ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ಕಿಡಿ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ ಎಂದು ಪ್ರಲ್ಹಾದ್​ ಜೋಶಿ ಕಿಡಿಕಾರಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ಕಿಡಿ
ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ಕಿಡಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 15, 2024 | 6:04 PM

ಬೆಂಗಳೂರು, ಜೂನ್​ 15: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಆ ಮೂಲಕ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಲಿದೆ. ಸದ್ಯ ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಅಭಿವೃದ್ಧಿ ಕೇಳಬೇಡಿ.. ತೊಗೊಳ್ರಪ್ಪ ಕೊಟ್ರು ಚೊಂಬು.. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರೂ, ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ.

ಪ್ರಲ್ಹಾದ್​ ಜೋಶಿ ಟ್ವೀಟ್​

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯವನ್ನು ರಾಜ್ಯಕ್ಕೆ ನೀಡಿದ್ದು, ಅಧಿಕಾರ ವಹಿಸಿಕೊಂಡ ಕಳೆದ 1.5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ. ಈಗ ನೇರವಾಗಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Petrol Diesel Price Hike: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ವಿಪಕ್ಷ ನಾಯಕ ಆರ್​. ಅಶೋಕ್​ ಕೂಡ ಟ್ವೀಟ್ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್​ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಪೆಟ್ರೋಲ್, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:50 pm, Sat, 15 June 24

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ