AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕರ ಒತ್ತಾಯ

ಹಾಸನ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಇದೀಗ ಪ್ರಜ್ವಲ್​ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹ ಕೇಳಿ ಬರುತ್ತಿದೆ.

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕರ ಒತ್ತಾಯ
ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು
TV9 Web
| Updated By: ವಿವೇಕ ಬಿರಾದಾರ|

Updated on:Apr 29, 2024 | 12:07 PM

Share

ಬೆಂಗಳೂರು, ಏಪ್ರಿಲ್​ 29: ಹಾಸನ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು (Sharanagouda Kandakur) ಅವರು ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ (HD Devegowda) ಪತ್ರ ಬರೆದು, ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.

ಕೆಲ ದಿನಗಳಿಂದ ಹರದಾಡುತ್ತಿರುವ ವಿಡಿಯೋದಿಂದ ಮುಜುಗರವಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ತಪ್ಪಿತಸ್ಥರು ಎಂಬ ಭಾವನೆ ಉಂಟಾಗಿದೆ. ದೇವೇಗೌಡರು, ಹೆಚ್​ಡಿ ಕುಮಾರಸ್ವಾಮಿ ಅವರು ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು. ಲಾಟರಿ ನಿಷೇಧಿಸಿ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ. ಪಕ್ಷದ ಚಿಹ್ನೆಯಲ್ಲಿ ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಇದೆ. ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಹೆಣ್ಣಿನ ಗೌರವವನ್ನ ಪ್ರತಿಪಾದಿಸುತ್ತೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವುದು ಸುಳ್ಳಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ರಚಿಸಿದೆ. ಪಕ್ಷ ಕೂಡ ಆಂತರಿಕ ಸಮಿತಿ ರಚನೆ ಮಾಡಿ ಸತ್ಯಾಸತ್ಯ ತಿಳಿಸಬೇಕು.ಈ ಪ್ರಕರಣದಿಂದ ಸದ್ಯ ಜೆಡಿಎಸ್​​​ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಪಕ್ಷದ ಮುಜುಗರ ತಪ್ಪಿಸಲು ಪ್ರಜ್ವಲ್​ರನ್ನ​ ಅಮಾನತುಗೊಳಿಸಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಪಕ್ಷದಿಂದ ಉಚ್ಛಾಟನೆ ಮಾಡಿ: ಸಮೃದ್ಧಿ ಮಂಜುನಾಥ್

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತ ಕೆಲಸ ಮಾಡಿದವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ. ಇತ್ತಿಚಿನ ದಿನಗಳಲ್ಲಿ ಹಾಸನದ ಲೀಲೆಗಳು ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ ಎಂದು ಜೆಡಿಎಸ್​ ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದರು.

ಇದನ್ನೂ ಓದಿ:  ಪ್ರಜ್ವಲ್​ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಎಸ್​ಐಟಿ ರಚಿಸಿದ ಸರ್ಕಾರ, ಹೀಗಿದೆ ತನಿಖಾ ತಂಡ

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ?? ಮಾನ್ಯ ವರಿಷ್ಠರು ರಾಷ್ಟ್ರಾಧ್ಯಕ್ಷರು ಹೆಚ್.ಡಿ.ದೇವೇಗೌಡ  ಅವರು, ರಾಜ್ಯಾಧ್ಯಕ್ಷರು ಹೆಚ್.ಡಿ.ಕುಮಾರಸ್ವಾಮಿರವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ.  ನಿಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ 19 ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು ಪ್ರಜ್ವಲ್ ರವರು ಮುಖ್ಯವೋ ತೀರ್ಮಾನಿಸಬೇಕಿದೆ ಎಂದರು.

24 ಗಂಟೆಗಳಲ್ಲಿ ಆರೋಪ ಹೊರಿರುವ ರೇವಣ್ಣ ಮತ್ತು ಪ್ರಜ್ವಲ್ ರವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ಸಿದ್ಧಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ. ನಿಮ್ಮ ತೀರ್ಮಾನದ ಮೇಲೆ ಪಕ್ಷದ ಮುಂದಿನ ಭವಿಷ್ಯವಿದೆಯೆಂಬುದು ಮತ್ತೊಮ್ಮೆ ತಿಳಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:39 am, Mon, 29 April 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ