ಮೈಸೂರು: ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ದ್ರೋಹವನ್ನು ಮುಚ್ಚಿಕೊಳ್ಳಲು ಅಮಾಯಕ ಮುಸ್ಲಿಮರನ್ನು ಬಲಿಕೊಡ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ವಿರೋಧಿಯಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ. ಪಾಕ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ಕೊಡುವುದೇ ಸಿಎಎ ಉದ್ದೇಶವಾಗಿದೆ ಎಂದರು.
ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ:
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ. ಅಲ್ಲದೆ ಪರಂಪರೆಯಲ್ಲಿ ಏನು ನಡೆದುಕೊಂಡು ಬಂದಿದೆ ಅದನ್ನೇ ಮೋದಿ ಮಾಡಿದ್ದಾರೆ. ಹೊಸದಾಗಿ ಮೋದಿ ಏನನ್ನು ಮಾಡಿಲ್ಲ. ಯು.ಟಿ.ಖಾದರ್ ಪ್ರಕಾರ ಅಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ನೀಡಬಾರದಾ? ನೇರವಾಗಿ ಹೇಳಲಿ. ಮಂಗಳೂರಿನಲ್ಲಿ ನಡೆಯುತ್ತಿರುವ ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ. ಕಾಂಗ್ರೆಸ್ ಅವರನ್ನ ಉಚ್ಛಾಟಿಸಬೇಕು. ಮೈಸೂರಲ್ಲೂ ಶಾಂತಿಕದಡೋ ಯತ್ನ ಮಾಡಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
Published On - 12:50 pm, Fri, 20 December 19