ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣನನ್ನು ಬಂಧಿಸುವುದು ಬಲು ಸುಲಭ: ಸಿದ್ದರಾಮಯ್ಯಗೆ ಕಾನೂನು ಪಾಠ ಮಾಡಿದ ಅಣ್ಣಾಮಲೈ

Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಸಿದೆ. ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಹೊತ್ತಿದ್ದಾರೆ. ಸದ್ಯ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಅವರನ್ನು ಕರೆತರುವ ಮಾರ್ಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ತೋರಿಸಿದ್ದಾರೆ.

ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣನನ್ನು ಬಂಧಿಸುವುದು ಬಲು ಸುಲಭ: ಸಿದ್ದರಾಮಯ್ಯಗೆ ಕಾನೂನು ಪಾಠ ಮಾಡಿದ ಅಣ್ಣಾಮಲೈ
ಸಿದ್ದರಾಮಯ್ಯ, ಅಣ್ಣಮಲೈ
Follow us
ವಿವೇಕ ಬಿರಾದಾರ
|

Updated on:May 04, 2024 | 9:11 AM

ಬೆಂಗಳೂರು, ಮೇ 04: ರಾಜ್ಯದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಮತ್ತು ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದಾರೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಶೋಕಾಸ್​​ ನೋಟಿಸ್​ ನೀಡಿದೆ. ಆರೋಪಿ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಪತ್ರ ಬರೆದಿದ್ದಾರೆ. ಇದಕ್ಕೆ ಮಾಜಿ ಐಪಿಎಸ್​ ಅಧಿಕಾರಿ, ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರ್ಯವಿಧಾನದ ಪ್ರಕಾರ, ಎಸ್​ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್​ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್​ ಕಾರ್ನರ್​ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್​ಪೋಲ್​ (International Police Agency) ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು.

ಬಳಿಕ ರೆಡ್​​ ಕಾರ್ನರ್​ ಜಾರಿಗೊಳಿಸಲಾಗುತ್ತದೆ. ಆಗ ಆರೋಪಿ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೆ ಕೂಡಲೆ ಅವನನ್ನು ಅಲ್ಲಿನ ಪೊಲೀಸರು ಬಂಧಿಸುತ್ತಾರೆ. ಬಳಿಕ ಆರೋಪಿ ಬೇಕಾಗಿರುವ ಠಾಣೆಗೆ ಮಾಹಿತಿ ನೀಡುತ್ತಾರೆ. ನಾನು ಕರ್ನಾಟಕದ ಸೇವೆ ಸಲ್ಲಿಸುತ್ತಿರುವಾಗ ಭೂಗತ ಪಾತಕಿ ಬನ್ನಂಜೆ ರಾಜನನ್ನು ಮೊರಾಕೊದಿಂದ ಪ್ರಧಾನಿಗೆ ಯಾವುದೇ ಪತ್ರ ಬರೆಯದೆ ಬಂಧಿಸಿ ಕರೆತಂದೆವು ಎಂದು ತಿಳಿಸಿದರು.

ಇದನ್ನೂ ಓದಿ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

ದೇಶದ ಪೊಲೀಸ್​ ಇತಿಹಾಸದಲ್ಲೇ ಇಂಟರ್​ಪೋಲ್ ಮೂಲಕ ಆರೋಪಿಯನ್ನು ಬಂದಿಸಿ ಕರೆತಂದಿದ್ದು ಕರ್ನಾಟಕ ಪೊಲೀಸ್​​. 2015ರಲ್ಲಿ ಡಿಜಿಪಿ ಪ್ರತಾಪ್​ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇದು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಾರೆ. ಇದು ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಈ ವಿಚಾರದಲ್ಲಿ ಏನು ಹೇಳಬೇಕು ಎಂಬುದನ್ನು ನಮ್ಮ ನಾಯಕರು ಈಗಾಗಲೇ ಹೇಳಿದ್ದಾರೆ. ನಾವು ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಅಥವಾ ಯಾವುದೇ ಅಡೆತಡೆಗಳನ್ನು ಹಾಕುತ್ತಿಲ್ಲ. ಈ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸ್ವತಂತ್ರವಾಗಿದೆ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:44 am, Sat, 4 May 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ