AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಸ್‌ಪಿ-ಎಫ್‌ಆರ್‌ಪಿ ಗೊಂದಲಕ್ಕೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ; ಈ ವರ್ಷವೂ FRP ಹೆಚ್ಚಿಸುವ ಭರವಸೆ

ಕಬ್ಬು ಬೆಳೆಗಾರರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಂಎಸ್‌ಪಿ ಮತ್ತು ಎಫ್‌ಆರ್‌ಪಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಎಂಎಸ್‌ಪಿ ಸಕ್ಕರೆಗೆ, ಎಫ್‌ಆರ್‌ಪಿ ಕಬ್ಬಿಗೆ ಅನ್ವಯಿಸುತ್ತದೆ ಎಂದಿರುವ ಅವರು, ಈ ವರ್ಷವೂ ಎಫ್‌ಆರ್‌ಪಿ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ. ಅಕ್ಟೋಬರ್‌ 12ರಂದು ರೈತ ಮುಖಂಡರೊಂದಿಗೆ ಸಭೆ ನಡೆಸುವ ನಿರೀಕ್ಷೆಯಿದೆ ಎಂದಿದ್ದಾರೆ.

ಎಂಎಸ್‌ಪಿ-ಎಫ್‌ಆರ್‌ಪಿ ಗೊಂದಲಕ್ಕೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ; ಈ ವರ್ಷವೂ FRP ಹೆಚ್ಚಿಸುವ ಭರವಸೆ
ಪ್ರಲ್ಹಾದ್ ಜೋಶಿ (ಚಿತ್ರ ಕೃಪೆ: ಸಚಿವರ ಎಕ್ಸ್ ಖಾತೆ)Image Credit source: @JoshiPralhad
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 01, 2026 | 7:31 AM

Share

ಮುಖ್ಯಾಂಶಗಳು

  • ಈ ವರ್ಷವೂ FRP ಹೆಚ್ಚಳ: ರೈತರಿಗೆ ಪ್ರಲ್ಹಾದ್ ಜೋಶಿ ಸಿಹಿ ಸುದ್ದಿ
  • ಸಕ್ಕರೆ ಕಾರ್ಖಾನೆಗಳಿಂದ 1200 ಕೋಟಿ ಲೀಟರ್‌ ಎಥೆನಾಲ್‌ ಖರೀದಿಗೆ ಆದ್ಯತೆ
  • ಕೇಂದ್ರದ FRPಯಂತೆ ಕರ್ನಾಟಕ ಸರ್ಕಾರವೂ SAP ತಂದು ರೈತರಿಗೆ ನೆರವಾಗಲಿ ಎಂದ ಜೋಶಿ

ಹುಬ್ಬಳ್ಳಿ, ಅಕ್ಟೋಬರ್ 1: ಸಕ್ಕರೆ ಕನಿಷ್ಠ ಮಾರಾಟ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರು ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಎಂಎಸ್‌ಪಿ (Minimum Selling Price) ಮತ್ತು ಎಫ್‌ಆರ್‌ಪಿ (Fair and Remunerative Price) ನಡುವೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಎಂಎಸ್‌ಪಿ ಎಂದರೆ ಮಿನಿಮಮ್‌ ಸಪೋರ್ಟ್‌ ಪ್ರೈಸ್‌ ಎಂಬ ತಪ್ಪು ಕಲ್ಪನೆ ಇದೆ. ಆದರೆ ಸಕ್ಕರೆಗೆ ಅನ್ವಯಿಸುವ ಎಂಎಸ್‌ಪಿ ಎಂದರೆ ಮಿನಿಮಮ್‌ ಸೆಲ್ಲಿಂಗ್‌ ಪ್ರೈಸ್‌, ಅಂದರೆ ಕನಿಷ್ಠ ಮಾರಾಟ ಬೆಲೆ. ಎಂಎಸ್‌ಪಿ ಸಕ್ಕರೆಗೆ ಅನ್ವಯಿಸಿದರೆ, ಎಫ್‌ಆರ್‌ಪಿ ಕಬ್ಬಿಗೆ ಅನ್ವಯಿಸುತ್ತದೆ ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಯಾವುದೇ ಕಾರಣಕ್ಕೂ ಎಂಎಸ್‌ಪಿಗಿಂತ ಕಡಿಮೆ ಬೆಲೆಗೆ ಸಕ್ಕರೆ ಮಾರಾಟ ಮಾಡುವಂತಿಲ್ಲ. 2018ರಲ್ಲಿ ಕೇಂದ್ರ ಸರ್ಕಾರ ಸಕ್ಕರೆಗೆ ಎಂಎಸ್‌ಪಿ ಜಾರಿಗೊಳಿಸಿದ್ದು, ಪ್ರಸ್ತುತ ಸಕ್ಕರೆಯ ಎಂಎಸ್‌ಪಿ ₹31 ಇದೆ. ಆದರೆ ಮಾರುಕಟ್ಟೆಯಲ್ಲಿ ಸಕ್ಕರೆ ₹40ರಿಂದ ₹47ರವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷವೂ ₹38-39ರ ದರದಲ್ಲಿ ಮಾರಾಟವಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

ಅ.12ಕ್ಕೆ ಕಬ್ಬು ಬೆಳೆಗಾರರ ಜತೆ ಸಭೆ ನಿರೀಕ್ಷೆ

ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಮುಕ್ತ ಚರ್ಚೆಗೆ ಸಿದ್ಧವಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ರೈತ ಮುಖಂಡರೊಂದಿಗೆ ಇದೇ ಅಕ್ಟೋಬರ್‌ 12ರಂದು ಸಭೆ ನಡೆಸುವ ನಿರೀಕ್ಷೆಯಿದ್ದು, ಅಂದು ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಪರಿಹಾರ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

ಕಬ್ಬು ಬೆಳೆಗಾರರು ಮಳೆ-ಬಿಸಿಲಿನಲ್ಲಿ ಪ್ರತಿಭಟನೆ ನಡೆಸುವ ಅಗತ್ಯವಿಲ್ಲ. ರೈತ ಮುಖಂಡರು ದೆಹಲಿಗೆ ಬಂದು ಸಂಬಂಧಪಟ್ಟ ಸಚಿವಾಲಯಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಿ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಫಲಪ್ರದ ಕ್ರಮ ಕೈಗೊಳ್ಳಲಾಗುವುದು ಎಂದು ಜೋಶಿ ಭರವಸೆ ನೀಡಿದ್ದಾರೆ.

ಈ ವರ್ಷವೂ ಎಫ್‌ಆರ್‌ಪಿ ಹೆಚ್ಚಳ: ಜೋಶಿ

ಕೇಂದ್ರ ಸರ್ಕಾರ ಈ ವರ್ಷವೂ ಎಫ್‌ಆರ್‌ಪಿ ಹೆಚ್ಚಳ ಮಾಡಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಪ್ರತಿ ವರ್ಷ ಎಫ್‌ಆರ್‌ಪಿ ಹೆಚ್ಚಿಸಲಾಗುತ್ತಿದೆ. 2026ರ ಮೇ ತಿಂಗಳಲ್ಲಿ ಎಫ್‌ಆರ್‌ಪಿಯನ್ನು ₹365ಕ್ಕೆ ಹೆಚ್ಚಿಸಲಾಗಿತ್ತು. ಈ ವರ್ಷವೂ ಮತ್ತೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ. 2026ರ ಫೆಬ್ರವರಿಯಲ್ಲಿ ರೈತ ಮುಖಂಡರು ತಮ್ಮನ್ನು ಭೇಟಿ ಮಾಡಿ ಎಫ್‌ಆರ್‌ಪಿ ಹೆಚ್ಚಳಕ್ಕೆ ಮನವಿ ಮಾಡಿದ್ದರು. ಬೆಲೆ ನಿಗದಿ ಸಮಿತಿ, ಕಬ್ಬು ಆಯುಕ್ತರು ಹಾಗೂ ರಾಜ್ಯ ಸರ್ಕಾರದ ಶಿಫಾರಸುಗಳನ್ನು ಪರಿಗಣಿಸಿ ಎಫ್‌ಆರ್‌ಪಿ ಹೆಚ್ಚಳದ ಕುರಿತು ರೈತಪರ ನಿಲುವು ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

₹16,600 ಕೋಟಿ ಕಬ್ಬಿನ ಬಾಕಿ ಪಾವತಿ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಬ್ಬು ಬೆಳೆಗಾರರಿಗೆ ಬರಬೇಕಿದ್ದ ₹16,600 ಕೋಟಿ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ಹೇಳಿದ್ದಾರೆ. ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ನೇರವಾಗಿ ಪಾವತಿಸುವ ವ್ಯವಸ್ಥೆ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. 2014ಕ್ಕೂ ಮೊದಲು ಯುಪಿಎ ಸರ್ಕಾರದ ಅವಧಿಯಲ್ಲಿ ಕಬ್ಬಿನ ಬಾಬ್ತು ಹಣ ಪಡೆಯಲು ರೈತರು ವರ್ಷಗಟ್ಟಲೆ ಕಾಯಬೇಕಾಗಿತ್ತು ಎಂದು ಆರೋಪಿಸಿದ ಜೋಶಿ, ಎಕ್ಸ್‌ ಮಿಲ್‌ ದರದಲ್ಲಿನ ಸಮಸ್ಯೆಗಳಿಂದ ಸಕ್ಕರೆ ಕಾರ್ಖಾನೆಗಳು ಹಾಗೂ ರೈತರು ತೊಂದರೆ ಅನುಭವಿಸುತ್ತಿದ್ದರು. ಮೋದಿ ಸರ್ಕಾರ ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಎಥೆನಾಲ್ ಖರೀದಿಗೆ ಆದ್ಯತೆ

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸಬಲತೆಗೆ ಎಥೆನಾಲ್‌ ಉತ್ಪಾದನೆ ಮತ್ತು ಖರೀದಿಗೆ ಕೇಂದ್ರ ಸರ್ಕಾರ ಉತ್ತೇಜನ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ. ಎಥೆನಾಲ್‌ ಖರೀದಿಯನ್ನು 38 ಕೋಟಿ ಲೀಟರ್‌ನಿಂದ 1,200 ಕೋಟಿ ಲೀಟರ್‌ಗೆ ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಕಬ್ಬು ಬೆಳೆಗಾರರಿಗೆ ಹಣ ಪಾವತಿಯಾಗುವ ಅವಧಿ ಕಡಿಮೆಯಾಗಿದೆ ಎಂದು ಜೋಶಿ ಹೇಳಿದ್ದಾರೆ. ಕಳೆದ ವರ್ಷ ಶೇ.100ರಷ್ಟು ಪಾವತಿಯಾಗಿದ್ದರೆ, ಈ ವರ್ಷ ಈಗಾಗಲೇ ಶೇ 97ರಷ್ಟು ಹಣ ಪಾವತಿಯಾಗಿದೆ ಎಂದು ತಿಳಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳಲ್ಲಿ ಉತ್ಪಾದನೆಯಾಗುವ ಎಥೆನಾಲ್‌ಗೆ ಕೇಂದ್ರ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ. ಬಳಿಕ ಇತರ ಮೂಲಗಳಿಂದ ಉತ್ಪಾದನೆಯಾಗುವ ಎಥೆನಾಲ್ ಖರೀದಿಸಲಾಗುತ್ತಿದೆ. ಇದರಿಂದ ಸಕ್ಕರೆ ಕಾರ್ಖಾನೆಗಳು ಹಾಗೂ ಕಬ್ಬು ಬೆಳೆಗಾರರಿಗೆ ಆರ್ಥಿಕ ನೆರವು ದೊರೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಲ್ಹಾದ್ ಜೋಶಿ ಎಕ್ಸ್ ಸಂದೇಶ

ಕರ್ನಾಟಕ ಸರ್ಕಾರವೂ ಎಸ್‌ಎಪಿ ತರಲಿ

ಕಬ್ಬಿನ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಜತೆಗೆ ರಾಜ್ಯ ಸರ್ಕಾರಗಳು ಎಸ್‌ಎಪಿ ಜಾರಿಗೆ ತರಲು ಕಾನೂನಾತ್ಮಕ ಅವಕಾಶವಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಉತ್ತರ ಪ್ರದೇಶ, ಪಂಜಾಬ್‌, ಹರಿಯಾಣ ಹಾಗೂ ಉತ್ತರಾಖಂಡ ಸರ್ಕಾರಗಳು ಎಸ್‌ಎಪಿ ಜಾರಿಗೊಳಿಸಿವೆ. ಇದೇ ರೀತಿಯಲ್ಲಿ ಕರ್ನಾಟಕ ಸರ್ಕಾರವೂ ಎಸ್‌ಎಪಿ ಜಾರಿಗೆ ತರಲಿ ಎಂದು ಸಲಹೆ ನೀಡಿದ್ದಾರೆ. ರಾಜ್ಯ ಸರ್ಕಾರ ರೈತರ ಕಬ್ಬಿಗೆ ಹೆಚ್ಚುವರಿ ಬೆಲೆ ನೀಡಲು ಎಸ್‌ಎಪಿ ಜಾರಿಗೆ ತರಬೇಕು. ಕರ್ನಾಟಕ ಸರ್ಕಾರದಿಂದ ಇದು ಏಕೆ ಸಾಧ್ಯವಾಗುತ್ತಿಲ್ಲ ಎಂದು ಜೋಶಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಪ್ರತಿಭಟನೆ ಬೆನ್ನಲ್ಲೇ ಪ್ರಲ್ಹಾದ್ ಜೋಶಿ ಸ್ಪಷ್ಟನೆ: ಕರ್ನಾಟಕ ಸರ್ಕಾರ FRP ನೀಡ್ತಿಲ್ಲ ಎಂದ ಕೇಂದ್ರ ಸಚಿವ

ಇದೇ ವೇಳೆ, ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ನೀರಿನ ಶುಲ್ಕವನ್ನು ₹5 ಲಕ್ಷದಿಂದ ₹1 ಕೋಟಿಗೆ ಹೆಚ್ಚಿಸಿರುವುದರಿಂದ ಕಾರ್ಖಾನೆಗಳ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ ಎಂದು ಜೋಶಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಎಸ್‌ಎಪಿ ಜಾರಿಗೆ ತರುವ ಬದಲು ಸಕ್ಕರೆ ಕಾರ್ಖಾನೆಗಳ ಮೇಲಿನ ಶುಲ್ಕ ಹೆಚ್ಚಿಸಿದೆ ಎಂದು ಟೀಕಿಸಿದ್ದಾರೆ.

ಕಬ್ಬು ಬೆಳೆಗಾರರ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಕೃಷಿ ಸಚಿವಾಲಯ, ಪೆಟ್ರೋಲಿಯಂ ಸಚಿವಾಲಯ, ರೈತ ಮುಖಂಡರು ಹಾಗೂ ರಾಜ್ಯ ಸರ್ಕಾರವನ್ನು ಒಳಗೊಂಡಂತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ