AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರಸಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ: ರೈತರ ಕೂಗಿಗೆ ಕಿವಿಯಾದ ಪ್ರಹ್ಲಾದ್ ಜೋಶಿ ಆ್ಯಂಡ್ ಟೀಮ್

ಕರ್ನಾಟಕದಾದ್ಯಂತ ಉತ್ತಮ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಇಳೆ ಕಂಗೊಳಿಸುತ್ತಿದೆ. ವರುಣನ ಕೃಪೆಗೆ ರೈತನ ಮೊಗದಲ್ಲಿ ಮಂದಹಾಸ ಮೂಡಿದ್ದು, ಉತ್ಕೃಷ್ಟ ಬೆಳೆಯ ನಿರೀಕ್ಷೆಯಲ್ಲಿರುವ ರೈತ, ಈ ಬಾರಿ ಉತ್ತಮ ಫಸಲು ತೆಗೆಯೋ ಕನಸು ಹೊತ್ತು ಹೆಜ್ಜೆ ಇಟ್ಟಿದ್ದಾನೆ. ಆದ್ರೆ, ಬೆಳಗೆ ರಸಗೊಬ್ಬರ ಕೊರತೆ ಎದುರಾಗಿದ್ದು, ಈ ಸಂಬಂಧ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಸೇರಿದಂತೆ ಕರ್ನಾಟಕದ ಸಂಸದರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ಕರ್ನಾಟಕದಲ್ಲಿ ರಸಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ: ರೈತರ ಕೂಗಿಗೆ ಕಿವಿಯಾದ ಪ್ರಹ್ಲಾದ್ ಜೋಶಿ ಆ್ಯಂಡ್ ಟೀಮ್
Karnataka Bjp Mps Meets JP Nadda
ರಮೇಶ್ ಬಿ. ಜವಳಗೇರಾ
|

Updated on:Jul 28, 2025 | 5:49 PM

Share

ನವದೆಹಲಿ, (ಜುಲೈ 28): ಕರ್ನಾಟಕದಲ್ಲಿ (Karnataka) ಮುಂಗಾರು ಮಳೆ  (Monsoon season) ಉತ್ತಮವಾಗಿದ್ದು, ರೈತ ಉತ್ತಮ ಫಸಲು ತೆಗೆಯುವ ಕನಸು ಕಂಡಿದ್ದಾನೆ. ಆದ್ರೆ, ಬೆಳೆಗಳೊಗೆ ರಸಗೊಬ್ಬರ (fertilizer) ಕೊರತೆ ಎದುರಾಗಿದೆ. ಕೇಂದ್ರ ಗೊಬ್ಬರ ಕೊಟ್ಟರೂ ರಾಜ್ಯ ಸರ್ಕಾರ ಕೊಡುತ್ತಿಲ್ವಾ? ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದಲೇ ಸರಬರಾಜು ಆಗುತ್ತಿಲ್ವಾ? ಏನೇನೂ ಮಾಹಿತಿ ಸಿಗದ ರೈತ ತಲೆ ಮೇಲೆ ಕೈ ಹೊತ್ತು ಕೂತಿದ್ದಾನೆ. ಹೀಗೆ ಅನ್ನದಾತನ ಭಯಕ್ಕೆ ಆತ್ಮಸ್ಥೈರ್ಯ ತುಂಬಬೇಕಿದ್ದ ರಾಜಕೀಯ ನಾಯಕರು, ಗೊಬ್ಬರ ಕೆಸೆರೆರಾಚಟದಲ್ಲಿ ನಿರತರಾಗಿದ್ದಾರೆ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಸೇರಿದಂತೆ ಕರ್ನಾಟಕ ಬಿಜೆಪಿ ಸಂಸದರು, ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಅಗತ್ಯ ರಸಗೊಬ್ಬರ ಪೂರೈಕೆಗೆ ಮನವಿ ಮಾಡಿದ್ದಾರೆ.

ನಡ್ಡಾ ಅವರ ಭೇಟಿ ಮಾಡಿರುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲಾ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ. ರೈತರಿಗೆ ಬೇಕಾದ ರಸಗೊಬ್ಬರಗಳನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೀಡಲಾಗಿದ್ದು, ಸರಿಯಾದ ಕ್ರಮದಲ್ಲಿ ಬಳಸಬೇಕಿದೆ. ಇನ್ನೂ ರಸಗೊಬ್ಬರದ ಬೇಡಿಕೆ ಹೆಚ್ಚಿದ್ದು, ಅಗತ್ಯ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಸರಬರಾಜು ಮಾಡುವಂತೆ ಕೋರಿ ಇಂದು ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಜೆಪಿ ನಡ್ಡಾ ಅವರನ್ನುಭೇಟಿಯಾಗಿ ಮನವಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲ ಕಡೆ ಗೊಬ್ಬರ ಕೊರತೆ: ಕಲಬುರಗಿಯಲ್ಲಿ ಸಾಕಷ್ಟಿದ್ದರೂ ಸಮಸ್ಯೆ! ಯಾಕೆ? ಇಲ್ಲಿದೆ ಕಾರಣ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ರೈತರ ಬೆನ್ನೆಲುಬಾಗಿ ನಿಂತಿದ್ದು, ಎಂತಹದ್ದೇ ಸಮಯದಲ್ಲೂ ರೈತರ ಹಿತ ಕಾಪಾಡುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ನಡ್ಡಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನೂ ರಸಗೊಬ್ಬರ ಪೂರೈಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಬರೆದಿರುವ ಪತ್ರಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿಗಿ ನಿಗಿ ಕೆಂಡವಾಗಿದ್ದಾರೆ. ಮಳೆ ಬರುವ ಮೊದಲೇ ಮೋದಿಗೆ ಪತ್ರ ಬರೆಯಬೇಕಿತ್ತು ಎಂದು ತಿವಿದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರೋ ಪರಮೇಶ್ವರ್, ಕೇಂದ್ರದಿಂದಲೇ ಗೊಬ್ಬರ ಪೂರೈಕೆಯಾಗಿಲ್ಲ ಎಂದಿದ್ದಾರೆ. ಇದಕ್ಕೆ ಪಂಚ್ ಕೊಟ್ಟ ವಿಜಯೇಂದ್ರ, ಎರಡುವರೆ ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಎಲ್ಲೊಯ್ತು ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವೇ ಗೊಬ್ಬರ ಕೊರತೆಗೆ ಕಾರಣ ಎಂದು ಆರೋಪಿಸುತ್ತಿರುವ ಬಿಜೆಪಿ, ರೈತರ ಸಂಕಷ್ಟವನ್ನ ಮುಂದಿಟ್ಟು ಹೋರಾಟಕ್ಕೆ ಪ್ಲ್ಯಾನ್ ಮಾಡಿದೆ. ನಾಳೆ (ಜುಲೈ 29) ರಾಜ್ಯಾದ್ಯಂತ ಹೋರಾಟಕ್ಕಿಳಿಯಲಿದ್ದು, ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಜಿಲ್ಲೆ ಜಿಲ್ಲೆಯಲ್ಲೂ ಪ್ರತಿಭಟಿಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Mon, 28 July 25