ಅಶ್ಲೀಲ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿ

Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಯಾಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯರ ನೆರವಿಗಾಗಿ ವಿಶೇಷ ತನಿಖಾ ತಂಡ ಸಹಾಯವಾಣಿ ತೆರೆದಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿ
ಸಂತ್ರಸ್ತೆಯರಿಗಾಗಿ ಸಹಾಯವಾಣಿ
Follow us
| Updated By: ವಿವೇಕ ಬಿರಾದಾರ

Updated on:May 05, 2024 | 8:20 PM

ಬೆಂಗಳೂರು, ಮೇ 05: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ವಿಡಿಯೋದಲ್ಲಿನ ಸಂತ್ರಸ್ತೆಯರ ನೆರವಿಗಾಗಿ ವಿಶೇಷ ತನಿಖಾ ತಂಡ (SIT) ಸಹಾಯವಾಣಿ ತೆರೆದಿದೆ. ಯಾರೇ ಸಂತ್ರಸ್ತರು ಹಾಗೂ ಭಾತ್ಮೀದಾರರಿಗೆ (ಮಾಹಿತಿದಾರರಿಗೆ) ಅವರಿಗೆ ಕಾನೂನು ನೆರವು, ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾಗಿದ್ದಲ್ಲಿ ಸಹಾಯವಾಣಿ ಸಂಖ್ಯೆ 6360938947 ಕರೆ ಮಾಡುವಂತೆ ಎಸ್​ಐಟಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಕೇಸ್​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರು, ನಾನವಳಲ್ಲ ಎಂಬ ಉತ್ತರವನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೆಲ ಸಂತ್ರಸ್ತೆಯರು ಮರ್ಯಾದೆಗೆ ಹೆದರಿ ವಿಚಾರಣೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್​ಐಟಿ ಸಂಸ್ರಸ್ತೆರಿಗಾಗಿ ಸಹಾಯವಾಣಿ ಆರಂಭಿಸಿದೆ.

ಸಂತ್ರಸ್ತೆ ಹೇಳಿಕೆ ಬಹುಮುಖ್ಯ…

ಇಂದು ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮೊದಲೇ ಸಂತ್ರಸ್ತೆ ಮಹಿಳೆಯಿಂದ ಮಾಹಿತಿ ಮತ್ತು ಹೇಳಿಕೆಯನ್ನು ಪಡೆದಿದ್ದಾರೆ. ಈ ಹೇಳಿಕೆ ಪ್ರಕರಣದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಒಂದು ವೇಳೆ ಮಹಿಳೆ ಕಿಡ್ನಾ ಮಾಡಿ ತನಗೆ ಬೆದರಿಕೆ ಹಾಕಿದ್ದರು. ತನ್ನ ಮೇಲೆ ಅತ್ಯಾಚಾರ ಆಗಿದೆ ಈ ವಿಚಾರ ಹೊರ ಬಾರದಂತೆ ತಡೆದರು ಎಂದು ಹೇಳಿಕೆ ನೀಡಿ ಸಾಕ್ಷಾ ನೀಡಿದ್ದರೇ ರೇವಣ್ಣ ಕುಟುಂಬಕ್ಕೆ ಸಂಕಷ್ಟ ಎದುರಾಗಲಿದೆ.

ಇಲ್ಲ ತಾನಾಗಿಯೇ ಹೋಗಿದ್ದೆ ಯಾವ ಒತ್ತಡ ಇರಲಿಲ್ಲ ಎಂದು ಹೇಳಿಕೆ ನೀಡಿದ್ರೆ ಮಾತ್ರ ರೇವಣ್ಣ ಮತ್ತು ಕುಟುಂಬಕ್ಕೆ ಕೊಂಚ ರಿಲೀಫ್​ ಸಿಕ್ಕಂತಾಗುತ್ತದೆ. ಸದ್ಯ ಕಿಡ್ನಾಪ್ ಆಗಿದ್ದ ಮಹಿಳೆ ಹೇಳಿಕೆ ಹಾಗೂ ಇತರ ಸಾಕ್ಷಿಗಳ ಮೇಲೆ ರೇವಣ್ಣ ಮತ್ತು ಪುತ್ರ ಪ್ರಜ್ವಲ್​ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ಸಂತ್ರಸ್ತೆ ಮಹಿಳೆ ಎಸ್​ಐಟಿ ಮುಂದೆ ಏನೆಲ್ಲಾ ಹೇಳಲಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Sun, 5 May 24