AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ಹತ್ಯೆ ಪ್ರಕರಣ: ಈವರೆಗೆ 21 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಸುಮಾರು 21 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗೆ ಸೇರಿದವರೂ ಇದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣ: ಈವರೆಗೆ 21 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು
ಪ್ರವೀಣ್ ನೆಟ್ಟಾರು ಮತ್ತು ಎಡಿಜಿಪಿ ಅಲೋಕ್ ಕುಮಾರ್
TV9 Web
| Edited By: |

Updated on:Jul 28, 2022 | 12:00 PM

Share

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru Assassination) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಈವರೆಗೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರಿ ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರ ಪೈಕಿ ಕೋಮು ಅಹಿತಕರ ಘಟನೆಗಳು ನಡೆದಾಗ ಸಾಮಾನ್ಯವಾಗಿ ಹೆಸರು ಕೇಳಿಬರುವ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳಿಗೆ ಸೇರಿದವರು ಕೂಡ ಒಳಗೊಂಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar), ಪ್ರಕರಣದಲ್ಲಿ ಭಾಗಿಯಾದವರನ್ನ ಯಾರನ್ನ ಬಿಡುವುದಿಲ್ಲ ಎಂದಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ ಸುಮಾರು 21 ಜನರನ್ನು ವಶಕ್ಕೆ ಪಡೆದಿದ್ದೇವೆ. ಇದರಲ್ಲಿ ಎಸ್‌ಡಿಫಿಐ, ಪಿಎಫ್ಐ‌ ಸೇರಿದಂತೆ ಹಲವು ಶಂಕಿತರು ಒಳಗೊಂಡಿದ್ದಾರೆ. ಇದು ತುಂಬಾ ಭೀಕರ ಹತ್ಯೆಯಾಗಿದ್ದು ಸೂಕ್ಷ್ಮ ವಿಚಾರವೂ ಆಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನ ಯಾರನ್ನ ಬಿಡುವುದಿಲ್ಲ. ಹಾಸನ ಎಸ್​ಪಿ ಹರಿರಾಮ್ ಶಂಕರ್, ಡಿಸಿಪಿ ಅನುಚೇತ್ ಅವರನ್ನು ಕರೆಸಿದ್ದೇವೆ ಎಂದು ಹೇಳಿದರು.

ಸಿಎಂಗೆ ನಾಳೆ ಬರಲು ಸೂಚನೆ

ಬೆಳ್ಳಾರೆಯಲ್ಲಿ 144 ಸೆಕ್ಷನ್ (ನಿಷೇದಾಜ್ಞೆ) ಜಾರಿ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯನ್ನು ನಾಳೆಗೆ ಮುಂದೂಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, 144 ಸೆಕ್ಷನ್ ನಿಷೇಧಾಜ್ಞೆ ಇರುವುದರಿಂದ ಇಂದು ಹೋಗುವುದು ಬೇಡ, ನಾಳೆ ಹೋಗುವಂತೆ ಮನವಿ ಮಾಡಲಾಗಿದೆ ಎಂದರು.

ಭದ್ರತೆ ಪರಿಶೀಲಿಸಿದ ಕಮಾಂಡೆಂಟ್

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 7ನೇ ಪಡೆ ಕಮಾಂಡೆಂಟ್ ಬಿಎಂ‌ ಪ್ರಸಾದ್ ಅವರು ಮೀಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಭದ್ರತೆ ಪರಿಶೀಲಿಸಿದ ಕಮಾಂಡೆಂಟ್ ಬಿಎಂ‌ ಪ್ರಸಾದ್, ಕಟ್ಟೆಚ್ಚರದಲ್ಲಿ ಇರುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಪ್ರವೀಣ್ ಪತ್ನಿ ಒತ್ತಾಯ

ನೆಟ್ಟಾರು ಗ್ರಾಮದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಮೃತ ಪ್ರವೀಣ್ ಪತ್ನಿ ನೂತನಾ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಟಿವಿ9 ಜೊತೆ ಮಾತನಾಡಿದ ಅವರು, ನನ್ನ ಪತಿ ಯಾರಿಗೂ ಅನ್ಯಾಯ ಮಾಡಲಿಲ್ಲ, ಇಡೀ ಸಮಾಜಕ್ಕಾಗಿ ಅವರು ಬದುಕಿದ್ದರು.  ನನ್ನ ಪತಿಯ ಕೊಲೆ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಬೇಕು. ಎನ್​ಐಎ ತನಿಖೆಯಿಂದ ಮಾತ್ರ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಪ್ರಾಣಿಪ್ರೀತಿಯನ್ನ ನೆನೆದು ಭಾವುಕರಾದ ಪ್ರವೀಣ್ ಪತ್ನಿ

ಪ್ರವೀಣ್ ನೆಟ್ಟಾರು ಅವರು ಪ್ರಾಣಿಪ್ರಿಯರು ಆಗಿದ್ದರು ಎಂದು ಅವರ ಪತ್ನಿ ನೂತನಾ ಅವರು ಹೇಳಿ ಭಾವುಕರಾಗಿದ್ದಾರೆ. ಪ್ರಾಣಿಗಳ ಮೇಲಿನ ಅತಿಯಾದ ಪ್ರೀತಿಯಿಂದ ಪ್ರವೀಣ್ ಅವರು ಬೀದಿ ನಾಯಿಮರಿಗಳನ್ನ ಮನೆಗೆ ತಂದು ಸಾಕುತ್ತಿದ್ದರು. ಅನಾಥ ನಾಯಿ ಮರಿಗಳನ್ನ ಅಕ್ಕರೆಯಿಂದ‌ ಕಾಣುತ್ತಿದ್ದರು. ಪ್ರವೀಣ್ ಮನೆಯಲ್ಲಿ ಇರುವ ನಾಯಿಮರಿ ಕೂಡ ಅನಾಥವಾಗಿ ಸಿಕ್ಕಿರುವುದು. ಇವರ ಪ್ರಾಣಿಮೇಲಿನ ಪ್ರೀತಿಯನ್ನು ನೆನೆದು ನೂತನಾ ಅವರು ಭಾವುಕರಾದರು.

Published On - 11:16 am, Thu, 28 July 22

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ