ಪ್ರಜ್ವಲ್ ಪ್ರಕರಣ: ಸಾಹಿತಿಗಳು, ಬರಹಗಾರರಿಂದ ಸಿಎಂ ಸಿದ್ದರಾಮಯ್ಯಗೆ 16 ಬೇಡಿಕೆಗಳ ಬಹಿರಂಗ ಪತ್ರ

ಪ್ರಜ್ವಲ್ ರೇವಣ್ಣ ಪ್ರಕರಣದ ವಿಚಾರದಲ್ಲಿ ರಾಜ್ಯ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ. 16 ಬೇಡಿಕೆಗಳನ್ನೂ ಈ ಪತ್ರದ ಮೂಲಕ ಸಿಎಂ ಮುಂದಿಡಲಾಗಿದೆ. ಅವುಗಳು ಯಾವುವು ಎಂಬ ವಿವರ ಇಲ್ಲಿದೆ.

ಪ್ರಜ್ವಲ್ ಪ್ರಕರಣ: ಸಾಹಿತಿಗಳು, ಬರಹಗಾರರಿಂದ ಸಿಎಂ ಸಿದ್ದರಾಮಯ್ಯಗೆ 16 ಬೇಡಿಕೆಗಳ ಬಹಿರಂಗ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: May 15, 2024 | 10:44 AM

ಬೆಂಗಳೂರು, ಮೇ 15: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಸುದೀರ್ಘ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿ ಡಾ.ಜಿ ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಮಂದಿಯ ಸಹಿಯುಳ್ಳ ಪತ್ರ ಬರೆಯಲಾಗಿದ್ದು, ‘ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ’ ಎಂದು ಹೆಸರಿಸಲಾಗಿದೆ.

ಪ್ರಜ್ವಲ್ ಪ್ರಕರಣದಲ್ಲಿ ಸರ್ಕಾರದ ನಡೆ ಹಾಗೂ ಹೆಚ್​ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಪತ್ರದಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ. ಸಂತ್ರಸ್ತರ ಪೋಟೋ, ವಿಡಿಯೋ ದಾಖಲಿಸಿ ಇಟ್ಟುಕೊಂಡಿರುವುದು, ದೂರು ಕೊಡದಂತೆ ಬೆದರಿಸುವುದು, ಅಪಹರಿಸುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿದ್ದು, ಅನೇಕ ವರ್ಷಗಳಿಂದ ನಡೆದುಕೊಂಡ ಬಂದ ಹಗರಣವಿದು. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗೆ, ಚುನಾವಣೆ ಲಾಭಕ್ಕಾಗಿ ಬಳಸುತ್ತಿರುವುದು ಆಘಾತಕಾರಿಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ಪ್ರಜಲ್ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲಾ ಹುದ್ದೆಗಳನ್ನು, ಸವಲತ್ತುಗಳನ್ನು ಬಳಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬ ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ದಿರಿಸು ಧರಿಸಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳಾದರೂ ಆರೋಪಿಯನ್ನು ಸ್ವತಂತ್ರವಾಗಿ ಬಿಟ್ಟಿದ್ದು, ಆತನ ಮೇಲೆ‌ ಕಣ್ಗಾವಲು ಹಾಕಿಲ್ಲ. ಇದರಿಂದ ಸರ್ಕಾರದ ಮೇಲೆ ವಿಶ್ವಾಸವಿಟ್ಟು, ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ ವಿಡಿಯೋಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ,

ಸರ್ಕಾರಕ್ಕೆ ಸಾಹಿತಿಗಳ, ಬರಹಗಾರರ ಪ್ರಮುಖ ಬೇಡಿಕೆಗಳೇನು?

  1. ಆರೋಪಿಯನ್ನು ಕೂಡಲೇ ಬಂಧಿಸಬೇಕು.
  2. ಪ್ರಕರಣ ಹೊರ ಬಂದ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು.
  3. ಹಗರಣ ಬಯಲಾಗಿ ಐದು ದಿನಗಳಾದರೂ ಆರೋಪಿಯನ್ನು ಸ್ವತಂತ್ರವಾಗಿ ಬಿಟ್ಟಿದ್ದು ತಪ್ಪು.
  4. ಐಟಿ, ಐಪಿಸಿ ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ದಾಖಲಿಸಬೇಕು.
  5. ಸಂತ್ರಸ್ತ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
  6. ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್​​ಡಿ ರೇವಣ್ಣ ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು.
  7. ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡುವಳಿಕೆಗೆ ಕಡಿವಾಣ ಹಾಕಬೇಕು.
  8. ಎಸ್​ಐಟಿ ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು.
  9. ಪ್ರಜ್ವಲ್ ಚಾಲಕ ಕಾರ್ತಿಕ್​ನನ್ನು ಕೂಡಲೇ ಬಂಧಿಸಬೇಕು.
  10. ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು.
  11. ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು.
  12. ಹಳೇ ವಿಡಿಯೋ ಎಂದು ರೇವಣ್ಣ ಹೇಳಿದ್ದಾರೆ.
  13. ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲಾ ಸದಸ್ಯರನ್ನ Accomplice ಗಳೆಂದು ಪರಿಗಣಿಸಬೇಕು.
  14. ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ದವೂ ಮೊಕದ್ದಮೆ ಹೂಡಬೇಕು.
  15. ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ.
  16. ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿಮಾನ ಟಿಕೆಟ್ ರದ್ದು, ಹಣ ವಾಪಸ್ ಪಡೆಯದೆ ಗೊಂದಲ ಸೃಷ್ಟಿಸಿದ ನಡೆ

ಇಷ್ಟು ಬೇಡಿಕೆಗಳನ್ನು ಸಾಹಿತಿಗಳು, ಬರಹಗಾರರು ಹಾಗೂ ಮಹಿಳಾ ಸಂಘಟನೆಗಳ ಮುಖಂಡರು ಸರ್ಕಾರದ ಮುಂದಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು