AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಬಿಜೆಪಿ ಮುಖಂಡ, ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಬಿಜೆಪಿ ಮುಖಂಡ, ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ
ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: ಬಿಜೆಪಿ ಮುಖಂಡ, ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಗಂಗಾಧರ​ ಬ. ಸಾಬೋಜಿ|

Updated on:May 10, 2024 | 9:52 PM

Share

ಬೆಂಗಳೂರು, ಮೇ 10: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (DevarajGowda) ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಸಂಬಂಧ ಕೇಸ್ ದಾಖಲಾಗಿತ್ತು. ಇಂದು ಅದೇ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ವಕೀಲ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್​ನ ವಿಚಾರಗಳು ಬಹಿರಂಗವಾಗಿವೆ. ಏಪ್ರಿಲ್ 1 ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯಿಂದ‌ ದೂರು ನೀಡಲಾಗಿತ್ತು. ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ‌ ವಿಡಿಯೋ ಕೇಸ್: 3 ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ ದೇವರಾಜೇಗೌಡ

ಸೈಟ್ ಮಾರಾಟ ಮಾಡಿಸಿಕೊಡುವ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ. ಹೀಗಾಗಿ ಮಹಿಳೆ‌ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐಆರ್​ ದಾಖಲಾಗಿದೆ.

ಮಹಿಳೆ ಮೇಲಿನ ದೌರ್ಜನ್ಯ ಆರೋಪ ಕೇಸ್​ನಲ್ಲಿ ಜಾಮೀನಿಗಾಗಿ ದೇವರಾಜೇಗೌಡ ಮೇ 8ರಂದು ಹಾಸನದ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮೇ 15 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ: ದೇವರಾಜೇಗೌಡ್ರ ಮೇಲೂ ಲೈಂಗಿಕ ದೌರ್ಜನ್ಯದ ಆರೋಪ: ಬಂಧನ ಭೀತಿಯಲ್ಲಿ ಬಿಜೆಪಿ ಮುಖಂಡ

ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಆರೋಪ ಪ್ರತ್ಯಾರೋಪದ ನಡುವೆ ದೇವರಾಜೇಗೌಡ ಮೇಲಿನ ಆರೋಪ ಪ್ರಕರಣ ತೀವ್ರ ಚರ್ಚೆ ಹುಟ್ಟು ಹಾಕಿದೆ. ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ಹನಿ ಟ್ಯಾಪ್ ಆರೋಪದಲ್ಲಿ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ದ ದೂರು ನೀಡಿದ್ದ ಮಹಿಳೆಯಿಂದ ಹನಿ ಟ್ರ್ಯಾಪ್ ಎಂದು ದೇವರಾಜೇಗೌಡ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:33 pm, Fri, 10 May 24