ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಆರೋಪಿಗೆ ಆಶ್ರಯ ನೀಡಿದ್ದಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ನನ್ನು ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ಇಬ್ಬರು ಆರೋಪಿಗಳು ಆಶ್ರಯ ನೀಡಿದ್ದರು. ಹಾಗಾಗಿ ಇದೀಗ ಅವರಿಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಆರೋಪಿಗೆ ಆಶ್ರಯ ನೀಡಿದ್ದಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಆರೋಪಿಗೆ ಆಶ್ರಯ ನೀಡಿದ್ದಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on:Aug 02, 2024 | 9:38 PM

ಬೆಂಗಳೂರು, ಆಗಸ್ಟ್​ 2: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಇಬ್ಬರ ವಿರುದ್ಧ ಎನ್​​ಐಎ (NIA) ಚಾರ್ಜ್​​ಶೀಟ್​​ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.

ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್​ಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗುಲು ಯತ್ನಿಸಿದ್ದ ರಿಯಾಜ್​ ನನ್ನು ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ನನ್ನ ಪತಿಯ ಹತ್ಯೆಯಲ್ಲಿ ಮುಸ್ತಫಾ ಪೈಚಾರ್​ನೇ ಪ್ರಮುಖ ಆರೋಪಿಯಾಗಿದ್ದಾನೆ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ ಎಂದು ಪ್ರವೀಣ ನೆಟ್ಟಾರು ಪತ್ನಿ ನೂತನಾ ಹೇಳಿದ್ದರು. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.  ‌

ಪ್ರವೀಣ್ ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ ಎನ್​ಐಎ 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು.

ಘಟನೆ ಹಿನ್ನೆಲೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್​ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಇದನ್ನೂ ಓದಿ: ನನ್ನ ಪತಿ ಹತ್ಯೆಯಲ್ಲಿ ಮುಸ್ತಫಾ ಪೈಚಾರ್ ಪ್ರಮುಖ ಆರೋಪಿ: ಪ್ರವೀಣ್ ನೆಟ್ಟಾರು ಪತ್ನಿ ನೂತನಾ

ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಈ ಹಿನ್ನಲೆ ಎನ್​ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದು ಇದೀಗ ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Fri, 2 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ