ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ಡಿ ರೇವಣ್ಣ

ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ. ಅರ್ಜಿ ಹಿಂಪಡೆಯಲು ಕಾರಣವೇನು? ಬಂಧನ ಭೀತಿಯಿಂದ ತಪ್ಪಿಸಿಕೊಂಡರಾ ರೇವಣ್ಣ? ಇಲ್ಲಿದೆ ಮಾಹಿತಿ

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ಡಿ ರೇವಣ್ಣ
ಹೆಚ್​ಡಿ ರೇವಣ್ಣ
Follow us
Ramesha M
| Updated By: Ganapathi Sharma

Updated on:May 03, 2024 | 12:42 PM

ಬೆಂಗಳೂರು, ಮೇ 3: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು (Anticipatory Bail Plea) ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ಶುಕ್ರವಾರ ಹಿಂಪಡೆದಿದ್ದಾರೆ. ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪ ಸೇರಿಸಿಲ್ಲ ಎಂಬ ವಿಶೇಷ ತನಿಖಾ ತಂಡದ ಹೇಳಿಕೆ ಬೆನ್ನಲ್ಲೇ ರೇವಣ್ಣ ಈ ಕ್ರಮ ಕೈಗೊಂಡಿದ್ದಾರೆ. ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪವಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ ಎಂದು ಎಸ್​ಐಟಿಯ ಎಸ್​​​ಪಿಪಿ ಎನ್. ಜಗದೀಶ್ ಕೋರ್ಟ್​​ಗೆ ತಿಳಿಸಿದ್ದರು.

ಈ ದಿನದವರೆಗೆ ರೇವಣ್ಣ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಿಲ್ಲ ಎಂದು ಎನ್. ಜಗದೀಶ್ ಕರ್ನಾಟಕ ಹೈಕೋರ್ಟ್​​ಗೆ ನೀಡಿದ್ದ ಮಾಹಿತಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದಾಖಲಿಸಿಕೊಂಡಿತು. ನಂತರ ರೇವಣ್ಣ ಅರ್ಜಿ ವಾಪಸ್ ಪಡೆದರು.

ಈ ಮಧ್ಯೆ, ಮಹಿಳೆಯೊಬ್ಬರು ಕಾಣೆಯಾಗಿರುವ ವಿಚಾರವಾಗಿ ರೇವಣ್ಣ ವಿರುದ್ಧ ಮೈಸೂರಿನ ಕೆಆರ್​ ನಗರದಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ, ಮೈಸೂರಿನಲ್ಲಿಯೂ ಕೇಸ್ ದಾಖಲು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬಹಿರಂಗವಾಗುತ್ತಿದ್ದಂತೆಯೇ ರೇವಣ್ಣಗೆ ಸಂಕಷ್ಟ ಶುರುವಾಗಿದೆ. ಈ ಮಧ್ಯೆ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗಲು ರೇವಣ್ಣ ಕಾಲಾವಕಾಶ ಕೇಳಿದ್ದಾರೆ. ಮತ್ತೊಂದೆಡೆ, ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರವೇ ತಿಳಿಸಿದ್ದಾರೆ. ಈ ಮಧ್ಯೆ, ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅವರನ್ನು ಕರೆತಂದು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Fri, 3 May 24

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು