ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ: ಪ್ರಲ್ಹಾದ ಜೋಶಿ

ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನರಿಗೆ ನೀಡಿದ್ದ ವಚನದಂತೆ ‘ಗ್ಯಾರಂಟಿ’ ಯೋಜನೆಗಳೂ ಜನರಿಗೆ ಸಿಗುತ್ತಿಲ್ಲ. ಇತ್ತ ಜನರಿಗೆ ತಲುಪಬೇಕಿದ್ದ ಸರ್ಕಾರದ ಯೋಜನೆಗಳ ಪ್ರಯೋಜನಗಳೂ ಜನರಿಗೆ ತಲುಪುತ್ತಿಲ್ಲ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ: ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ
Edited By:

Updated on: Nov 16, 2023 | 8:07 AM

ಹುಬ್ಬಳ್ಳಿ, ನವೆಂಬರ್ 15: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಜೋಶಿ, ರಾಜ್ಯದ ಆರ್ಥಿಕತೆಯ ಬೆಳವಣಿಗೆಯನ್ನು ಕುಂಠಿತಗೊಳಿಸಿದ ನಂತರ ಕಾಂಗ್ರೆಸ್ ಸರ್ಕಾರವು ಈಗ ಕರ್ನಾಟಕದ ವಿದ್ಯಾರ್ಥಿಗಳಿಗೆ ಕರಾಳ ದಿನಗಳ ‘ಗ್ಯಾರಂಟಿ’ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಹರಿಹಾಯ್ದಿರುವ ಅವರು, ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನರಿಗೆ ನೀಡಿದ್ದ ವಚನದಂತೆ ‘ಗ್ಯಾರಂಟಿ’ ಯೋಜನೆಗಳೂ ಜನರಿಗೆ ಸಿಗುತ್ತಿಲ್ಲ. ಇತ್ತ ಜನರಿಗೆ ತಲುಪಬೇಕಿದ್ದ ಸರ್ಕಾರದ ಯೋಜನೆಗಳ ಪ್ರಯೋಜನಗಳೂ ಜನರಿಗೆ ತಲುಪುತ್ತಿಲ್ಲ ಎಂದು ಟೀಕಿಸಿದ್ದಾರೆ.

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನದ ಶೇಕಡಾ 85 ರಷ್ಟನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ ಎಂಬುದು ತಿಳಿದು ನನಗೆ ಆಘಾತವಾಗಿದೆ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, ರಾಜ್ಯ ಸರ್ಕಾರದ ನಡೆ ಬಗ್ಗೆ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Wed, 15 November 23