ಐದಾರು ಸಂತ್ರಸ್ತೆಯರು ಪತ್ತೆ, ವಿಡಿಯೋ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ ಎಸ್​ಐಟಿ

Prajwal Revanna Video Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್​ಡ್ರೈವ್​ನಲ್ಲಿದ್ದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಸರ್ಕಾರದ ರಚನೆ ಮಾಡಿದ ಒಂದೇ ದಿನದಲ್ಲಿ ಎಸ್ಐಟಿ, ವಿಡಿಯೋನಲ್ಲಿರುವ ಸಂತ್ರಸ್ತೆಯನ್ನು ಗುರುತು ಮಾಡಿದೆ. ಅಲ್ಲದೇ ಅವರಿಂದ ಕೆಲ ಮಹತ್ವದ ಮಾಹಿತಿಯನ್ನು ಪಡೆದುಕೊಂಡಿದೆ.

ಐದಾರು ಸಂತ್ರಸ್ತೆಯರು ಪತ್ತೆ, ವಿಡಿಯೋ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ ಎಸ್​ಐಟಿ
ಪ್ರಜ್ವಲ್ ರೇವಣ್ಣ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Apr 29, 2024 | 6:45 PM

ಬೆಂಗಳೂರು/ಹಾಸನ, (ಏಪ್ರಿಲ್ 29): ಹಾಸನ(Hassan) ಸಂಸದ ಪ್ರಜ್ವಲ್ ರೇವಣ್ಣ (Prajwal Revanna )ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ರೂಪ ಪಡೆದುಕೊಳ್ಳುತ್ತಿದೆ. ಸಂತ್ರಸ್ತೆ ದೂರಿನ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇದೀಗ ಈ ಪ್ರಕರಣ ತನಿಖೆಯನ್ನು ಎಸ್​ಐಟಿ ತಂಡ ಚುರುಕುಗೊಳಿಸಿದೆ. ವೈರಲ್ ಆದ ವಿಡಿಯೋಗಳಲ್ಲಿರುವ ಐದಾರು ಸಂತ್ರಸ್ತೆಯರನ್ನು ಎಸ್​ಐಟಿ ತಂಡ ಗುರುತಿಸಿದೆ. ಅಲ್ಲದೇ ಅವರನ್ನು ಬೆಂಗಳೂರಿನಲ್ಲಿರುವ ಸಿಐಡಿ ಕಚೇರಿಗೆ ಕರೆಯಿಸಿಕೊಂಡು ವಿಚಾರಣೆ ಮಾಡಿ ಕೆಲ ಮಹತ್ವದ ಮಾಹಿತಿಯನ್ನು ಕಲೆಹಾಕಿದೆ ಎಂದು ತಿಳಿದುಬಂದಿದೆ.

ವಿಡಿಯೋಗಳಲ್ಲಿ ಕೆಲ ಸರ್ಕಾರಿ ಅಧಿಕಾರಿಗಳು, ರಾಜಕೀಯ ನಾಯಕಿಯರು ಇದ್ದಾರೆ. ಹೀಗಾಗಿ ಅವರ ಗುರುತು ಪತ್ತೆ ಎಸ್​ಐಟಿ ತಂಡದಲ್ಲಿರುವ SP ಸೀಮಾ ಲಾಟ್ಕರ್ ವಿಚಾರಣೆ ನಡೆಸಿದ್ದಾರೆ. ಇನ್ನು ಸಂತ್ರಸ್ತೆಯರು ತಮ್ಮ ವಿಡಿಯೋಗಳ ಬಗ್ಗೆ ಸೀಮಾ ಲಾಟ್ಕರ್ ಮುಂದೆ ಹೇಳಿಕೆಗಳನ್ನು ದಾಖಲಿಸಿದ್ದಾರೆ ಎಂದು ತಿಳುದುಬಂದಿದೆ.

ಇದನ್ನೂ ಓದಿ: ವಿಡಿಯೋ ಕೇಸ್‌: ಪ್ರಜ್ವಲ್ ರೇವಣ್ಣ ತಪ್ಪು ಸಾಬೀತಾದ್ರೆ ಏನು ಶಿಕ್ಷೆ? ಕಾನೂನಿನಲ್ಲಿರುವ ಅವಕಾಶಗಳೇನು?

ಈ ವೇಳೆ ಸಂತ್ರಸ್ತೆಯರಿಗೆ ಸೀಮಾ ಲಾಟ್ಕರ್ ಅವರು ಕೆಲ ಪ್ರಶ್ನೆಗಳನ್ನು ಕೇಳಿ ಅವರಿಂದ ಬಂದ ಉತ್ತರಗಳನ್ನು ದಾಖಲಿಸಿಕೊಂಡಿದ್ದಾರೆ. ಯಾವ ಉದ್ದೇಶಕ್ಕೆ ವಿಡಿಯೋ ಮಾಡಿಕೊಳ್ಳಲಾಗಿತ್ತು?, ವೈರಲ್​ ಆಗುತ್ತಿರುವ ವಿಡಿಯೋದಲ್ಲಿರುವುದು ನೀವೇನಾ?, ಸ್ವಇಚ್ಛೆಗನುಸಾರವಾಗಿ ವಿಡಿಯೋ ಮಾಡಿಕೊಳ್ಳಲಾಗಿತ್ತಾ? ಆಮಿಷ ಅಥವಾ ಭಯ ಉಂಟುಮಾಡಿ ವಿಡಿಯೋ ಮಾಡಿಕೊಂಡ್ರಾ? ಹೀಗೆ ಎಸ್​ಪಿ ಸೀಮಾ ಅವರು ಸಂತ್ರಸ್ತೆಯರಿಂದ ಹತ್ತಾರು ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡಿದ್ದಾರೆ.

ಈ ಹಿಂದೆ ಗೌರಿ ಲಂಕೇಶ್ ಕೇಸ್​ನಲ್ಲಿ ದೊಡ್ಡ ಪಾತ್ರ ವಹಿಸಿದ್ದ ಬಿ.ಕೆ ಸಿಂಗ್ ಜೊತೆ ಮೂವರು SP, 4 ಡಿವೈಎಸ್​ಪಿ ಕೂಡ ಎಸ್ಐಟಿ ತಂಡದಲ್ಲಿದ್ದಾರೆ. ಇದೀಗ ಸೀಮಾ ಲಾಟ್ಕರ್ ಅವರು ಸಂತ್ರಸ್ತೆಯರಿಂದ ಕೆಲ ಮಹತ್ವದ ಮಾಹಿತಿಯನ್ನು ಪಡೆದುಕೊಂಡಿದ್ದು, ಇದರ ಆಧಾರದ ಮೇಲೆ ಮತ್ತಷ್ಟು ತನಿಖೆ ಚುರುಕುಗೊಳಿಸಲಿದ್ದಾರೆ. ಅಲ್ಲದೇ ವಿಡಿಯೋನಲ್ಲಿ ಇನ್ನಷ್ಟು ಸಂತ್ರಸ್ತ ಮಹಿಳೆಯರನ್ನ ಪತ್ತೆ ಮಾಡುವ ಕಾರ್ಯ ಮುಂದುವರೆದಿದೆ. ಇನ್ನು ತಮಗೆ ಅನ್ಯಾಯವಾಗಿದೆ ಎಂದು ಖುದ್ದು ಸಂತ್ರಸ್ತೆಯರು ಎಸ್​ಐಟಿ ಮುಂದೆ ಹಾಜರಾಗಿ ವಿಡಿಯೋ ವಿಚಾರಳರಗಳನ್ನು ತಿಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ