ನ್ಯಾ.ಡಿ ಕುನ್ಹಾಗೆ ಪ್ರಲ್ಹಾದ್​ ಜೋಶಿ ಕ್ಷಮೆ ಕೇಳಿದ್ಯಾಕೆ? ಅಷ್ಟಕ್ಕೂ ಕೇಂದ್ರ ಸಚಿವ ಹೇಳಿದ್ದೇನು?

ಕೋವಿಡ್ ಹಗರಣದ ತನಿಖಾ ವರದಿ ಸಲ್ಲಿಸಿದ ನ್ಯಾಯಮೂರ್ತಿ ಮೈಕೆಲ್ ಡಿಕುನ್ಹಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕ್ಷಮೆ ಕೋರಿದ್ದಾರೆ. ತಮ್ಮ ಹೇಳಿಕೆಯಿಂದ ನ್ಯಾಯಮೂರ್ತಿಗಳಿಗೆ ನೋವುಂಟಾಗಿದ್ದರೆ ಕ್ಷಮಿಸಬೇಕೆಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ನ್ಯಾ.ಡಿ ಕುನ್ಹಾಗೆ ಪ್ರಲ್ಹಾದ್​ ಜೋಶಿ ಕ್ಷಮೆ ಕೇಳಿದ್ಯಾಕೆ? ಅಷ್ಟಕ್ಕೂ ಕೇಂದ್ರ ಸಚಿವ ಹೇಳಿದ್ದೇನು?
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 23, 2024 | 5:41 PM

ಬೆಂಗಳೂರು, ನವೆಂಬರ್ 23: ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್​ ಹಗರಣದ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ಮೈಕೆಲ್​ ಡಿಕುನ್ಹಾ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (pralhad joshi) ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಇದೀಗ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಪ್ರಲ್ಹಾದ್​ ಜೋಶಿ ಕ್ಷಮೆ ಕೇಳಿದ್ದಾರೆ.

ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು ಹಾಕಿತ್ತು.

ಇದನ್ನೂ ಓದಿ: ಕೇಂದ್ರದ ಮಾನದಂಡಗಳ ಕಾರಣ ಗ್ಯಾರಂಟಿ ಯೋಜನೆ ನಿಲ್ಲಿಸಬೇಕಾಯಿತು ಅಂತ ರಾಜ್ಯ ಸರ್ಕಾರ ಹೇಳಬಾರದು: ಪ್ರಲ್ಹಾದ್ ಜೋಶಿ

ಇದೀಗ ಈ ವಿಚಾರವಾಗಿ ಪ್ರಲ್ಹಾದ್​ ಜೋಶಿ ಇದಕ್ಕೆ ಸ್ಪಷ್ಟನೆ ನೀಡಿದ್ದಲ್ಲದೆ, ವಾಸ್ತವದಲ್ಲಿ ತಾವೇನು ಮಾತನಾಡಿದ್ದೇನೆ ಎಂಬುದರ ಬಗ್ಗೆ ವಿವರಿಸಿ ನ್ಯಾಯಮೂರ್ತಿ ಕುನ್ಹಾ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೇ, ವಿವಾದಾತ್ಮಕ ಹೇಳಿಕೆಯಿಂದ ತಮ್ಮ ಮನಸ್ಸಿಗೆ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲೇನಿದೆ?

“ನನ್ನ ಸುದೀರ್ಘ ವರ್ಷಗಳ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಯಾವತ್ತೂ ಪ್ರತ್ಯಕ್ಷ-ಪರೋಕ್ಷವಾಗಿ ನ್ಯಾಯಾಂಗದ ಸದಸ್ಯರ ಖ್ಯಾತಿಗೆ ಚ್ಯುತಿ ಬರುವಂತೆ ನಡೆದುಕೊಂಡಿಲ್ಲ ಮತ್ತು ಹೇಳಿಕೆಯನ್ನೂ ನೀಡಿಲ್ಲ” ಎಂದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ನ್ಯಾಯಾಂಗ ಮತ್ತು ನ್ಯಾ.ಕುನ್ಹಾ ಅವರಲ್ಲಿ ಗೌರವವಿದೆ. ನಾನು ಇತ್ತೀಚೆಗೆ ನೀಡಿದ ಹೇಳಿಕೆ ಮೇಲ್ನೋಟಕ್ಕೆ ವಿವಾದ ಹುಟ್ಟುಹಾಕಿದೆ. ಆದರೆ, ಯಾವತ್ತೂ ನ್ಯಾಯಾಂಗದ ಸದಸ್ಯರ ಖ್ಯಾತಿ ತಗ್ಗಿಸುವ ಪ್ರವೃತ್ತಿ ತೋರಿಲ್ಲ. ನ್ಯಾಯಾಂಗ ಮತ್ತು ತಮ್ಮ ಬಗ್ಗೆ ಈಗಲೂ ಗೌರವವಿದೆ ಎಂದಿದ್ದಾರೆ.

ನ್ಯಾಯಾಂಗ ಮತ್ತು ಗೌರವಾನ್ವಿತ ನ್ಯಾಯಾಧೀಶರು ಸಂವಿಧಾನದ ಕವಚವಾಗಿದ್ದಾರೆ. ನ್ಯಾಯದಾನದ ಪವಿತ್ರ ಕರ್ತವ್ಯದಲ್ಲಿ ಪ್ರಮುಖ ಪಾತ್ರ ಹೊಂದಿದವರೆಂದು ನಂಬಿದವನಾಗಿದ್ದೇನೆ. ಆದರೆ, ತಮ್ಮ ನೇತೃತ್ವದ ಸಮಿತಿ ವರದಿ ಉಲ್ಲೇಖಿಸಿ ಇತ್ತೀಚೆಗೆ ನೀಡಿದ ಹೇಳಿಕೆ ಅವಹೇಳನದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕಾಗಿ ತಮ್ಮಲ್ಲಿ ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಖ್ಯಾತಿ ಕುಗ್ಗಿಸುವ ಯತ್ನ ನನ್ನದಾಗಿರಲಿಲ್ಲ

ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿ’ ಕುನ್ಹಾ ಅವರಿಂದ ವರದಿ ತರಿಸಿಕೊಂಡಿದೆ ಎಂದು ಹೇಳಿದ್ದೇನೆ ಹೊರತು ತಮ್ಮ ಮೇಲೆ ಯಾವುದೇ ವೈಯಕ್ತಿಕ ಹೇಳಿಕೆ ನೀಡಿಲ್ಲ. ತಮಗೆ ಮತ್ತು ಆಯೋಗಕ್ಕೆ ಅಪಕೀರ್ತಿ ತರಲು ಅಥವಾ ಜನರ ಮನಸ್ಸಿನಲ್ಲಿ ನಿಮ್ಮ ಇಮೇಜ್ ಕಡಿಮೆ ಮಾಡುವ ಉದ್ದೇಶದ್ದೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸಕ್ಕೆ ಕೊಂಚ ಬಿಡುವು: ಪಗಡೆ ಆಟವಾಡಿದ ಪ್ರಲ್ಹಾದ್​ ಜೋಶಿ

ಆಯೋಗದ ಸದಸ್ಯರಾಗಿ ತಮ್ಮ ಕರ್ತವ್ಯ ನಿರ್ವಹಣೆ ಮತ್ತು ನಿಷ್ಪಕ್ಷಪಾತವನ್ನು ಅನುಮಾನಿಸಲು ನನಗೆ ಯಾವುದೇ ಕಾರಣವಿಲ್ಲ ಎಂಬುದನ್ನು ಈ ಮೂಲಕ ನೇರವಾಗಿ ತಮ್ಮ ಗಮನಕ್ಕೆ ತರಬಯಸಿದ್ದೇನೆ. ನನ್ನ ಹೇಳಿಕೆಗಳು ತಮಗೆ ಯಾವುದೇ ನೋವು ಅಥವಾ ಅನುಮಾನ ಉಂಟುಮಾಡಿದ್ದರೆ ಅದಕ್ಕೆ ವಿಷಾದಿಸುತ್ತೇನೆ ಮತ್ತು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ