ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ಪ್ರತಿಕ್ರಿಯೆಗಳಿವು

BJP leaders reaction on Prajwal Revanna Pen Drive Scandal: ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎನ್ನುವ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್ ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಎಲ್ಲರೂ ಸಮಾನರು ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಪ್ರಜ್ವಲ್​ಗೆ ಟಿಕೆಟ್ ಕೊಟ್ಟಿರುವುದು ಬಿಜೆಪಿಯಲ್ಲ, ಜೆಡಿಎಸ್ ಎಂದು ಹೇಳಿದ್ದಾರೆ.

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ಪ್ರತಿಕ್ರಿಯೆಗಳಿವು
ಪ್ರಜ್ವಲ್ ರೇವಣ್ಣ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 29, 2024 | 11:35 AM

ಬೆಂಗಳೂರು/ಹುಬ್ಬಳ್ಳಿ, ಏಪ್ರಿಲ್ 29: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ (Prajwal Revanna sex scandal) ವಿಚಾರ ರಾಜ್ಯದಲ್ಲಿ ರಾಜಕೀಯ ಜಂಗೀಕುಸ್ತಿಗೆ ಎಡೆ ಮಾಡಿಕೊಡುತ್ತಿದೆ. ಮೇ 7ರಂದು 14 ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿ ಇರುವುದರಿಂದ ಜೆಡಿಎಸ್ ಮಿತ್ರ ಪಕ್ಷವಾಗಿ ಬಿಜೆಪಿಗೆ ಈ ವಿಚಾರ ಮಗ್ಗುಲ ಮುಳ್ಳಾಗುತ್ತಿರುವಂತೆ ತೋರುತ್ತಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆದರೂ ಪಕ್ಷದಿಂದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು, ಈ ಬಗ್ಗೆ ಪ್ರಕ್ರಿಯಿಸಿರುವ ಬಿಜೆಪಿಯ ಕೆಲ ನಾಯಕರು, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವಿಪಕ್ಷ ನಾಯಕ ಆರ್. ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್​ಐಟಿ ರಚಿಸಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಅಶೋಕ್ ಹೇಳಿದ್ದಾರೆ. ಇನ್ನು, ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎನ್ನುವ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ- ಕುಮಾರಸ್ವಾಮಿ ಹೇಳಿಕೆ

ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬಾಗಲಕೋಟೆಯಲ್ಲಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದು, ಎಸ್​ಐಟಿ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ ಎನ್ನುವುದು ಬಿಜೆಪಿ ಭಾವನೆ: ಸಿಟಿ ರವಿ

ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಸಿ.ಟಿ. ರವಿ, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದಿದ್ದಾರೆ.

ಕಾನೂನು ತಮಗೆ ಅನ್ವಯ ಆಗಬಾರದು ಎಂದು ಕಾಂಗ್ರೆಸ್ ಭಾವಿಸುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ತಮ್ಮ ಭಾವನೆ ಎಂದು ಹೇಳಿದ ಸಿ.ಟಿ. ರವಿ, ಈ ಪ್ರಕರಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತೆ ಎಂದು ಹೇಳಲು ಆಗಲ್ಲ. ಹಾಗೆಯೇ ಪರಿಣಾಮ ಬೀರುವುದಿಲ್ಲ ಎಂದಲೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ; ಪರಮೇಶ್ವರ

‘2019ರಲ್ಲಿ ಹಾಸನದಲ್ಲಿ ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿದ್ದರು. ಆವತ್ತು ಅವರ ಜೊತೆ ಕಾಂಗ್ರೆಸ್ ಇತ್ತು. ನಾವು ವಿರೋಧವಾಗಿ ಅಭ್ಯರ್ಥಿ ಹಾಕಿದ್ದೆವು. ಇದೀಗ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟಿರುವುದು ನಾವಲ್ಲ, ಜೆಡಿಎಸ್’ ಎಂದು ಹುಬ್ಬಳ್ಳಿಯಲ್ಲಿ ಸಿ.ಟಿ. ರವಿ ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ