ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಸಹಚರರ ಸ್ಥಳಗಳ ಮೇಲೆ NIA ದಾಳಿ, ದಾಖಲೆಗಳು ಜಪ್ತಿ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 05, 2024 | 7:17 PM

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ ಭಾಗವಾಗಿ ಎನ್ಐಎ ಅಧಿಕಾರಿಗಳು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 16 ಕಡೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಎನ್ಐಎ ಬಹುಮಾನ ಘೋಷಿಸಿತ್ತು. ಈಗಾಗಲೇ 19 ಜನರನ್ನು ಬಂಧಿಸಲಾಗಿದ್ದು, 23 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಸಹಚರರ ಸ್ಥಳಗಳ ಮೇಲೆ NIA ದಾಳಿ, ದಾಖಲೆಗಳು ಜಪ್ತಿ
ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಸಹಚರರ ಸ್ಥಳಗಳ ಮೇಲೆ NIA ದಾಳಿ, ದಾಖಲೆಗಳು ಜಪ್ತಿ
Follow us on

ಬೆಂಗಳೂರು, ಡಿಸೆಂಬರ್​ 05: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್​​​ಐಎ ಅಧಿಕಾರಿಗಳ ದಾಳಿ ಮುಕ್ತಾಯವಾಗಿದೆ. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಇಂದು ಎನ್​​​ಐಎ ದಾಳಿ ನಡೆಸಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು, ಶಂಕಾಸ್ಪದ ವ್ಯಕ್ತಿಗಳು, ಆರೋಪಿಗಳ ಸಹಚರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆದಿದ್ದ ದಾಳಿಯಲ್ಲಿ ಕೆಲವು ಡಿಜಿಟಲ್ ಡಿವೈಸ್, ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.

19 ಜನರನ್ನು ಬಂಧನ, 23 ಜನರ ವಿರುದ್ಧ ಚಾರ್ಜ್​​ಶೀಟ್

2022ರ ಜು.22ರಂದು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಹತ್ಯೆಗೈದಿದ್ದರು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಈವರೆಗೆ 19 ಜನರನ್ನು ಬಂಧಿಸಲಾಗಿದೆ. ಒಟ್ಟು 23 ಜನರ ವಿರುದ್ಧ ಎನ್​​ಐಎ ಅಧಿಕಾರಿಗಳ ತಂಡ ಚಾರ್ಜ್​​ಶೀಟ್ ಸಲ್ಲಿಸಿದೆ. ತಲೆಮರೆಸಿಕೊಂಡಿರುವ 7 ಆರೋಪಿಗಳಿಗೆ ಎನ್​ಐಎ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ಇದನ್ನೂ ಓದಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಸಿದ್ದೀಕ್, ನಾಪತ್ತೆಯಾಗಿರುವ ಮೂವರು ಆರೋಪಿಗಳಲ್ಲಿ ಓರ್ವನಾದ ಅಬೂಬಕ್ಕರ್ ಸಿದ್ಧೀಕ್ ಪತ್ನಿಯ ಸಹೋದರ ಕೆಯ್ಯೂರಿನ ಉಮ್ಮರ್​ ಮನೆ ಮೇಲೆ ಕೂಡ ಬೆಂಗಳೂರಿನಿಂದ ಬಂದಿದ್ದ ಎನ್ಐಎ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಸಿದ್ದೀಕ್ ಪತ್ತೆಗೂ ಎನ್ಐಎ ಎರಡು ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಹಲವು ಬಾರಿ ಸಿದ್ದಿಕ್ ಮನೆಗೂ ನೋಟಿಸ್​ ನೀಡಲಾಗಿತ್ತು. ಇದೀಗ ಮತ್ತೆ ಮನೆಗೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿರುವ ಆರೋಪಿ ನೌಷದ್ ಮನೆ ಮೇಲೆ NIA ಅಧಿಕಾರಿಗಳ ದಾಳಿ ಮಾಡಿದ್ದು, ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಕುಟುಂಬ ಪರಾರಿ ಆಗಿದ್ದಾರೆ. ನೌಷದ್ ಪತ್ತೆಗೂ ಎನ್​ಐಎ 2 ಲಕ್ಷ ರೂ. ರಿವಾರ್ಡ್ ಘೋಷಿಸಿತ್ತು.

ಇದನ್ನೂ ಓದಿ: ನನ್ನ ಪತಿ ಹತ್ಯೆಯಲ್ಲಿ ಮುಸ್ತಫಾ ಪೈಚಾರ್ ಪ್ರಮುಖ ಆರೋಪಿ: ಪ್ರವೀಣ್ ನೆಟ್ಟಾರು ಪತ್ನಿ ನೂತನಾ

ನಿನ್ನೆ ಸಂಜೆ ಒಂದು ಆಟೋ ರಿಕ್ಷಾದಲ್ಲಿ ಓರ್ವ ಬಂದು ದಾಖಲೆ ಸಮೇತ ವಸ್ತುಗಳನ್ನು ತಗೆದುಕೊಂಡು ಹೋಗಿದ್ದಾನೆಂದು ಅಕ್ಕ-ಪಕ್ಕದ ಮನೆಯವರಿಂದ ಮಾಹಿತಿ ನೀಡಲಾಗಿದೆ. ಹೀಗಾಗಿ ದಾಳಿ ಮಾಡಿದ ಅಧಿಕಾರಿಗಳು ನೌಷದ್ ತಾಯಿ ಮತ್ತು ತಂಗಿಯನ್ನು ಮೊಬೈಲ್ ಲೋಕೆಷನ್ ಆಧಾರದಲ್ಲಿ ಪತ್ತೆ ಹಚ್ಚಿದ್ದಾರೆ.  ನೌಷದ್ ಮನೆಯ ಬೀಗ ತೆಗೆಸಿ ವಿಡಿಯೋ ಚಿತ್ರೀಕರಿಸಯತ್ತಾ ಪರಿಶೀಲನೆ ಮಾಡಿರುವ ಅಧಿಕಾರಿಗಳು, ಸತತ ಐದು ಗಂಟೆಗಳ ಕಾರ್ಯಾಚರಣೆ ಮಾಡಿದ್ದಾರೆ.

ವರದಿ: ಪ್ರದೀಪ್​ ಕ್ರೈಂ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:16 pm, Thu, 5 December 24