ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

| Updated By: Rakesh Nayak Manchi

Updated on: Jul 28, 2022 | 1:33 PM

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹ್ಮದ್​ ಶಫೀಕ್​ ಹಾಗೂ ಜಾಕೀರ್ ಎಂಬವರನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಎಡಿಜಿಪಿ ಅಲೋಕ್ ಕುಮಾರ್
Follow us on

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಮೊಹ್ಮದ್​ ಶಫೀಕ್​ ಹಾಗೂ ಜಾಕೀರ್ ಎಂಬವರನ್ನು ಬಂಧಿಸಲಾಗಿದೆ ಎಂದರು. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿ, ಬಂಧಿತ ಆರೋಪಿಗಳಿಬ್ಬರು ಕೂಡ ಬೆಳ್ಳಾರೆಯವರಾಗಿದ್ದಾರೆ. ಬಂಧಿತರಿಗಿರುವ ಸಂಘಟನೆಗಳ ಲಿಂಕ್​ ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳ ಸದಸ್ಯರು ಸೇರಿದಂತೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ಪೈಕಿ ಸ್ಥಳೀಯ ಇಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಓರ್ವ ಪ್ರಕರಣ ನಡೆಯುವ ಮೊದಲು ಮತ್ತು ನಂತರ ಅಲ್ಲೇ ಓಡಾಡಿದ್ದನು. ಸಿಸಿಟಿವಿ ಆಧಾರದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಂತಕರಿಗೆ ಪೂರ್ವಾಪರ ಮಾಹಿತಿ ನೀಡಿದ ಬಗ್ಗೆ ತಿಳಿದುಬಂದಿದೆ. ಬಂಧಿತ ಮತ್ತೋರ್ವ ಆರೋಪಿ ಮೇಲೆ ಟೆಲಿಗ್ರಾಮ್ ಕರೆ ಆರೋಪ ಇದೆ. ವಿದೇಶದಲ್ಲಿರುವ ವ್ಯಕ್ತಿಯ ಜೊತೆ ಮಾತುಕತೆ ನಡೆಸಲಾಗಿದ್ದು, ವಿದೇಶದಿಂದ ಈ ಕೃತ್ಯಕ್ಕೆ ಯೋಜನೆ ರೂಪಿಸಿರುವ ಸಾಧ್ಯತೆ ಇದೆ. ಹೀಗಾಗಿ ವಿಚಾರಣೆಯನ್ನು ಇನ್ನಷ್ಟು ಆಳಕ್ಕೆ ಕೊಂಡೊಯ್ಯಲಾಗಿದೆ.

ತನಿಖೆಯ ಪ್ರಗತಿ ಬಗ್ಗೆ ಸಿಎಂ ಗಮನಕ್ಕೆ ತಂದ ಡಿಜಿ ಐಜಿಪಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿ ಬಗ್ಗೆ ಡಿಜಿ ಐಜಿಪಿ ಪ್ರವೀಣ್ ಸೂದ್ ಅವರು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಪ್ರವೀಣ್ ಹತ್ಯೆ ಸಂಬಂಧ ಇಬ್ಬರ ಬಂಧನವಾಗಿರುವ ಮಾಹಿತಿಯನ್ನು ಗಮನಕ್ಕೆ ತಂದಿದ್ದಾರೆ.

Published On - 1:21 pm, Thu, 28 July 22