AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಪ್ರತಿಭಟನೆ ಬೆನ್ನಲ್ಲೇ ಪ್ರಲ್ಹಾದ್ ಜೋಶಿ ಸ್ಪಷ್ಟನೆ: ಕರ್ನಾಟಕ ಸರ್ಕಾರ FRP ನೀಡ್ತಿಲ್ಲ ಎಂದ ಕೇಂದ್ರ ಸಚಿವ

ಹುಬ್ಬಳ್ಳಿಯಲ್ಲಿ ನಿನ್ನೆ ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರವಾಗಿ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡಿ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಕರ್ನಾಟಕ ಸರ್ಕಾರ ಮಾತ್ರ ಎಫ್‌ಆರ್‌ಪಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಕ್ಟೋಬರ್ 12ರಂದು ರೈತರ ಜೊತೆಗೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಬ್ಬು ಬೆಳೆಗಾರರ ಪ್ರತಿಭಟನೆ ಬೆನ್ನಲ್ಲೇ ಪ್ರಲ್ಹಾದ್ ಜೋಶಿ ಸ್ಪಷ್ಟನೆ: ಕರ್ನಾಟಕ ಸರ್ಕಾರ FRP ನೀಡ್ತಿಲ್ಲ ಎಂದ ಕೇಂದ್ರ ಸಚಿವ
ಪ್ರಲ್ಹಾದ್​ ಜೋಶಿImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Sep 30, 2026 | 6:45 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿಯಲ್ಲಿ ನಿನ್ನೆ ಕಬ್ಬು ಬೆಳೆಗಾರರ ಪ್ರತಿಭಟನೆ ಬೆನ್ನಲ್ಲೇ ಸುದ್ದಿಗೋಷ್ಠಿ
  • ಕರ್ನಾಟಕ ಸರ್ಕಾರ ಮಾತ್ರ ಎಫ್‌ಆರ್‌ಪಿ ನೀಡ್ತಿಲ್ಲ
  • ಅ.12ರಂದು ರೈತರ ಜೊತೆಗೆ ಸಭೆ ನಡೆಸಲು ನಿರ್ಧರ

ಹುಬ್ಬಳ್ಳಿ, ಸೆಪ್ಟೆಂಬರ್​​ 30: ಕೇಂದ್ರದಂತೆ ರಾಜ್ಯ ಸರ್ಕಾರವೂ ಎಫ್​ಆರ್​ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ಮಾಡಬಹುದು. ರಾಜ್ಯ ಸರ್ಕಾರಗಳಿಗೆ ಈ ಸ್ವಾತಂತ್ರ್ಯವನ್ನ ನೀಡಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್ ಹಾಗೂ ಹರಿಯಾಣ ರಾಜ್ಯ ಸರ್ಕಾರಗಳು ಎಫ್‌ಆರ್‌ಪಿ ನೀಡುತ್ತಿವೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ಎಫ್‌ಆರ್‌ಪಿ ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಆರೋಪಿಸಿದ್ದಾರೆ.

ಏನೇ ಸಮಸ್ಯೆ ಇದ್ದರೂ ಮುಕ್ತವಾಗಿ ಚರ್ಚೆಗೆ ನಾವು ಸಿದ್ಧ: ಪ್ರಲ್ಹಾದ್​​ ಜೋಶಿ 

ಹುಬ್ಬಳ್ಳಿಯಲ್ಲಿ ನಿನ್ನೆ ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರವಾಗಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಲ್ಹಾದ್​​ ಜೋಶಿ, ‘ಅಕ್ಟೋಬರ್​ 12ರಂದು ರೈತರ ಜೊತೆಗೆ ಸಭೆ ನಡೆಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರಿಗೆ ನೆರವಾಗುವ ಉತ್ತಮ ನಿರ್ಣಯ ತೆಗೆದುಕೊಳ್ಳಲಾಗುತ್ತದೆ. ಏನೇ ಸಮಸ್ಯೆ ಇದ್ದರೂ ಮುಕ್ತವಾಗಿ ಚರ್ಚೆಗೆ ನಾವು ಸಿದ್ಧ, ಅವರು ಬಂದಾಗ ಅವರೊಂದಿಗೆ ಗೌರವ ಮತ್ತು ಪ್ರೀತಿಯಿಂದ ನಾವು ಮಾತುಕತೆ ನಡೆಸಲು ಸಿದ್ಧ’ ಎಂದು ಹೇಳಿದರು.

ಇದನ್ನೂ ಓದಿ: ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳಲು ಮೋದಿ ಸರ್ಕಾರ ಬದ್ಧ ಎಂದ ಪ್ರಲ್ಹಾದ್ ಜೋಶಿ: ಸಮಸ್ಯೆಗಳ ಬಗ್ಗೆ ಚರ್ಚೆಗೆ ಆಹ್ವಾನ

‘2018ರಿಂದ ಇದೇ ಬೆಲೆ ಇದೆ, ಅದನ್ನು ಅಲ್ಲಗಳೆಯಲ್ಲ. 31 ರೂಪಾಯಿಗಿಂತ ಹೆಚ್ಚಿಗೆ ಮಾರಾಟ ಮಾಡಬಹುದು. ಕಡಿಮೆ ಬೆಲೆಗೆ ಮಾರಾಟ ಮಾಡುವಂತಿಲ್ಲ. ಕಾರ್ಖಾನೆಗಳ ಹಿತಾಸಕ್ತಿ ಕಾಯ್ದುಕೊಳ್ಳಲು ಈ ನಿಯಮ ಮಾಡಲಾಗಿದೆ. ಬೆಲೆಯಲ್ಲಿ ವ್ಯತಾಸ ಆದರೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಲಿದ್ದು, ಸಕ್ಕರೆ ಕಾರ್ಖಾನೆಗಳು ದಿವಾಳಿ ಆಗುವ ಸಾಧ್ಯತೆಗಳಿರುತ್ತೆ. ಆಗ ಬೆಂಬಲ ಬೆಲೆ ನೀಡುವ ಬಗ್ಗೆ ಚರ್ಚೆ ಬರುತ್ತದೆ’ ಎಂದರು.

LIVE TV

‘ಮಾರುಕಟ್ಟೆಯಲ್ಲಿ ಸಕ್ಕರೆ ಕಡಿಮೆ ಆದರೆ ಮಾತ್ರ ಅಂತಹ ಸಮಯದಲ್ಲಷ್ಟೇ ಸರ್ಕಾರ ಮಧ್ಯಪ್ರವೇಶಿಸುತ್ತದೆ. ಕನಿಷ್ಠ ಬೆಲೆ, ಬೆಂಬಲ ಬೆಲೆ ವಿಚಾರದಲ್ಲಿ ಗೊಂದಲ ಆಗುತ್ತಿದೆ. ರೈತರಿಗೆ ನೀಡುವುದನ್ನು ಎಫ್‌ಆರ್‌ಪಿ ಎಂದು ಕರೆಯುತ್ತಾರೆ. ಮೊದಲು 210 ರೂ ಇತ್ತು, ಈಗ 365 ರೂ. ಇದೆ’ ಎಂದು ಸ್ಪಷ್ಟನೆ ನೀಡಿದರು.

80 ಪೈಸೆ ಎಫ್‌ಆರ್‌ಪಿ ಹೆಚ್ಚಳ

‘ಯುಪಿಎ ಸರ್ಕಾರ 80 ಪೈಸೆ ಎಫ್‌ಆರ್‌ಪಿ ಹೆಚ್ಚಿಸಿದ್ದ ದಾಖಲೆ ಇದೆ. ಮೋದಿ ಸರ್ಕಾರಕ್ಕೂ ಮುನ್ನ ರೈತರಿಗೆ ಕಾರ್ಖಾನೆಗಳು ಹಣ ನೀಡುತ್ತಿರಲಿಲ್ಲ. ಸಾವಿರಾರು ಕೋಟಿ ರೂ ಬಾಕಿ ಉಳಿಸಿಕೊಂಡಿದ್ದವು. ನಮ್ಮ ಸರ್ಕಾರ ಬಂದ ಬಳಿಕ 16,500 ಕೋಟಿ ರೂ ಕೊಟ್ಟು ರೈತರಿಗೆ ಹಣ ನೀಡಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.

ಸಕ್ಕರೆ ಕಾರ್ಖಾನೆಗಳಿಂದ 1200 ಕೋಟಿ ಲೀಟರ್ ಎಥೆನಾಲ್ ಖರೀದಿ 

‘ಇಂದು ಕಬ್ಬಿನಿಂದ ಎಥೆನಾಲ್ ಉತ್ಪಾದನೆ ಹೆಚ್ಚಾಗಿದೆ. ಮೋದಿ ಸರ್ಕಾರ ಎಥೆನಾಲ್​​ಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಇಂದು 20% ಎಥೆನಾಲ್ ಬ್ಲೆಂಡ್ ಮಾಡಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಿಂದ 1200 ಕೋಟಿ ಲೀಟರ್ ಎಥೆನಾಲ್ ಸರ್ಕಾರ ಖರೀದಿ ಮಾಡುತ್ತಿದೆ. ಕಾರ್ಖಾನೆಗಳು ಈಗ ಹೆಚ್ಚಿನ ಎಥೆನಾಲ್ ಉತ್ಪಾದನೆ ಮಾಡುತ್ತಿವೆ. ಮುಂದೆ ಹೊಸ ಬದಲಾವಣೆಗಳಲ್ಲಿ ಬ್ಲೆಂಡಿಂಗ್ ಹೆಚ್ಚಾಗಬಹುದು. ಸಕ್ಕರೆ ಬೆಲೆ ಹೆಚ್ಚಾದಾಗ ಸಕ್ಕರೆ ಉತ್ಪಾದನೆ ಕಡಿಮೆ ಆಗಿದೆ. ಎಥೆನಾಲ್ ಉತ್ಪಾದನೆಯಿಂದ ಸಕ್ಕರೆ ಉತ್ಪಾದನೆ ಕಡಿಮೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿತು. ಸರ್ಕಾರದ ಎಥೆನಾಲ್ ಖರೀದಿಯಿಂದ ರೈತರಿಗೆ ಸಹಾಯವಾಗಿದೆ. ಎಥೆನಾಲ್ ಖರೀದಿ ಮಾಡುವಾಗ 14 ದಿನಗಳಲ್ಲಿ ಕಾರ್ಖಾನೆಯಿಂದ ರೈತರಿಗೆ ಕಬ್ಬಿಣ ಹಣ ಕೊಡಬೇಕು ಎಂದು ಷರತ್ತು ಹಾಕಿದೆ. ಮೊದಲು ವರ್ಷಗಟ್ಟಲೇ ರೈತರಿಗೆ ಹಣ ಕೊಡಲು ವಿಳಂಬ ಮಾಡುತ್ತಿದ್ದ ಕಾರ್ಖಾನೆಗಳು, ಈಗ ಸರಿಯಾದ ಸಮಯಕ್ಕೆ ರೈತರಿಗೆ ಹಣ ನೀಡಲಾಗುತ್ತಿದೆ. 98% ರೈತರಿಗೆ ಕಾರ್ಖಾನೆಗಳು ರೈತರಿಗೆ ಕಬ್ಬಿಣ ಹಣ ಪಾವತಿಸಿವೆ’ ಎಂದು ಅವರು ಹೇಳಿದ್ದಾರೆ.

30-31 ರೂ.ಗೆ ಸಕ್ಕರೆ ಮಾರಾಟ  

‘ಸಕ್ಕರೆ ಕನಿಷ್ಠ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈಗ ಕನಿಷ್ಠ ಬೆಲೆ 30-31 ರೂ.ನಲ್ಲಿ ಮಾರುವಂತೆ ನಿಯಮವಿದೆ. ಒಳ್ಳೆಯ ದರ ಬಂದಾಗ ಮಾರಬೇಕೆಂದು ರೂಲ್ಸ್ ಮಾಡಿದ್ದೇವೆ. 15 ಕಿ.ಮೀ. ಮಧ್ಯದಲ್ಲಿ ಒಂದು ಸಕ್ಕರೆ ಫ್ಯಾಕ್ಟರಿ ಇರಬೇಕು. ರೈತರಿಗೆ ಉಪಯೋಗವಾಗಲೆಂದು ಈ ವ್ಯವಸ್ಥೆ ಮಾಡಲಾಗಿದೆ. ರೈತರಿಗೆ ಮೊದಲ ಆದ್ಯತೆ, ಗ್ರಾಹಕರಿಗೆ ಎರಡನೇ ಆದ್ಯತೆ ನೀಡಲಾಗುತ್ತದೆ. ಈ ವಿಚಾರವಾಗಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡುವುದಾಗಿ ಹೇಳಿದ್ದಾರೆ’ ಎಂದರು.

ವರದಿ: ನಟರಾಜ್​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ