ಕಾಸರಗೋಡಿನ ಕೆಲ ಊರುಗಳ ಹೆಸರು ಮಲಯಾಳಂಗೆ.. ಪ್ರತಾಪ್ ಸಿಂಹ, ವಾಟಾಳ್ ನಾಗರಾಜ್ ಆಕ್ರೋಶ

ಕೇರಳ ಸಿಎಂ ಜೊತೆ ಮಾತಾಡಿ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು ಎಂದು ಟ್ವಿಟರ್‌ನಲ್ಲಿ ಬದಲಾಯಿಸಿದ ಹೆಸರುಗಳ ಪಟ್ಟಿ ಹಾಕಿ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಕಾಸರಗೋಡಿನ ಕೆಲ ಊರುಗಳ ಹೆಸರು ಮಲಯಾಳಂಗೆ.. ಪ್ರತಾಪ್ ಸಿಂಹ, ವಾಟಾಳ್ ನಾಗರಾಜ್ ಆಕ್ರೋಶ
ಪ್ರತಾಪ್ ಸಿಂಹ
Follow us
TV9 Web
| Updated By: ಆಯೇಷಾ ಬಾನು

Updated on: Jun 27, 2021 | 1:54 PM

ಮೈಸೂರು: ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದಕ್ಕೆ ತಕ್ಷಣ ವಿರೋಧ ವ್ಯಕ್ತಪಡಿಸಬೇಕು ಎಂದು ಟ್ವೀಟ್ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದಾರೆ. ಕೇರಳ ಸಿಎಂ ಜೊತೆ ಮಾತಾಡಿ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು ಎಂದು ಟ್ವಿಟರ್‌ನಲ್ಲಿ ಬದಲಾಯಿಸಿದ ಹೆಸರುಗಳ ಪಟ್ಟಿ ಹಾಕಿ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಇನ್ನು ಮತ್ತೊಂದು ಕಡೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡದ ಹೆಸರುಗಳನ್ನ ಬದಲಾಸಿದರೆ ಕೇರಳ ಗಡಿ ಬಂದ್ ಮಾಡುತ್ತೀವಿ. ಕೇರಳಾದವರು ಕರ್ನಾಟಕಕ್ಕೆ ಬರಲು ಬಿಡಲ್ಲ. ಕೂಡಲೇ ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ಮಾಡಬೇಕಾಗುತ್ತದೆ. ಕೇರಳ ಸರ್ಕಾರದೊಟ್ಟಿಗೆ ಮಾತುಕತೆ ನಡೆಸಿ ಹೆಸರು ಬದಲಿಸದಂತೆ ಹೇಳಬೇಕು ಎಂದು ಮೈಸೂರಿನಲ್ಲಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಂ ಭಾಷೆಗೆ ಕೇರಳ ಸರ್ಕಾರ ಬದಲಾಯಿಸಿದೆ. ಈ ಬಗ್ಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ. ಈ ಕುರಿತು ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್ ಅವರು ಕೇರಳ ಸರ್ಕಾರ ಮತ್ತು ಅಲ್ಲಿನ ಲೋಕೋಪಯೋಗಿ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದಿದ್ದು, ಗ್ರಾಮಗಳ ಕನ್ನಡದ ಹೆಸರುಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: KSRTC Logo: ನಮ್ಮ ಕೆಎಸ್​ಆರ್​ಟಿಸಿಯಿಂದ ಕೇರಳದ ಸಾರಿಗೆಗೆ ನಷ್ಟವೇನಿಲ್ಲ, ನಾವು ಪ್ರತಿಸ್ಪರ್ಧಿಗಳೂ ಅಲ್ಲ; ವಿವಾದ ಅನಗತ್ಯ ಎಂದ ಲಕ್ಷ್ಮಣ ಸವದಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್