ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಪ್ಪ ಪಟ್ಟಣ ಬಂದ್​​ಗೆ ಕರೆ ನೀಡಿದ ಹಿಂದೂ ಪರ ಸಂಘಟನೆಗಳು

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಚಿಕ್ಕಮಗಳೂರಿನ ಹಿಂದೂ ಪರ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್​ಗೆ ಕರೆ ನೀಡಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗೆ ಆಗಮನಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಸಂಘಟನೆಗಳು ಮನವಿ ಮಾಡಿವೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಪ್ಪ ಪಟ್ಟಣ ಬಂದ್​​ಗೆ ಕರೆ ನೀಡಿದ ಹಿಂದೂ ಪರ ಸಂಘಟನೆಗಳು
ಕೊಪ್ಪ ಬಂದ್​ಗೆ ಕರೆ ಮತ್ತು ಕೊಲೆಯಾದ ಪ್ರವೀಣ್ ನೆಟ್ಟಾರು
Follow us
TV9 Web
| Updated By: Rakesh Nayak Manchi

Updated on:Jul 28, 2022 | 8:01 AM

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲೂ ನಮ್ಮದೇ ಸರ್ಕಾರದ ಇದ್ದಾಗಲೂ ಕಾರ್ಯಕರ್ತರಿಗೆ ಈ ದುಸ್ಥಿತಿ ಬಂದರೆ ಹೇಗೆ ಎಂದು ಬಿಜೆಪಿ ಸರ್ಕಾರವನ್ನೇ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಹತ್ಯೆ ಖಂಡಿಸಿ ನಿನ್ನೆ ಸುಳ್ಯ ತಾಲೂಕು, ಪುತ್ತೂರು ಸೇರಿದಂತೆ ಹಲವೆಡೆ ಅಘೋಷಿತ ಬಂದ್ ನಡೆಸಲಾಗಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣ ಬಂದ್ (Koppa Town Bandh)​​ಗೆ ಕರೆ ನೀಡಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆಗೆ ಕಾಫಿನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಹತ್ಯೆ ಖಂಡಿಸಿ‌ ಹಾಗೂ ಸೂಕ್ತ ನ್ಯಾಯಕ್ಕೆ ಆಗ್ರಹಿಸುತ್ತಿರುವ ಕೊಪ್ಪ ಪಟ್ಟಣದ ವಿವಿಧ ಹಿಂದೂ ಸಂಘಟನೆಗಳು ಇಂದು ಬಂದ್​ಗೆ ಕರೆ ನೀಡಿವೆ. ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಅಲ್ಲದೆ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದ ವಿರುದ್ಧ ಸಿಡಿದೆದ್ದ ನೆಲಮಂಗಲದ ಕಾರ್ಯಕರ್ತರು

ಬೆಂಗಳೂರು: ಪ್ರವೀಣ್ ಹತ್ಯೆಗೆ ಗ್ರಾಮಾಂತರ ಜಿಲ್ಲೆಯಲ್ಲೂ ಖಂಡನೆ, ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಸ್ವತಃ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನೆಲಮಂಗಲದ ಬಜರಂಗದಳ, ಸರ್ಕಾರದ ಜನೋತ್ಸವ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಧರಿಸಿ ಬರುವಂತೆ ಕರೆ ನೀಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್​ಗಳನ್ನು ಹಂಚಿಕೊಂಡು ವೈರಲ್ ಮಾಡಿತ್ತು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದ ಬಿಜೆಪಿ ನಾಯಕರು ಇನ್ನಷ್ಟು ಮುಜುಗರಕ್ಕೆ ಎಡೆಮಾಡಿಕೊಡುವುದು ಬೇಡ ಎಂದು ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ.

ಅಸಮರ್ಥ ನಾಯಕರಿಂದ ಕಾರ್ಯಕರ್ತನ ಕೊಲೆ

ಯಾದಗಿರಿ: ಯುವ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸ್ವಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ಸದಸ್ಯರು ಆಕ್ರೋಶಗೊಂಡಿದ್ದಾರೆ. ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಪ್ರವೀಣ್​ಗೆ ಶ್ರದ್ಧಾಂಜಲಿ ಕಾರ್ಯಕ್ರವನ್ನು ಹಮ್ಮಿಕೊಂಡು ಕಾರ್ಯಕರ್ತರು, ನಗರಸಭೆ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು. ಈ ವೇಳೆ ಸ್ವಪಕ್ಷದ ನಾಯಕರ ವಿರುದ್ಧ ಕೆಂಡಾಮಂಡಲರಾದ ನಗರಸಭೆ ಸದಸ್ಯ ಅಂಬಯ್ಯ ಶಾಬಾದಿ, ನಮ್ಮ ಅಸಮರ್ಥ ನಾಯಕರಿಂದ ನಮ್ಮ ನಿಷ್ಠಾವಂತ ಕಾರ್ಯಕರ್ತನ ಕೊಲೆಯಾಗಿದೆ. ನಮ್ಮ ಅಸಮರ್ಥ ನಾಯಕರಿಂದ ನಾವು ನೋವು ಅನುಭವಿಸುತ್ತಿದ್ದೇವೆ ಎಂದರು. ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರವೀಣ್ ನಿವಾಸಕ್ಕೆ ಬಿ.ವೈ. ವಿಜಯೇಂದ್ರ ಭೇಟಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನೆಲೆ ಇಂದು ಮೃತ ಪ್ರವೀಣ್ ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ ಸಾಂತ್ವಾನ ಹೇಳಲಿದ್ದಾರೆ. ಮಧ್ಯಾಹ್ನದ ವೇಳೆಗೆ ಬೆಳ್ಳಾರೆಗೆ ವಿಜಯೇಂದ್ರ ಅವರು ತಲುಪಲಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು, ಶಾಸಕರು ಕೂಡ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಸಾಧ್ಯತೆ ಇದೆ.

Published On - 7:46 am, Thu, 28 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ