AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ?

ಕೆಪಿಸಿಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಪುತ್ರಿಯರಿಗೆ ಸರ್ಕಾರ ಹುದ್ದೆ ಕೊಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳೀಬಂದಿದ್ದು, ಒಬ್ಬ ಮಗಳಿಗೆ ಈಗಾಗಲೇ ಸರ್ಕಾರಿ ಉದ್ಯೋಗ ಕೊಡಿಸಿದ್ದಾರೆ, ಮತ್ತೊಬ್ಬ ಮಗಳಿಗೆ ಹುದ್ದೆ ಕೊಡಿಸಲು ಯತ್ನಿಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ಸುಳ್ಳು ಆದಾಯದ ಪ್ರಮಾಣ ಪತ್ರ ಸಲ್ಲಿಕೆಗೂ ಸಹಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕೆಪಿಎಸ್‌ಸಿ ಅಧ್ಯಕ್ಷರ ಅಧಿಕಾರ ದುರುಪಯೋಗ ಸಂಬಂಧ ಉನ್ನತ ತನಿಖೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದು, ಈ ಸಂಬಂಧ ಸಿಎಂ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ?
DK Shivakumar And Pralhad Joshi (File Photo)
ರಮೇಶ್ ಬಿ. ಜವಳಗೇರಾ
|

Updated on: Jul 01, 2026 | 9:42 PM

Share

ಮುಖ್ಯಾಂಶಗಳು

  • ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಧಿಕಾರ ದುರುಪಯೋಗ ಆರೋಪ
  • ಶಿವಶಂಕರಪ್ಪ ಸಾಹುಕಾರ್ ತಮ್ಮ ಪುತ್ರಿಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿ, ಸ್ವಜನಪಕ್ಷಪಾತ
  • ಸಿಎಂಗೆ, ರಾಜ್ಯಪಾಲರಿಗೆ ಪತ್ರ ಬರೆದು ತನಿಖೆಗೆ ಒತ್ತಾಯಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು, (ಜುಲೈ 01): ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi )ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. KPSC ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರು ಅಧಿಕಾರ ದುರ್ಬಳಕೆ ಮತ್ತು ಸ್ವಜನಪಕ್ಷಪಾತ ಎಸಗಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಕೈಗಾರಿಕಾ ವಿಸ್ತರಣಾಧಿಕಾರಿ (Industrial Extension Officers) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಕುರಿತು KPSC ಕಾರ್ಯದರ್ಶಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದಾರೆ. ಈ ಕುರಿತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಸಚಿವ ಜೋಶಿ ಸಿಎಂಗೆ ಒತ್ತಾಯಿಸಿದ್ದಾರೆ.

ನ್ಯಾಯ ತತ್ವಕ್ಕೆ ವಿರುದ್ಧ ನಿಲುವು

ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರೇ ಅಭ್ಯರ್ಥಿಗಳಾಗಿದ್ದರು. ತಾವೇ ಆಯೋಗದ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಪುತ್ರಿಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಲ್ಲದೆ, ಇತ್ತೀಚೆಗೆ ಹೊರಬಿದ್ದ ಆಯ್ಕೆ ನಡಾವಳಿಗಳಿಗೂ (Selection Proceedings) ಸಹಿ ಹಾಕಿದ್ದಾರೆ. ಇದು ಸಹಜವಾಗಿಯೇ ನ್ಯಾಯ ತತ್ವಕ್ಕೆ (Principles of Natural Justice) ಸಂಪೂರ್ಣ ವಿರುದ್ಧ ನಿಲುವಾಗಿದೆ. ಇದರಲ್ಲಿ ನೈತಿಕತೆಯ ಉಲ್ಲಂಘನೆಯಾಗಿದೆ ಎಂದು ಪ್ರಲ್ಹಾದ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ಟೆಸ್ಟ್: ಏರ್‌ಟೆಲ್, ಜಿಯೋ ಮುಂದು; ತೀರಾ ಹಿಂದಿರುವ ಬಿಎಸ್‌ಎನ್‌ಎಲ್!

ಮೀಸಲಾತಿ ಮತ್ತು ಆದಾಯ ನಿಯಮ ಉಲ್ಲಂಘನೆ

ಅಧ್ಯಕ್ಷರ ಪುತ್ರಿಯರ ಪೈಕಿ ಒಬ್ಬರು ಪಡೆದಿರುವ ಮೀಸಲಾತಿ ಅರ್ಹತೆ ಬಗ್ಗೆಯೂ ಸಂಶಯಗಳು ವ್ಯಕ್ತವಾಗಿವೆ. ನಿಗದಿಪಡಿಸಿದ ಆದಾಯದ ಮಾನದಂಡಗಳನ್ನು (Income Criteria) ಪೂರೈಸದೇ ಇರುವುದು ಒಂದೆಡೆಯಾದರೆ, ಸುಳ್ಳು ಮಾಹಿತಿ ನೀಡಿ ಮೀಸಲಾತಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದು ಅರ್ಹ ಮತ್ತು ಪ್ರಾಮಾಣಿಕ ಕೆಪಿಎಸ್‌ಸಿ ಆಕಾಂಕ್ಷಿಗಳಿಗೆ ಬಗೆದ ದ್ರೋಹ. ಇಡೀ ನೇಮಕಾತಿ ವ್ಯವಸ್ಥೆಗೇ ಅಂಟಿದ ಕಪ್ಪುಚುಕ್ಕೆಯಾಗಿದೆ ಎಂದು ಸಚಿವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ತನಿಖೆಗೆ ಸಿಎಂಗೆ ಮನವಿ

KPSC ಅಧ್ಯಕ್ಷರಿಂದ ಬಹಿರಂಗವಾಗಿ ನಡೆದಿರುವ ಈ ಸ್ವಜನಪಕ್ಷಪಾತ ಮತ್ತು ಅಧಿಕಾರ ದುರುಪಯೋಗ ಕುರಿತು ಮುಖ್ಯಮಂತ್ರಿ ಗಮನ ಸೆಳೆದಿರುವ ಜೋಶಿ, ಪಾರದರ್ಶಕತೆ ಕಾಯ್ದುಕೊಳ್ಳಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯಪಾಲರಿಗೂ ಪತ್ರ ಬರೆದು ಮನವಿ

ಈ ಪ್ರಕರಣ ಕೆಪಿಎಸ್‌ಸಿ ಸಂಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತಂದಿದೆ. ಅಲ್ಲದೇ, ಅರ್ಹತೆ ಆಧಾರಿತ ವ್ಯವಸ್ಥೆಯನ್ನೇ ಪ್ರಶ್ನಿಸುವಂತಾಗಿದೆ. ಹೀಗಾಗಿ ಈ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯಪಾಲರಿಗೂ ಪತ್ರ ಬರೆದು ವಿನಂತಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ಪಾವಿತ್ರ್ಯತೆ ಕಾಪಾಡಲು ಮತ್ತು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಲು ಈ ತನಿಖೆ ಅತ್ಯಗತ್ಯವಾಗಿದೆ ಎಂದು ಸಚಿವರು ಅಭಿಪ್ರಾಯಿಸಿದ್ದು, ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೂ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ