ಬೆಂಗಳೂರು, ಮೇ 15: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಸುದೀರ್ಘ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿ ಡಾ.ಜಿ ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ, ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಮಂದಿಯ ಸಹಿಯುಳ್ಳ ಪತ್ರ ಬರೆಯಲಾಗಿದ್ದು, ‘ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ’ ಎಂದು ಹೆಸರಿಸಲಾಗಿದೆ.
ಪ್ರಜ್ವಲ್ ಪ್ರಕರಣದಲ್ಲಿ ಸರ್ಕಾರದ ನಡೆ ಹಾಗೂ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಪತ್ರದಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ. ಸಂತ್ರಸ್ತರ ಪೋಟೋ, ವಿಡಿಯೋ ದಾಖಲಿಸಿ ಇಟ್ಟುಕೊಂಡಿರುವುದು, ದೂರು ಕೊಡದಂತೆ ಬೆದರಿಸುವುದು, ಅಪಹರಿಸುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿದ್ದು, ಅನೇಕ ವರ್ಷಗಳಿಂದ ನಡೆದುಕೊಂಡ ಬಂದ ಹಗರಣವಿದು. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗೆ, ಚುನಾವಣೆ ಲಾಭಕ್ಕಾಗಿ ಬಳಸುತ್ತಿರುವುದು ಆಘಾತಕಾರಿಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ಪ್ರಜಲ್ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲಾ ಹುದ್ದೆಗಳನ್ನು, ಸವಲತ್ತುಗಳನ್ನು ಬಳಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬ ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ದಿರಿಸು ಧರಿಸಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳಾದರೂ ಆರೋಪಿಯನ್ನು ಸ್ವತಂತ್ರವಾಗಿ ಬಿಟ್ಟಿದ್ದು, ಆತನ ಮೇಲೆ ಕಣ್ಗಾವಲು ಹಾಕಿಲ್ಲ. ಇದರಿಂದ ಸರ್ಕಾರದ ಮೇಲೆ ವಿಶ್ವಾಸವಿಟ್ಟು, ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ ವಿಡಿಯೋಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ,
ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿಮಾನ ಟಿಕೆಟ್ ರದ್ದು, ಹಣ ವಾಪಸ್ ಪಡೆಯದೆ ಗೊಂದಲ ಸೃಷ್ಟಿಸಿದ ನಡೆ
ಇಷ್ಟು ಬೇಡಿಕೆಗಳನ್ನು ಸಾಹಿತಿಗಳು, ಬರಹಗಾರರು ಹಾಗೂ ಮಹಿಳಾ ಸಂಘಟನೆಗಳ ಮುಖಂಡರು ಸರ್ಕಾರದ ಮುಂದಿಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ