ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜಿ.ಪಂ ಮಾಜಿ ಸದಸ್ಯೆಗೆ ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಮೂರನೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಮೂರನೇ ಚಾರ್ಜ್​ಶೀಟ್​ನಲ್ಲಿ ಪ್ರಜ್ವಲ್​ ರೇವಣ್ಣ ಕಾಮಕಾಂಡ ಬಯಲಾಗಿದೆ.

ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜಿ.ಪಂ ಮಾಜಿ ಸದಸ್ಯೆಗೆ ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯ
ಪ್ರಜ್ವಲ್​ ರೇವಣ್ಣ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Sep 14, 2024 | 9:23 AM

ಬೆಂಗಳೂರು, ಸೆಪ್ಟೆಂಬರ್​ 14: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ವಿರುದ್ಧ ಮೂರನೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಜಿಲ್ಲಾ ಪಂಚಾಯತ್​​ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್​ಐಟಿ (SIT) 120 ಸಾಕ್ಷಿಗಳ 1691 ಪುಟಗಳ ಚಾರ್ಜ್​ಶೀಟ್​ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ​ಸಲ್ಲಿಕೆ ಮಾಡಿದೆ. ಎಸ್​ಐಟಿ ಚಾರ್ಜ್​​ಶೀಟ್​ನಲ್ಲಿ ಪ್ರಜ್ವಲ್​ ರೇವಣ್ಣ ಕಾಮಕಾಂಡ ಬಯಲಾಗಿದೆ.

ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್​​ ಪಕ್ಷದ ಮಾಜಿ ಜಿಲ್ಲಾ ಪಂಚಾಯತ್​ ಸದಸ್ಯೆ ಮೇಲೆ ಪ್ರಜ್ವಲ್​ ರೇವಣ್ಣ ಅತ್ಯಾಚಾರ ಎಸಗಿರುವುದು ಎಸ್​ಐಟಿ ತನಿಖೆಯಲ್ಲಿ ಸಾಬೀತಾಗಿದೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರಿಗೆ ಸರ್ಕಾರ ಹಂಚಿಕೆ ಮಾಡಿದ್ದ ಹಾಸನದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅತಿಥಿ ಗೃಹದಲ್ಲಿ ಪ್ರಜ್ವಲ್​ ರೇವಣ್ಣ ಅತ್ಯಾಚಾರ ಎಸಗಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ ಸೀರೆ, ಬ್ಲೌಸ್ ಬಿಚ್ಚಿಸಿ ದೌರ್ಜನ್ಯ: ಚಾರ್ಜ್​ಶೀಟ್​ನಲ್ಲಿ ಬಯಲಾಯ್ತು ಪ್ರಜ್ವಲ್ ರೇವಣ್ಣ ಕರ್ಮಕಾಂಡ

ಪ್ರಜ್ವಲ್​ ರೇವಣ್ಣ ವಿಕೃತಿ

ಪ್ರಜ್ವಲ್​ ರೇವಣ್ಣ ತನ್ನ ಕಾಮತೃಷೆ ತೀರಿಸಿಕೊಳ್ಳಲು ಸಂತ್ರಸ್ತೆ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದಲ್ಲದೇ ಮಹಿಳೆಗೆ ವಿಡಿಯೋ ಕರೆ ಕೂಡ ಮಾಡುತ್ತಿದ್ದರು. ಈ ವೇಳೆ ಸಂತ್ರಸ್ತೆಗೆ ತಿಳಿಯದಂತೆ ನಗ್ನ ಫೋಟೋಗಳ ಸ್ಕ್ರೀನ್​ ಶಾಟ್​ಗಳನ್ನು ತೆಗೆಯುತ್ತಿದ್ದರು. ಇನ್ನು ಅತ್ಯಚಾರದ ವೇಳೆ ಅಳಬಾರದು ನಗಬೇಕು ಎಂದು ಹೇಳಿ ವಿಕೃತವಾಗಿ ವರ್ತಿಸಿದ್ದರು. ನಗ್ನ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದರು. ಹೊಳೆನರಸೀಪುರದ ಮನೆಗೂ ಕರೆಸಿ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರೋದು ದೃಢವಾಗಿದೆ. ತಾನು ಹೇಳಿದ ಬಟ್ಟೆ, ಒಳಉಡುಪು ಧರಿಸಬೇಕು ಎಂದು ಸಂತ್ರಸ್ತೆಗೆ ಪ್ರಜ್ವಲ್​ ರೇವಣ್ಣ ಹೇಳುತ್ತಿದ್ದರು. 2020ರಿಂದ 2023ರವರೆಗೂ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ.

ಹೊಳೆನರಸೀಪುರದಲ್ಲಿರುವ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರ ಚೆನ್ನಾಂಬಿಕ ಹೆಸರಿನ ನಿವಾಸಕ್ಕೆ ಪ್ರಜ್ವಲ್​ ರೇವಣ್ಣ 2020ರ ಒಂದು ಮಧ್ಯಾಹ್ನ 12.30ರ ಸಮಯದಲ್ಲಿ ಸಂತ್ರಸ್ತೆಯನ್ನು ಕರೆಸಿಕೊಂಡಿದ್ದರು. ಮನೆಯ ಮೂರನೇ ಮಹಡಿಯ ಕೋಣೆಯಲ್ಲಿ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡು, ಈ ವಿಷಯವನ್ನು ಹೊರಗೆ ಹೇಳಿದರೆ ವಿಡಿಯೊಗಳನ್ನು ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಎಸ್​ಐಟಿ ಉಲ್ಲೇಖಿಸಿದೆ.

ಪ್ರಜ್ವಲ್ ರೇವಣ್ಣ ಕೃತ್ಯಕ್ಕೆ ಸಾಕ್ಷಿ ಓರ್ವ ಶಾಸಕ

2022ರಲ್ಲಿ ಬೇಲೂರಿನ ಕಾರ್ಯಕ್ರಮಯೊಂದರಲ್ಲಿ ಸಂತ್ರಸ್ಥೆ, ಪ್ರಜ್ವಲ್ ರೇವಣ್ಣ ಮತ್ತು ಬೇಲೂರು ಶಾಸಕ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಪ್ರಜ್ವಲ್ ರೇವಣ್ಣ ಸಂತ್ರಸ್ತೆಗೆ ಕರೆ ಮಾಡಿ ಅತಿಥಿ ಗೃಹಕ್ಕೆ ಬರಲು ಒತ್ತಡ ಹೇರಿದ್ದಾರೆ. ಅತಿಥಿ ಗೃಹಕ್ಕೆ ಹೋಗಿದ್ದ ಸಂತ್ರಸ್ಥೆಯ ಮೇಲೆ ಪ್ರಜ್ವಲ್​​ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಬೇಲೂರು ಶಾಸಕ ಎಸ್​ಐಟಿ ಮುಂದೆ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:50 am, Sat, 14 September 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು