾಗಿ ಎಲ್ಲೆಡೆ ವೈರಲ್ ಆಗುತ್ತಿವೆ. ಹೌದು....ಸರ್ಕಾರಿ ಅಧಿಕಾರಿಗಳ ವಿಡಿಯೋ, ಫೋಟೋಸ್​ಗಳು ಸಹ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಎಚ್ಚೆತ್ತ ಎಸ್​ಐಟಿ ಅಧಿಕಾರಿಗಳು ವಿಡಿಯೋಗಳನ್ನು ಫಾರ್ವರ್ಡ್​ ಮಾಡುವುದನ್ನು ತಡೆಗಟ್ಟಲು ಮುಂದಾಗಿದೆ.

ಪ್ರಜ್ವಲ್​ ವಿಡಿಯೋ ಕೇಸ್: ಅಶ್ಲೀಲ ವಿಡಿಯೋ ಶೇರ್ ಮಾಡಿದ್ರೆ ಜೈಲಿಗೆ ಹೋಗ್ತೀರಿ ಹುಷಾರ್..!
Follow us on

ಬೆಂಗಳೂರು, (ಮೇ 06): ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಈಗಾಗಲೇ  ಆಚೆ ಬಂದು ಹತ್ತು ದಿನಗಳು ಕಳೆದಿದ್ದು, ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ. ಇದೀಗ ಎಚ್ಚೆತ್ತುಕೊಂಡಿರುವ ಎಸ್​ಐಟಿ(SIT),  ಹಾಸನ ಅಶ್ಲೀಲ ವಿಡಿಯೋಗಳನ್ನು ಒಬ್ಬರಿಂದ ಒಬ್ಬರಿಗೆ ಹಂಚಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ, ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧ. ವಾಟ್ಸಪ್ ಸೇರಿದಂತೆ ಸೋಶಿಯಲ್ ಮೀಡಿಯಾ ಮೂಲಕ ವಿಡಿಯೋಗಳನ್ನು ಕಳುಹಿಸುತ್ತಿರೋದು ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಎಸ್​ಐಟಿ ಈ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಎಲ್ಲಿದ್ದಾನೆ? ಸಿಎಂಗೆ SIT ನೀಡಿದ ಮಾಹಿತಿ ಏನು? ಇಲ್ಲಿದೆ ವಿವರ

ಎಸ್ಐಟಿ ಕೊಟ್ಟ ಎಚ್ಚರಿಕೆ ಏನು..?

  • ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣದ ಹಿನ್ನೆಲೆಯಲ್ಲಿ ಈ ಪ್ರಕಟಣೆಯನ್ನು ಹೊರಡಿಸಲಾಗುತ್ತಿದೆ.
  • ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚುವುದು ಮಾಹಿತಿ 67(2) 2ಎ 0 2282(1), 292 244 2 ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.
  • ಇದು ಸಂಬಂಧಿಸಿದ ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು.
    ಸದರಿ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಸ್ ಲೈನ್ 6360938947 ಈ ನಂಬರ್ ಅನ್ನು ಬೆಳಿಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್ ಐ ಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು.
  • ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.
  • ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು. ಹಿಂಜರಿಯಬೇಕಾದ್ದು, ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್ ಐ ಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರುಗಳು, ವೈದ್ಯರುಗಳು, ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್ ಐ ಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ.

ಸಂತ್ರಸ್ತೆ ಮಹಿಳೆಯರ ಘನತೆ ಕಾಪಾಡುವ ದೃಷ್ಟಿಯಿಂದ ಎಸ್​ಐಟಿ ಈ ಕ್ರಮಕ್ಕೆ ಮುಂದಾಗಿದ್ದು, ಒಂದು ವೇಳೆ ಯಾರಾದರೂ ವಾಟ್ಸಪ್ ಅಥವಾ ಇತರೆ ಮಾಧ್ಯಮಗಳ ಮೂಲಕ ಒಬ್ಬರಿದೊಬ್ಬರಿಗೆ ವಿಡಿಯೋಗಳನ್ನು ಶೇರ್ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಐಟಿ ತಿಳಿಸಿದೆ. ಹೀಗಾಗಿ ವಿಡಿಯೋ ಶೇರ್​ ಮಾಡುವವರು ಎಚ್ಚರಿಕೆಯಿಂದ ಇರುವುದು ಒಳಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ