ಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು: ಪ್ರಲ್ಹಾದ್ ಜೋಶಿ ಕಿಡಿ

ಅಯೋಧ್ಯೆಗೆ ತೆರಳುವ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯದಿಂದಲೇ ಇಂಥ ಘಟನೆಗಳು ರಾಜ್ಯದಲ್ಲಿ ಸಂಭವಿಸುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್ ಅಶೋಕ ಸಹ ಘಟನೆಯನ್ನು ಖಂಡಿಸಿದ್ದಾರೆ. ಗದಗ ಸೇರಿ ಹಲವೆಡೆ ಪ್ರತಿಭಟನೆಗಳೂ ನಡೆಯುತ್ತಿದೆ.

ಅಯೋಧ್ಯೆ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು: ಪ್ರಲ್ಹಾದ್ ಜೋಶಿ ಕಿಡಿ
ಪ್ರಲ್ಹಾದ್ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on: Feb 23, 2024 | 1:55 PM

ಹುಬ್ಬಳ್ಳಿ, ಬೆಂಗಳೂರು, ಫೆಬ್ರವರಿ 23: ಅಯೋಧ್ಯೆಯ ರಾಮ ಮಂದಿರಕ್ಕೆ (Ayodhya Ram Mandir) ತೆರಳುತ್ತಿದ್ದ ರೈಲಿಗೆ (Train) ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ ಎಂದು ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ. ಗಲಾಟೆ ಮಾಡಿದವರನ್ನ ಒದ್ದು ಒಳಗಡೆ ಹಾಕಬೇಕು ಎಂದರು.

ಮತ ಬ್ಯಾಂಕ್​​​ಗೋಸ್ಕರ ಇಂತಹ ಘಟನೆಗಳಿಗೆ ಕಾಂಗ್ರೆಸ್ ಉತ್ತೇಜನ ನೀಡುತ್ತಿದೆ. ಅಯೋಧ್ಯಗೆ ಹೋಗಿ ಬಂದರೆ ತಪ್ಪೇನು? ಬೆದರಿಕೆ ಹಾಕಿದವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ ಎಂದು ಜೋಶಿ ಆಗ್ರಹಿಸಿದ್ದಾರೆ.

ಪಿಎಫ್‌ಐ ಕಾರ್ಯಕರ್ತರಿಂದ ಬೆದರಿಕೆ: ಅಶೋಕ

ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ಮಂತ್ರಿ ಆಗುವ ಕನಸು ಕಂಡಿದ್ದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೂ ಮನ್ನವೇ ಗೋಧ್ರಾ ಹತ್ಯೆ ಬಗ್ಗೆ ಉಲ್ಲೇಖ ಮಾಡಿದ್ದರು. ಅಯೋಧ್ಯೆಗೆ ಹೋಗುವವರು ಹಿಂದೂಗಳು. ಅವರಿಗೆ ಮುಸ್ಲಿಂ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ಪಿಎಫ್‌ಐ ನವರು ಬೆದರಿಕೆ‌ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆರೋಪಿಸಿದ್ದಾರೆ.

ಕೋಲಾರದಲ್ಲಿ ತಲವಾರ್ ಹಾಕಿದವರು ಇಂತಹ ಪ್ರಕರಣ ಮಾಡುತ್ತಿದ್ದಾರೆ. ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಆಗಿಲ್ಲ. ಅದು ಬಿಟ್ಟು ಟ್ರೈನ್ ಕಳಿಸುವ ಮಾತನ್ನು ಪೊಲೀಸರು ಹೇಳಿದ್ದಾರೆ. ಬೆದರಿಸಿದವರ ವಿರುದ್ಧ ಕ್ರಮ ಆಗಬೇಕು ಎಂದು ಅಶೋಕ ಆಗ್ರಹಿಸಿದ್ದಾರೆ.

ಗದಗದಲ್ಲಿ ಶ್ರೀರಾಮ ಸೇನಾ ಕಾರ್ಯಕರ್ತರಿಂದ ಪ್ರತಿಭಟನೆ

ಹೊಸಪೇಟೆಯಲ್ಲಿ ಅಯೋಧ್ಯೆ ರೈಲು ತಡೆದು ಗಲಾಟೆ ಪ್ರಕರಣ ಖಂಡಿಸಿ ಶ್ರೀರಾಮ ಸೇನಾ ಕಾರ್ಯಕರ್ತರು ಗದಗ ನಗರದ ಟಾಂಗಾಕೂಟನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಗೋಧ್ರಾ ಹತ್ಯಾಕಾಂಡ ಮರಕಳಿಸುವಂತೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಐದು ಜನ ಮುಸ್ಲಿಂ ಯುವಕರ ತಂಡದ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಬೆದರಿಕೆ: ಬೆಂಕಿ ಹಚ್ಚುವುದಾಗಿ ಯುವಕರಿಂದ ಧಮ್ಕಿ

ಪ್ರಕಣವನ್ನು ಕೇಂದ್ರ ತನಿಖಾ ತಂಡದಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ ಕಾರ್ಯಕರ್ತರು, ಮುಸ್ಲಿಂ ಗೂಂಡಾಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಸುಮಾರು 14,00 ಕ್ಕೂ ಹೆಚ್ಚು ಯಾತ್ರಿಕರು ಮೈಸೂರು- ಅಯೋಧ್ಯೆ ಧಾಮಾ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಿಡಿಗೇಡಿಗಳು ರೈಲಿಗೆ ಬೆಂಕಿ ಹಚ್ಚುವ ಬೆದರಿಕೆಯೊಡ್ಡಿದ್ದರು. ಪರಿಣಾಮವಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಾತ್ರಿಕರು ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ರೈಲು ಸುಮಾರು 2 ತಾಸು ವಿಳಂಬವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ