ಪ್ರವೀಣ್ ಹತ್ಯೆ: ಕಾರ್ಯಕರ್ತರ ಆಕ್ರೋಶ, ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ಕಾರ್ಯಕರ್ತ ಪ್ರವೀಣ ಹತ್ಯೆ ಹಿನ್ನೆಲೆ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಜನಸಮಾವೇಶವನ್ನು ರದ್ದುಗೊಳಿಸಲಾಗಿದೆ.

ಪ್ರವೀಣ್ ಹತ್ಯೆ: ಕಾರ್ಯಕರ್ತರ ಆಕ್ರೋಶ, ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Rakesh Nayak Manchi

Updated on:Jul 28, 2022 | 6:59 AM

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿ ಮೂರು ವರ್ಷಗಳು ತುಂಬಿರುವ ನಡುವಲ್ಲೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಹತ್ಯೆ (Praveen Murder) ಸರ್ಕಾರಕ್ಕೆ ಆಘಾತ ನೀಡಿತ್ತು. ಅಲ್ಲದೆ, ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದ ರಾಜ್ಯ ಬಿಜೆಪಿ ಸರ್ಕಾರ, ಇಂದು ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಕೂಡ ರದ್ದುಗೊಳಿಸಿದೆ. ಈ ಬಗ್ಗೆ ಮಧ್ಯರಾತ್ರಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಪ್ರವೀಣ್ ಅವರ ಹತ್ಯೆ ಸಂದರ್ಭದಲ್ಲಿ ಕಾರ್ಯಕ್ರಮ ಸೂಕ್ತವಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಹಾಗೂ ವಿಧಾನಸೌಧದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದರು.

ಹತ್ಯೆ ನಡುವೆ ಕಾರ್ಯಕ್ರಮ ನಡೆಸಿದರೆ ಕಾರ್ಯಕರ್ತರ ಕೆಂಗಣ್ಣಿಗೆ ಮತ್ತಷ್ಟು ಗುರಿಯಾಗಬೇಕಾಗುತ್ತದೆ ಎಂಬ ಭಯ ರಾಜ್ಯ ಬಿಜೆಪಿ ನಾಯಕರಲ್ಲಿ ಹುಟ್ಟಿಕೊಂಡಿದೆ. ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಗಲಾಟೆ ಗದ್ದಲವೆಬ್ಬಿಸುವ ಆತಂಕವಿತ್ತು. ಇದೇ ಕಾರಣಕ್ಕೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳಿಂದ ತಿಳಿದುಬಂದಿದೆ.

ಪ್ರವೀಣನ ಹತ್ಯೆ ಸುದ್ದಿ ಬಂದ ಮೇಲೆ ಸಾಕಷ್ಟು ನೋವು, ಕಳವಳ ನನ್ನೊಳಗೆ ಆಗಿತ್ತು. ಪೊಲೀಸರಿಗೆ ಕೊಡಬೇಕಾದ ಎಲ್ಲಾ ಸೂಚನೆಗಳನ್ನ ಕೊಟ್ಟಿದ್ದೇನೆ. ಅಮಾಯಕ ಯುವಕನನ್ನ ಯೋಜನಾಬದ್ಧವಾಗಿ ಹತ್ಯೆಗೈದಿದ್ದು ಖಂಡನೀಯ, ಮಾತಿನಲ್ಲಿ ಖಂಡನೆಗಿಂದ ನಮ್ಮ ಮನಸ್ಸಿನಲ್ಲಿ‌ ಖಂಡನೆಯಿದೆ. ನಾಳೆ ಸರ್ಕಾರಕ್ಕೆ ಒಂದು ವರ್ಷ ಹಾಗೂ ಯಡಿಯೂರಪ್ಪನವರ ಸರ್ಕಾರಕ್ಕೆ ಎರಡು ವರ್ಷ ಆಗಲಿದ್ದು, ಒಟ್ಟು ಮೂರು ವರ್ಷಗಳ ಸಾಧನೆ ಜನರಿಗೆ ತೋರಿಸುವ ನಿಟ್ಟಿನಲ್ಲ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಡೀ ದಿನ ಅದೇ ಕಾರ್ಯಕ್ರಮದಲ್ಲಿದ್ದೆ ಎಂದರು.

ಪ್ರವೀಣನ ಹತ್ಯೆಯಾದ ಹಾಗೂ ಕಾರ್ಯಕರ್ತನ ತಾಯಿ ನೋವಿನಲ್ಲಿದ್ದಾಗ ಕಾರ್ಯಕ್ರಮ ನಡೆಸುವುದು ಸೂಕ್ತವಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಹಾಗೂ ವಿಧಾನಸೌಧದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವವರಿದ್ದ, ಉತ್ಸುಕರಾಗಿದ್ದ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ. ಆದರೆ ಜನರಿಗಾಗಿ ಉದ್ದೇಶಿಸಲಾಗಿದ್ದ ಯೋಜನೆಗಳನ್ನ ನಾನು ಪ್ರಕಟಿಸಲಿದ್ದೇನೆ ಎಂದರು.

ಇದು ಕೋಮುದಂಗೆ, ಅಶಾಂತಿ ಸೃಷ್ಟಿಸುವ ಹುನ್ನಾರವಾಗಿದೆ. ಇದು ಕೇವಲ ಕರ್ನಾಟಕ ಮಾತ್ರವಲ್ಲ, ಕೇರಳಾ, ಉತ್ತರ ಪ್ರದೇಶ ಸೇರಿದಂತೆ ದೇಶದ್ಯಾಂತ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ 22ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ದುರ್ದೈವಿವೆಂದರೆ ಹತ್ಯೆಗೈದ ಸಂಘಟನೆಗಳ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ಕೂಡ ಹಿಂಪಡೆಯಲಾಯಿತು. ಅದರಿಂದಲೇ ಆ ತರಹದ ಸಂಘಟನೆಗಳಿಗೆ ಬಲ ಬಂದಂತಾಗಿದೆ. ಇಂತಹ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿಯೇ ಒಂದು ವಿಶೇಷ ತರಬೇತಿ ಇರುವ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ರಚನೆಗೆ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ ಸಿಎಂ ಬೊಮ್ಮಾಯಿ, ದುಷ್ಕೃತ್ಯ ಎಸಗುತ್ತಿರುವ ಸಂಘಟನೆಗಳನ್ನ ನಿಷೇಧಿಸಲು ತನ್ನದೇ ಆದ ಕಾನೂನಿದೆ. ಈಗಾಗಲೇ ಆ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದರು.

ನನಗೆ ನನ್ನ ಕಾರ್ಯಕರ್ತನ ಹಾಗೂ ಪ್ರತೀ ಸಾರ್ವಜನಿಕನ ಜೀವವೂ ಅಗತ್ಯ. ದುಷ್ಕ್ರೃತ್ಯವೆಸಗುವವರ ಪಾಪದ ಕೊಡ ತುಂಬಿದೆ. ಮುಂದಿನ ದಿನಗಳಲ್ಲಿ ಕಠಿಣ ಕ್ರಮವವನ್ನ ನೀವೂ ನೋಡಲಿದ್ದೀರಿ. ನಾನು ಯುವಜನತೆಯ ಆಕ್ರೋಶವನ್ನ ಅರ್ಥ ಮಾಡಿಕೊಳ್ಳುತ್ತೇನೆ. ತಪ್ಪತಸ್ಥರಿಗೆ ಕಠಿಣ ಶಿಕ್ಷೆಯಾಗುವ ಭರವಸೆ ನೀಡುತ್ತೇನೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ‌ ಗಲಭೆ, ಪಾದರಾಯನಪುರ ಗಲಾಟೆ, ಮಂಗಳೂರು ಗಲಭೆ ಸಂದರ್ಭದಲ್ಲಿ ನಾನು ಗೃಹ ಸಚಿವನಾಗಿದ್ದೆ. ಆಗಲೂ ಕೂಡ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಿದೆ. ಪ್ರವೀಣನ ಹತ್ಯೆ ಪ್ರಕರಣದಲ್ಲಿಯೂ ಶಿಕ್ಷೆಯಾಗಲಿದೆ ಎಂದರು.

ನಡ್ಡಾ, ಅರುಣ್ ಸಿಂಗ್ ರಾಜ್ಯ ಭೇಟಿ ರದ್ದು

ಇಂದು ನಿಗದಿಯಾಗಿದ್ದ ಜನೋತ್ಸವ ಸಮಾವೇಶ ರದ್ದು ಹಿನ್ನೆಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಕರ್ನಾಟಕ ರಾಜ್ಯ ಭೇಟಿ ರದ್ದುಗೊಳಿಸಲಾಗಿದೆ.

Published On - 6:41 am, Thu, 28 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು