ಅಂಬಾರಿ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ: ಪತ್ರದ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಚಿನ್ನದ ಅಂಬಾರಿ‌ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ ಕೇಳಿಬಂದಿದೆ. ಸದ್ಯ ಈ ವಿಚಾರವಾಗಿ ಪತ್ರ ಬರೆಯುವ ಮೂಲಕ ಗೊಂದಲಗಳಿಗೆ ಸ್ವತಃ ಪ್ರಮೋದಾದೇವಿ ಒಡೆಯರ್ ತೆರೆಯೆಳಿದಿದ್ದಾರೆ. ಇದು ಬೇಜವಾಬ್ದಾರಿ ಹೇಳಿಕೆ. ಏಕೆಂದರೆ ಅಂಬಾರಿಯನ್ನು ಮಧ್ಯಾಹ್ನ 2 ಗಂಟೆಯ ನಂತರ 2 ನಿಮಿಷಕ್ಕೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.

ಅಂಬಾರಿ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ: ಪತ್ರದ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ
ಅಂಬಾರಿ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ: ಪತ್ರದ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ
Follow us
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 13, 2024 | 5:04 PM

ಮೈಸೂರು, ಅಕ್ಟೋಬರ್​​ 13: ನಾಡಹಬ್ಬ ಮೈಸೂರು ದಸರಾಗೆ (Dasara) ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಕಳೆದ 10 ದಿನಗಳಿಂದ ವರ್ಣರಂಜಿತವಾಗಿ ನಡೆದ ಮೈಸೂರು ದಸರಾ ಪಂಜಿನ ಕವಾಯತಿನ ಮೂಲಕ ಸಾಂಪ್ರದಾಯಿಕವಾಗಿ ಅಂತ್ಯವಾಗಿದೆ. ಆದರೆ ಈ ಮಧ್ಯೆ ಚಿನ್ನದ ಅಂಬಾರಿ‌ ಕೊಡುವುದು ತಡವಾಯಿತು ಎಂಬ ಆರೋಪ ಕೇಳಿಬಂದಿದೆ. ಇದೀಗ ಈ ವಿಚಾರಕ್ಕೆ ಸ್ವತಃ ಪ್ರಮೋದಾದೇವಿ ಒಡೆಯರ್ ಪತ್ರದ ಮೂಲಕ​ ಸ್ಪಷ್ಟನೆ ನೀಡಿದ್ದಾರೆ.

ಇದು ಬೇಜವಾಬ್ದಾರಿ ಹೇಳಿಕೆ ಎಂದು ನಾನು ಹೇಳಲು ಬಯಸುತ್ತೇನೆ. ಏಕೆಂದರೆ ಅಂಬಾರಿಯನ್ನು ಮಧ್ಯಾಹ್ನ 2 ಗಂಟೆಯ ನಂತರ 2 ನಿಮಿಷಕ್ಕೆ ಹಸ್ತಾಂತರಿಸಲಾಗಿದೆ. ಈ ವಿಷಯ ನಮಗೂ ಆತಂಕ ಉಂಟು ಮಾಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Mysuru Dasara: ಮೈಸೂರು ದಸರಾ ಜಂಬೂಸವಾರಿ: ಅದ್ಭುತ ಕ್ಷಣ ಕಣ್ತುಂಬಿಕೊಂಡ ಕೋಟ್ಯಂತರ ಜನರು

ಎಲ್ಲಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಾವು ಪ್ರಯತ್ನಿಸಿದರೂ ಮತ್ತು ಅಂಬಾರಿ ಸಿದ್ಧವಾಗಿದ್ದರೂ ಸಂಬಂಧಿಸಿದ ಸಿಬ್ಬಂದಿಗಳು ಸರಿಯಾಗಿ ಜನಸಂದಣಿ ನಿರ್ವಹಣೆ ಮಾಡದ ಮತ್ತು ಕೆಲವು ಸರ್ಕಾರಿ ಕಾರುಗಳನ್ನು ಮಾರ್ಗ ಮಧ್ಯೆದಲ್ಲಿ ನಿಲ್ಲಿಸಿದ್ದರಿಂದ ಅಂಬಾರಿ‌ ಸ್ಥಳಾಂತರಿಸಲು ತೊಂದರೆ ಆಯಿತು.

ಅಂಬಾರಿ‌ ಹಸ್ತಾಂತರದ ಸಮಯದ ಬಗ್ಗೆ ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ನಾನು ಈ ಹೇಳಿಕೆಯನ್ನು ನೀಡಿದ್ದೇನೆ. ಸಂಬಂಧಪಟ್ಟ ಎಲ್ಲರಿಗೂ ಅನಗತ್ಯ ಆತಂಕವನ್ನು ತಪ್ಪಿಸುವ ಉದ್ದೇಶ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ. ಮುಂದೆ ಈ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಫಲಪುಷ್ಪಾ ಪ್ರದರ್ಶನದಲ್ಲಿ ಅಕ್ರಮವಾಗಿ ಹಣ ವಸೂಲಿ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ

ಮೈಸೂರು ಫಲಪುಷ್ಪ ಪ್ರದರ್ಶನದಲ್ಲಿ ಸಿಬ್ಬಂದಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ್ದು, ಈ ಕುರಿತು ಪ್ರಶ್ನೆ ಮಾಡಿದವರ ಮೇಲೆ ಹಲ್ಲೆಗೆ ಯತ್ನ ಆರೋಪ ಕೇಳಿಬಂದಿದೆ.ಇಂದು ಉಚಿತವಾಗಿ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಅವಕಾಶವಿದ್ದರೂ ಸಿಬ್ಬಂದಿ ಟಿಕೆಟ್ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ.

ಇದನ್ನೂ ಓದಿ: Mysuru Dasara Mahotsav-2024: ಮೈಸೂರು ದಸರಾ….ಹಾಡು ಕೇಳುತ್ತಾ ಜಂಬೂ ಸವಾರಿ ನೋಡ್ತಿದ್ರೆ ನೋಸ್ಟಾಲ್ಜಿಕ್ ಅನುಭವ!

ಕಳೆದ 10 ದಿನಗಳಿಗೆ ಮಾತ್ರ ಟಿಕೆಟ್ ಪಡೆದು ವೀಕ್ಷಣೆಗೆ ಅವಕಾಶವಿತ್ತು. ಆದರೆ ಇಂದು ಉಚಿತ ಪ್ರವೇಶ ಇದ್ದರೂ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ. ಇಂದು ಸಹ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಪ್ರವಾಸಿಗರಿಗೆ ಟಿಕೆಟ್ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ