ಬೆಂಗಳೂರು, ಮೇ 04: ರಾಜ್ಯದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ (HD Revanna) ಮತ್ತು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಶೋಕಾಸ್ ನೋಟಿಸ್ ನೀಡಿದೆ. ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಪತ್ರ ಬರೆದಿದ್ದಾರೆ. ಇದಕ್ಕೆ ಮಾಜಿ ಐಪಿಎಸ್ ಅಧಿಕಾರಿ, ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರ್ಯವಿಧಾನದ ಪ್ರಕಾರ, ಎಸ್ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್ಪೋಲ್ (International Police Agency) ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು.
ಇದಕ್ಕೆ ಉತ್ತರ ಕೊಡಿ ಸಿದ್ದರಾಮಯ್ಯನವರೆ @siddaramaiah ಪ್ರಜ್ವಲ್ ರೇವಣ್ಣನನ್ನ ಬಂಧಿಸಬೇಕಾಗಿದ್ದು ಯಾರು..?!
ಎಲ್ಲದಕ್ಕೂ ಮೋದಿನ ಟ್ಯಾಗ್ ಮಾಡೋ 12th ಫೇಲ್ ಪ್ರಾಂಕಣ್ಣ @PriyankKharge ಉತ್ತರ ಇದಿಯಾ ಇದಕ್ಕೆ..?!😐#PrajwalRevanna #KarnatakaPoliticspic.twitter.com/sG0rmhZKRi
— Akshay Akki (Modi Ji’s Family) (@FollowAkshay1) May 3, 2024
ಬಳಿಕ ರೆಡ್ ಕಾರ್ನರ್ ಜಾರಿಗೊಳಿಸಲಾಗುತ್ತದೆ. ಆಗ ಆರೋಪಿ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೆ ಕೂಡಲೆ ಅವನನ್ನು ಅಲ್ಲಿನ ಪೊಲೀಸರು ಬಂಧಿಸುತ್ತಾರೆ. ಬಳಿಕ ಆರೋಪಿ ಬೇಕಾಗಿರುವ ಠಾಣೆಗೆ ಮಾಹಿತಿ ನೀಡುತ್ತಾರೆ. ನಾನು ಕರ್ನಾಟಕದ ಸೇವೆ ಸಲ್ಲಿಸುತ್ತಿರುವಾಗ ಭೂಗತ ಪಾತಕಿ ಬನ್ನಂಜೆ ರಾಜನನ್ನು ಮೊರಾಕೊದಿಂದ ಪ್ರಧಾನಿಗೆ ಯಾವುದೇ ಪತ್ರ ಬರೆಯದೆ ಬಂಧಿಸಿ ಕರೆತಂದೆವು ಎಂದು ತಿಳಿಸಿದರು.
ಇದನ್ನೂ ಓದಿ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ
ದೇಶದ ಪೊಲೀಸ್ ಇತಿಹಾಸದಲ್ಲೇ ಇಂಟರ್ಪೋಲ್ ಮೂಲಕ ಆರೋಪಿಯನ್ನು ಬಂದಿಸಿ ಕರೆತಂದಿದ್ದು ಕರ್ನಾಟಕ ಪೊಲೀಸ್. 2015ರಲ್ಲಿ ಡಿಜಿಪಿ ಪ್ರತಾಪ್ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇದು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಾರೆ. ಇದು ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಈ ವಿಚಾರದಲ್ಲಿ ಏನು ಹೇಳಬೇಕು ಎಂಬುದನ್ನು ನಮ್ಮ ನಾಯಕರು ಈಗಾಗಲೇ ಹೇಳಿದ್ದಾರೆ. ನಾವು ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಅಥವಾ ಯಾವುದೇ ಅಡೆತಡೆಗಳನ್ನು ಹಾಕುತ್ತಿಲ್ಲ. ಈ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸ್ವತಂತ್ರವಾಗಿದೆ ಎಂದು ಹೇಳಿದರು.
ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 8:44 am, Sat, 4 May 24