Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ

ಎಸ್​​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೇವಣ್ಣ, ಕಿಡ್ನ್ಯಾಪ್​​ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಎಂದಿದ್ದಾರೆ. ಜತೆಗೆ, ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ಹಿಂದೇಟು ಹಾಕಿದ್ದಾರೆ. ಇನ್ನು, ರೇವಣ್ಣ ಎಸ್​ಐಟಿ ಕಸ್ಟಡಿ ವೇಳೆಯಲ್ಲಿ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ
ಹೆಚ್​ಡಿ ರೇವಣ್ಣ
Follow us
TV9 Web
| Updated By: Ganapathi Sharma

Updated on: May 06, 2024 | 2:37 PM

ಬೆಂಗಳೂರು, ಮೇ 6: ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಕೇಸ್​ನಲ್ಲಿ (Kidnap Case) ಎಸ್​ಐಟಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ವಿಚಾರಣೆ ತೀವ್ರಗೊಂಡಿದೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮನೆಯಿಂದ ರೇವಣ್ಣರನ್ನು ಬಂಧಿಸಿದ್ದ ಎಸ್​ಐಟಿ (SIT) ನಿನ್ನೆ ಸಂಜೆ ಜಡ್ಜ್ ಎದುರು ಹಾಜರುಪಡಿಸಿತ್ತು. ಈ ವೇಳೆ ರಾಜಕೀಯ ಭವಿಷ್ಯವನ್ನು ನೆನಪಿಸಿಕೊಂಡು ರೇವಣ್ಣ ಕೈ ಮುಗಿದು ಕಣ್ಣೀರು ಹಾಕಿದ್ದರು. ರಾಜಕೀಯ ಷಡ್ಯಂತ್ರ ನಡೆಸಿ ನನ್ನ ಬಂಧನವಾಗಿದೆ ಅಂತ ಅಳಲು ತೋಡಿಕೊಂಡಿದ್ದರು. ಸದ್ಯ 4 ದಿನಗಳ ಕಾಲ ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣಗೆ ಎಸ್​​ಐಟಿ ಅಧಿಕಾರಿಗಳು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ಮಹಿಳೆಯನ್ನು ಬಲವಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದರು ಎಂದು ಎಸ್​ಐಟಿ ಹೇಳಿಕೆ ದಾಖಲಿಸಿಕೊಂಡಿದೆ. ಆದ್ರೆ, ಎಸ್​​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೇವಣ್ಣ, ಕಿಡ್ನ್ಯಾಪ್​​ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಅಂತಾ ಒಂದೇ ಉತ್ತರ ನೀಡಿದ್ದಾರೆ.

ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ರೇವಣ್ಣ ಹಿಂದೇಟು

ಇಷ್ಟೇ ಅಲ್ಲ ನನಗೂ ಕಿಡ್ನ್ಯಾಪ್​ಗೂ ಸಂಬಂಧವಿಲ್ಲ ಎಂದಿರುವ ರೇವಣ್ಣ, ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ಹಿಂದೇಟು ಹಾಕಿದ್ದಾರೆ. ಮಹಿಳೆ ಕಿಡ್ನ್ಯಾಪ್ ಕೇಸ್​​ನಲ್ಲಿ ಬಂಧನವಾಗಿರುವ ರೇವಣ್ಣ ಕಸ್ಟಡಿ ವೇಳೆಯಲ್ಲಿ ರೇವಣ್ಣ ಬೇಲ್ ಅರ್ಜಿ ಸಲ್ಲಿಸಬಹುದು. ಕಸ್ಟಡಿ ಅವಧಿ ಮುಗಿದ ಬಳಿಕವೇ ಬೇಲ್ ಬಗ್ಗೆ ತೀರ್ಮಾನವಾಗಲಿದೆ. ಕಸ್ಟಡಿ ಅವಧಿ ನಂತರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್​ಐಟಿ ಸಿದ್ಧತೆ ಮಾಡಿಕೊಂಡಿದೆ. ಬೇಲ್ ಅರ್ಜಿಗೆ ಎಸ್​ಐಟಿ ಆಕ್ಷೇಪಣೆಯನ್ನು ಕೋರ್ಟ್ ಪರಿಗಣಿಸಲಿದೆ. ಎರಡೂ ಕಡೆ ವಾದಮಂಡನೆ ನಂತರವೇ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಈ ಎಲ್ಲ ಪ್ರಕ್ರಿಯೆಯು ಕನಿಷ್ಠ ಒಂದು ವಾರ ನಡೆಯಬಹುದು. ಬೇಲ್ ಸಿಕ್ಕರೆ ಸೆರೆವಾಸದಿಂದ ರೇವಣ್ಣ ರಿಲೀಸ್ ಆಗ್ತಾರೆ. ಅಕಸ್ಮಾತ್ ಜನಪ್ರತಿನಿಧಿಗಳ ಕೋರ್ಟ್​ನಲ್ಲಿ ಬೇಲ್ ಸಿಗದಿದ್ದರೆ ರೇವಣ್ಣ ಹೈಕೋರ್ಟ್ ಮೊರೆ ಹೋಗಬಹುದು. ಹೈಕೋರ್ಟ್ ನಲ್ಲೂ ಬೇಲ್ ಸಿಗದಿದ್ದರೆ ಸುಪ್ರೀಂಗೆ ಮೊರೆ ಹೋಗಬಹುದು. ಆದ್ರೆ ಜಾಮೀನು ಸಿಗುವವರೆಗೆ ರೇವಣ್ಣ ಬಂಧನದಲ್ಲಿರಬೇಕಾಗಿದೆ.

ಬಧನದ ಬಳಿಕ ಮಾನಸಿಕವಾಗಿ ಕುಗ್ಗಿರುವ ರೇವಣ್ಣ

ಎಸ್​ಐಟಿ ಬಂಧನದ ಬಳಿಕ ರೇವಣ್ಣ ಮಾನಸಿಕವಾಗಿ ಕುಗ್ಗಿದ್ದಾರೆ. ಪ್ರತಿದಿನ 9.30ರಿಂದ 10.30ರ ಸಮಯದಲ್ಲಿ ಒಂದು ಗಂಟೆ ವಕೀಲರ ಭೇಟಿಗೆ ಅವಕಾಶ ಇದೆ. ವಕೀಲರ ಭೇಟಿಗೆ ಅವಕಾಶ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಇಂದು ಸಿಐಡಿ ಎಸ್​ಐಟಿ ಕಚೇರಿಯಲ್ಲಿ ಭೇಟಿಗೆ ಅನುವು ಮಾಡಿಕೊಡಲಾಗಿದೆ.

ಇನ್ನು ಹೊಳೆನರಸೀಪುರದಲ್ಲಿ ದೂರು ನೀಡಿದ್ದ ಸಂತ್ರಸ್ತ ಮಹಿಳೆಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ಮಾಡಲಾಯ್ತು. ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಪಟ್ಟಂತೆ ಸಂತ್ರಸ್ತೆಯಿಂದ ಎಸ್​ಐಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿದ್ರು. ಸಂತ್ರಸ್ತೆ ಹೇಳಿಕೆ ಆಧರಿಸಿ ಮನೆಯಲ್ಲಿ ಸಂಪೂರ್ಣ ಮಹಜರು ಮಾಡಲಾಯ್ತು. ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ 6 ಅಧಿಕಾರಿಗಳ ತಂಡ ಮಹಜರು ನಡೆಸಿದರು.

ರೇವಣ್ಣರನ್ನ ಇಂದು ಹಾಸನ ಅಥವಾ ಕೆ.ಆರ್. ನಗರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ. ಮಹಿಳೆಯನ್ನು ಕರೆದುಕೊಂಡು ಹೋಗಿದ್ದ ಸ್ಥಳ, ಕೂಡಿಟ್ಟ ಸ್ಥಳ, ಮಹಿಳೆಯ ಕರೆತಂದ ಸತೀಶ್ ಬಾಬು-ರೇವಣ್ಣ ಭೇಟಿಯಾದ ಗೌಪ್ಯ ಸ್ಥಳದ ಬಗ್ಗೆಯೂ ತನಿಖೆ ನಡೆಯಲಿದೆ.

ಇದನ್ನೂ ಓದಿ: ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ಭಾರತಕ್ಕೆ: ಉನ್ನತ ಮೂಲಗಳಿಂದ ಮಾಹಿತಿ

ರೇವಣ್ಣ, ಪ್ರಜ್ವಲ್ ವಿರುದ್ಧ ದಾಖಲಾಗಿರುವ ಕೇಸ್​ಗಳಿಂದ ರೇವಣ್ಣ ಪತ್ನಿ ಭವಾನಿಗೂ ಸಂಕಷ್ಟ ಎದುರಾಗಿದೆ. ಲೈಂಗಿಕ ಕಿರುಕುಳ, ಕಿಡ್ನ್ಯಾಪ್ ಎರಡೂ ಕೇಸ್​ನಲ್ಲೂ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿದೆ. ಭವಾನಿ ಕರೆದರು ಎಂದು ಹೇಳಿಯೇ ಕಿಡ್ನ್ಯಾಪ್ ಮಾಡಿರುವ ಆರೋಪವಿದೆ. ಭವಾನಿಗೆ ನೋಟಿಸ್ ನೀಡಿ ಎಸ್​ಐಟಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಭವಾನಿ ವಿರುದ್ಧ ಸಾಕ್ಷಿ ಸಿಕ್ಕರೆ ಅವರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!