ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದಲ್ಲಿ ಕಮ್ಯುನಿಟಿ ಹಾಲ್​ ಎನ್​ಐಎ ವಶಕ್ಕೆ

ಎನ್​ಐಎ ವಶದಲ್ಲಿರುವ ಜಾಗವನ್ನು ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಭೋಗ್ಯಕ್ಕೆ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದು ಅಥವಾ ನವೀಕರಿಸುವುದನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದಲ್ಲಿ ಕಮ್ಯುನಿಟಿ ಹಾಲ್​ ಎನ್​ಐಎ ವಶಕ್ಕೆ
ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: prajavani.net
Follow us
|

Updated on:Feb 23, 2023 | 1:33 PM

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್​ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಇಡುಕ್ಕಿ ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರ ಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್​ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್ಐಎ ಸಂಪೂರ್ಣ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ವಿಚಾರವಾಗಿ ಆದೇಶದ ಪ್ರತಿಯನ್ನು ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಲಾಗಿದೆ ಎಂದು ಎನ್​ಐಎ ಅಧಿಕೃತ ಮೂಲಗಳು ‘ಟಿವಿ9’ಗೆ ತಿಳಿಸಿವೆ.

ಎನ್​ಐಎ ವಶದಲ್ಲಿರುವ ಜಾಗವನ್ನು ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಭೋಗ್ಯಕ್ಕೆ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದು ಅಥವಾ ನವೀಕರಿಸುವುದನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಿಎಫ್​ಐ ತಂಡಗಳಿಗೆ ಈ ಕಮ್ಯುನಿಟಿ ಹಾಲ್​ನಲ್ಲಿ ಭಯೋತ್ಪಾದಕ ತರಬೇತಿ ನೀಡಲಾಗುತ್ತಿತ್ತು ಎಂಬ ಆರೋಪವಿದೆ.

ಇದನ್ನೂ ಓದಿ: Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಅನೇಕ ಆರೋಪಿಗಳನ್ನು ಬಂಧಿಸಲಾಗಿದೆ. ಈ ಮಧ್ಯೆ, ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್​ಡಿಪಿಐ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿತ್ತು.

ಈ ಮಧ್ಯೆ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕಳೆದ ತಿಂಗಳು ಎನ್​ಐಎ ಘೋಷಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Thu, 23 February 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ