ಪುತ್ರನ ಬಳಿಕ ತಂದೆಗೂ ಶಾಕ್ ಕೊಟ್ಟ ಎಸ್​ಐಟಿ, ಬಂಧನದ ಭೀತಿಯಲ್ಲಿ ರೇವಣ್ಣ

ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್​ ರೇವಣ್ಣಗೆ ಎಸ್​ಐಟಿ ಲುಕ್​ಔಟ್​ ನೋಟಿಸ್ ಜಾರಿ ಮಾಡಿದೆ. ಮಗನ ಬಳಿಕ ಇದೀಗ ತಂದೆ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣಗೂ ಸಹ ಲುಕ್​ ಔಟ್​ ನೀಡಲಾಗಿದೆ. ಇದರಿಂದ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.

ಪುತ್ರನ ಬಳಿಕ ತಂದೆಗೂ ಶಾಕ್ ಕೊಟ್ಟ ಎಸ್​ಐಟಿ, ಬಂಧನದ ಭೀತಿಯಲ್ಲಿ ರೇವಣ್ಣ
ಪ್ರಜ್ವಲ್, ರೇವಣ್ಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: May 03, 2024 | 7:58 PM

ಬೆಂಗಳೂರು (ಮೇ.3): ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Videos Case) ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಇದೀಗ ಅವರ ತಂದೆ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣಗೂ (HD Revanna) ಸಹ ಕರ್ನಾಟಕ ವಿಶೇಷ ತನಿಖಾ ದಳ (ಎಸ್‌ಐಟಿ) ಲುಕ್ ಔಟ್ ನೋಟಿಸ್(Look Out Notice) ಜಾರಿ ಮಾಡಿದೆ. ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿರುವ ರೇವಣ್ಣ ದೇಶ ಬಿಟ್ಟು ಹೊಗುವುದನ್ನ ತಡೆಯಲು ಎಸ್​ಐಟಿ ಈ ಲುಕ್​ ನೋಟಿಸ್ ನೀಡಿದೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರ್ನಾಲ್ಕು ದಿನಗಳಿಂದ ವಿಚಾರಣೆಗೆ ಹಾಜರಾಗದಿದ್ದರಿಂದ ವಿದೇಶಕ್ಕೆ ಹಾರುವ ಯತ್ನ ತಡೆಯಲು ಮುಂಜಾಗ್ರತಾ ಕ್ರಮವಾಗಿ ಎಸ್​ಐಟಿ ಈ ಲುಕ್​ಔಟ್ ಅಸ್ತ್ರ ಪ್ರಯೋಗಿಸಿದೆ. ಇದರಿಂದ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಯಾವುದೇ ಸಂದರ್ಭದಲ್ಲೂ ಬಂಧನವಾಗಬಹುದು.

ಇದನ್ನೂ ಓದಿ: ಗನ್‌ ತೋರಿಸಿ ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್‌ ಅತ್ಯಾಚಾರ, ಇಲ್ಲಿದೆ ಇಂಚಿಂಚು ಡಿಟೇಲ್ಸ್!

ಈಗಾಗಲೇ ರೇವಣ್ಣ ಸಂತ್ರಸ್ಥೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕೋರ್ಟ್, ಜಾಮೀನು ನೀಡದೇ ನಾಳೆಗೆ ವಿಚಾರಣೆ ಮುಂದೂಡಿದೆ. ಇದರಿಂದ ರೇವಣ್ಣಗೆ ನಿರಾಸೆಯಾಗಿದೆ.

ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್

ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಆಗಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‌ಐಟಿ ಈಗಾಗಲೇ ಲುಕ್‌ ಔಟ್ ನೋಟೀಸ್ ಜಾರಿ ಮಾಡಿ ಬಂಧನಕ್ಕೆ ಬಲೆ ಬೀಸಿದೆ. ಈ ಮೂಲಕ ವಿಮಾನ ನಿಲ್ದಾಣ, ಭೂ ಗಡಿ ಪ್ರದೇಶ ಅಥವಾ ಬಂದರುಗಳಲ್ಲಿ ಪತ್ತೆಯಾದರೂ ಬಂಧಿಸಲು ಮುಂದಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದುಕೊಂಡೇ ಕಾನೂನು ಹೋರಾಟ ನಡೆಸಿದ್ದಾರೆ.

ಒಟ್ಟಿನಲ್ಲಿ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಂದೆ ಮಕ್ಕಳ ಬಂಧನವಾದರೂ ಅಚ್ಚರಿಪಡಬೇಕಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?