ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ
ಪ್ರವೀನ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ
Follow us
TV9 Web
| Updated By: Rakesh Nayak Manchi

Updated on:Jun 27, 2023 | 4:43 PM

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳವಾರವಷ್ಟೇ ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ದಾಳಿ ನಡೆಸಿದ್ದ ಎನ್​ಐಎ ತಂಡ ಇದೀಗ ಬಂಟ್ವಾಳ ತಾಲೂಕಿನಲ್ಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಹತ್ಯೆ ಪ್ರಕರಣದ ತೀವ್ರ ವಿಚಾರಣೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳ ತಂಡ, ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಬೆಳ್ಳಂಬೆಳಗ್ಗೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಪರ್ಲಿಯಾ ಎಂಬಲ್ಲಿನ ರಿಯಾಜ್ ಮನೆ ಬಾಗಿಲು ತಟ್ಟಿದ ಎನ್​ಐಎ ಅಧಿಕಾರಿಗಳು, ರಿಯಾಜ್ ಮೊಬೈಲ್ ವಶಕ್ಕೆ ಪಡೆದು ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆ ಪ್ರಕರಣ ಸಂಬಂಧ ಮಂಗಳವಾರ ಬೆಳಗ್ಗೆ ಪುತ್ತೂರು ಹಾಗೂ ಸುಳ್ಯ ತಾಲೂಕಿನ 32 ಕಡೆಗಳಿಗೆ ದಾಳಿ ನಡೆಸಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಸಾಕ್ಷಿಗಳನ್ನು ಸಂಗ್ರಹಿಸಿದ್ದರು.

ಕಾರ್ಯಕರ್ತರಿಂದ ಗೋಬ್ಯಾಕ್ ಎನ್​ಐಎ ಘೋಷಣೆ

ರಿಯಾಜ್ ಪರಂಗೀಪೇಟೆ ಮನೆಗೆ ದಾಳಿ ವಿಚಾರ ಸಂಬಂಧ ಸ್ಥಳೀಯ ಎಸ್​ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೋ ಬ್ಯಾಕ್ ಎನ್​ಐಎ ಘೋಷಣೆ ಕೂಗುತ್ತಿದ್ದಾರೆ. ಬಿ.ಸಿ.ರೋಡ್ ಬಳಿಯ ಪರ್ಲಿಯಾ ಎಂಬಲ್ಲಿನ ರಿಯಾಜ್ ನಿವಾಸದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಬಂಟ್ವಾಳ ಪೊಲೀಸರು ಭದ್ರತೆ ನೀಡಿದ್ದಾರೆ.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಜುಲೈ‌ 26 ರಂದು ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಇಡೀ ರಾಜ್ಯವೇ ದಂಗಾಗುವಂತೆ ಹಾಗೂ ಕರ್ನಾಟಕದ ಬಿಜೆಪಿ ಸರ್ಕಾರದ ಬುಡ ಅಲುಗಾಡಿಸಿತ್ತು. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ತಾಲೂಕು ಶಾಸಕರೂ ಆಗಿರುವ ಸಚಿವ ಎಸ್. ಅಂಗಾರ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದರು. ರಾಜ್ಯಾದ್ಯಂತ ಕಾರ್ಯಕರ್ತರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರದ ಕಠಿಣ ಕ್ರಮದ ಹೇಳಿಕೆಯನ್ನು ಟೀಕಿಸಿದರು, ಯುವ ಮೂರ್ಚಾದ ಮುಖಂಡರು ರಾಜೀನಾಮೆಯ ಬಿಸಿ ತಟ್ಟಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 8 September 22

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ
ತ್ರಿವಿಕ್ರಮ್ ಡೇಂಜರ್​ ಎಂದ ಭವ್ಯಾ ಗೌಡ; ರಾಧೆಗೆ ಈಗ ಬೇಡವಾದ ಕೃಷ್ಣ