ಗಣೇಶ ಹಬ್ಬದ ಪ್ರಸಾದ: ವಿಘ್ನಾದೇಶ ಹೊರಡಿಸುವ ಹಕೀಕತ್ತು ಏನಿದೆ? ಸಿಎಂಗೆ ಬಿಜೆಪಿ ಪ್ರಶ್ನೆ
ಗಣೇಶ ಪೆಂಡಾಲ್ನಲ್ಲಿ ಪ್ರಸಾದ ತಯಾರಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶ ವಿರೋಧಿಸಿ ಬಿಜೆಪಿಯಿಂದ ಟ್ವೀಟ್ ಮಾಡಲಾಗಿದೆ. ಪರವಾನಗಿ ಪಡೆದವರಿಂದ ಮಾತ್ರ ಪ್ರಸಾದ ತಯಾರಿಸುವಂತೆ ಆದೇಶಿಸಲಾಗಿದ್ದು, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಬೆಂಗಳೂರು, ಸೆಪ್ಟೆಂಬರ್ 04: ಗೌರಿಗಣೇಶ ಹಬ್ಬ (Ganesha chaturthi) ಹಿನ್ನೆಲೆ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ಪ್ರಸಾದವಾಗಿ ವಿತರಿಸಲಾಗುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಎಫ್ಎಸ್ಎಸ್ಎಐ ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ಪ್ರಸಾದ ಸಿದ್ಧಪಡಿಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶಿಸಿದೆ. ಆದರೆ ಸದ್ಯ ಈ ಆದೇಶಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ಈ ಟ್ವೀಟ್ ಮಾಡಿರುವ ಬಿಜೆಪಿ, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌ಗಳಲ್ಲಿ ದೇವರ ಪ್ರಸಾದವನ್ನು ಎಫ್ಎಸ್ಎಸ್ಎಐ ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ವಿಘ್ನಆದೇಶವನ್ನು ಹೊರಡಿಸಿ ಸಮಸ್ತ ಹಿಂದೂಗಳ ಮನಸ್ಸನ್ನು ಘಾಸಿಗೊಳಿಸಿದ್ದಾರೆ ಎಂದು ಕಿಡಿಕಾರಿದೆ.
ಬಿಜೆಪಿ ಟ್ವೀಟ್
ಸ್ಕ್ಯಾಮ್ @siddaramaiah ನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ.
ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು FSSAI ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ವಿಘ್ನಆದೇಶವನ್ನು ಹೊರಡಿಸಿ ಸಮಸ್ತ ಹಿಂದೂಗಳ ಮನಸ್ಸನ್ನು ಘಾಸಿಗೊಳಿಸಿದ್ದಾರೆ.
ಅನ್ಯಮತೀಯರ ಹಬ್ಬಗಳಲ್ಲಿ ಬೀದಿ… pic.twitter.com/ipBYdE9Gxn
— BJP Karnataka (@BJP4Karnataka) September 4, 2024
ಅನ್ಯಮತೀಯರ ಹಬ್ಬಗಳಲ್ಲಿ ಬೀದಿ ಬೀದಿಗಳಲ್ಲಿ ಆಹಾರ ಬೇಯಿಸುವಾಗ ಕೈ ಕಟ್ಟಿಕೊಂಡಿದ್ದ ಸಿದ್ದರಾಮಯ್ಯನವರು, ಈಗ ಹಿಂದೂಗಳ ಆರಾಧ್ಯ ದೈವ ಗಣಪತಿ ಹಬ್ಬದ ಆಚರಣೆಗೆ ಇಂಥ ವಿಘ್ನಾದೇಶಗಳನ್ನು ಹೊರಡಿಸುವ ಹಕೀಕತ್ತು ಏನಿದೆ? ಮುಖ್ಯಮಂತ್ರಿಗಳೇ, ನಿಮ್ಮ ಓಲೈಕೆಗೂ ಒಂದು ಮಿತಿ ಇರಲಿ ಎಂದು ವಾಗ್ದಾಳಿ ಮಾಡಿದೆ.
ಇದನ್ನೂ ಓದಿ: Ganesh Chaturthi 2024: ಅಮೆರಿಕಾಗೆ ಹಾರಿದ ಮಣ್ಣಗುಡ್ಡೆಯ ಮಣ್ಣಿನ ಗಣಪ! ದೇಶ ವಿದೇಶಗಳಲ್ಲಿ ಫೇಮಸ್ ಮಂಗಳೂರಿನ ಈ ಗಣಪ
ಸೆಪ್ಟೆಂಬರ್ 6 ಮತ್ತು 07 ರಂದು ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುತ್ತಾರೆ.
ಇದನ್ನೂ ಓದಿ: ಗಣೇಶ ಚತುರ್ಥಿ: ದೇಶಿ ಗೋವಿನ ಸಗಣಿಯಿಂದ ಗಣೇಶ ವಿಗ್ರಹ ನಿರ್ಮಾಣ
ಆ ಹಿನ್ನೆಲೆಯಲ್ಲಿ ಪುಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ ಎಫ್ಎಸ್ಎಸ್ಎಐ ನೊಂದಣಿ, ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪ್ರಸಾದವನ್ನು ಸಿದ್ದಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.