AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಪ್ರಕರಣ: ವಿದೇಶದಿಂದ ಬೆಂಗಳೂರು ಬದಲು ಮಂಗಳೂರಿಗೆ ಬರುವ ಪ್ರಜ್ವಲ್​ ರೇವಣ್ಣ?

Prajwal Revanna Sexual Assault Case: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಈ ಮೊದಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎನ್ನುವ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಸಹ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆಯಲು ಪ್ರಜ್ವಲ್​ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಿಮಾನ ಬರುವ ದಾರಿ ಕಾಯುತ್ತಿದ್ದಾರೆ. ಆದರೆ, ಇದೀಗ ಪ್ರಜ್ವಲ್​ ಬೆಂಗಳೂರು ಬದಲಿಗೆ ಮಂಗಳೂರಿನಲ್ಲಿ ಲ್ಯಾಂಡ್​ ಆಗಲಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.

ಅಶ್ಲೀಲ ವಿಡಿಯೋ ಪ್ರಕರಣ: ವಿದೇಶದಿಂದ ಬೆಂಗಳೂರು ಬದಲು ಮಂಗಳೂರಿಗೆ ಬರುವ ಪ್ರಜ್ವಲ್​ ರೇವಣ್ಣ?
ಸಂಸದ ಪ್ರಜ್ವಲ್​ ರೇವಣ್ಣ
TV9 Web
| Edited By: ವಿವೇಕ ಬಿರಾದಾರ|

Updated on: May 05, 2024 | 6:18 PM

Share

ಬೆಂಗಳೂರು, ಮೇ 05: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ವಿದೇಶದಲ್ಲಿದ್ದು, ಇಂದು (ಮೇ 05) ಮಂಗಳೂರು ವಿಮಾನ ನಿಲ್ದಾಣಕ್ಕೆ (Mangaluru International Airport) ಬರುವ ಸಾಧ್ಯತೆ ಇದೆ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಲಿದ್ದು, ಹಾಸನಕ್ಕೆ ಕರೆತರುವ ಸಾಧ್ಯತೆ ಇದೆ.

ಸಂಜೆ 4.25ಕ್ಕೆ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನದಲ್ಲೂ ಸಂಸದ ಪ್ರಜ್ವಲ್ ರೇವಣ್ಣ ಬಂದಿಲ್ಲ. ಇನ್ನು ಪ್ರಜ್ವಲ್ ರೇವಣ್ಣ ಅವರು ಸಂಜೆ 6.15ಕ್ಕೆ ಬರುವ ವಿಮಾನದ ಟಿಕೆಟ್​ ಅನ್ನು​ ಕೂಡ ಬುಕ್ ಮಾಡಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಲು ಎಸ್​ಐಟಿ ಅಧಿಕಾರಿಗಳು ಈಗಾಗಲೆ ಲುಕ್​ ಔಟ್ ನೋಟೀಸ್ ಜಾರಿ ಮಾಡಿದ್ದಾರೆ. ಪ್ರಜ್ವಲ್​ ರೇವಣ್ಣ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದಿಳದರೂ, ಅಲ್ಲಿ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುತ್ತಾರೆ.

ಲುಕ್ ಔಟ್ ನೋಟೀಸ್ ಎಂದರೇನು?

ಕ್ರಿಮಿನಲ್ ಪ್ರಕರಣಗಳಲ್ಲಿ ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಜಾರಿಗೊಳಿಸಲಾಗುವ ವಿಶೇಷವಾದ ನೋಟಿಸ್ ಇದು. ಇದನ್ನು ಲುಕ್ ಔಟ್ ಸರ್ಕ್ಯೂಲರ್ ಎಂದೂ ಕರೆಯಲಾಗುತ್ತದೆ. ಸಾಮಾನ್ಯವಾಗಿ ಇದನ್ನು ವಿದೇಶಾಂಗ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಬ್ಯೂರೋ ಆಫ್ ಇಮಿಗ್ರೇಷನ್ ಜಾರಿಗೊಳಿಸುತ್ತದೆ.

ಇದನ್ನೂ ಓದಿ: ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್​ಗೆ ಬಿಗ್ ಟ್ವಿಸ್ಟ್: ಗೊಂದಲದ ಹೇಳಿಕೆ ನೀಡುತ್ತಿರುವ ಸಂತ್ರಸ್ತೆ

ಯಾವುದೇ ರಾಜ್ಯಗಳಲ್ಲಿ ಸಂಭವಿಸಿದ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ, ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆ ಹಚ್ಚಲು, ಆಯಾ ರಾಜ್ಯ ಸರ್ಕಾರಗಳ ಅಧೀನ ಕಾರ್ಯದರ್ಶಿ ಹಾಗೂ ಅದಕ್ಕೆ ತತ್ಸಮಾನ ಹುದ್ದೆಗಳಲ್ಲಿರುವ ಅಧಿಕಾರಿಗಳು ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ಮನವಿ ಸಲ್ಲಿಸಿದರೆ ಮಾತ್ರ ಇಂಥ ನೋಟಿಸ್ ಜಾರಿಗೊಳಿಸುತ್ತದೆ.

ರಾಜ್ಯ ಸರ್ಕಾರಗಳು ರಚನೆ ಮಾಡುವ ವಿಶೇಷ ತನಿಖಾ ತಂಡಗಳಿಗೂ (ಎಸ್ಐಟಿ) ಇಂಥ ಲುಕ್ಔಟ್ ನೋಟಿಸ್ ಜಾರಿಗೊಳಿಸಲು ಅವಕಾಶವಿದೆ. ಇದು ಜಾರಿಯಾಗುತ್ತಲೇ ಆ ಆರೋಪಿಯ ಬಗೆಗಿನ ಎಲ್ಲಾ ವಿವರಗಳು, ಯಾವುದೇ ದೇಶವನ್ನು ಪ್ರವೇಶಿಸಲು ಇರುವ ಮಾರ್ಗಗಳಾದ ವಿಮಾನ ನಿಲ್ದಾಣಗಳು, ಬಂದರುಗಳು, ಅಂತಾರಾಷ್ಟ್ರೀಯ ಹೆದ್ದಾರಿಗಳ ಚೆಕ್ ಪಾಯಿಂಟ್​ಗಳನ್ನು ತಲುಪುತ್ತವೆ. ವಿದೇಶದಲ್ಲಿರುವ ಆರೋಪಿಯು ತನ್ನ ವೀಸಾ ಅವಧಿ ಮುಗಿದ ನಂತರ ಇಮಿಗ್ರೇಷನ್ ವಿಭಾಗವನ್ನು ಸಂಪರ್ಕಿಸಲೇಬೇಕು. ಆಗ ಆತನನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್