ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹತ್ಯೆಗೆ ಸಂಚು ರೂಪಿಸಿ ವಿಫಲರಾಗಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಗ್ಯಾಂಗ್​ನ ಸಂಪರ್ಕದಲ್ಲಿದ್ದ ಹಾಗೂ ಈ ಹಿಂದೆ ಹತ್ಯೆ ಸಂಚು ರೂಪಿಸಿ ವಿಫಲರಾಗಿದ್ದ ಸದ್ದಾಂ ಮತ್ತು ಹ್ಯಾರಿಸ್ ಬಂಧಿತ ಆರೋಪಿಗಳಾಗಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹತ್ಯೆಗೆ ಸಂಚು ರೂಪಿಸಿ ವಿಫಲರಾಗಿದ್ದ ಇಬ್ಬರು ಆರೋಪಿಗಳು ಅರೆಸ್ಟ್
ಹತ್ಯೆಯಾದ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್
Follow us
TV9 Web
| Updated By: Rakesh Nayak Manchi

Updated on:Aug 02, 2022 | 11:07 AM

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಗ್ಯಾಂಗ್​ನ ಸಂಪರ್ಕದಲ್ಲಿದ್ದ ಸದ್ದಾಂ ಮತ್ತು ಹ್ಯಾರಿಸ್ ಎಂಬ ಆರೋಪಿಗಳನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದು, ಇವರು ಈ ಹಿಂದೆ ಪ್ರವೀನ್ ಹತ್ಯೆಗೆ ಸಂಚು ರೂಪಿಸಿ ಕೊಲ್ಲಲು ವಿಫಲರಾಗಿರುವ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

ಬಂಧಿತ ಸದ್ದಾಂ ಮತ್ತು ಹ್ಯಾರಿಸ್ ಪ್ರವೀಣ್ ಹತ್ಯೆ ನಡೆಸಲು ಯೋಜನೆ ರೂಪಿಸಿ ವಿಫಲರಾಗಿದ್ದರು. ಈ ಕೊಲೆ ಸಂಚನ್ನು ಸದ್ದಾಂನ ಚಿಕನ್ ಸೆಂಟರ್ ಅಂಗಡಿಯಲ್ಲಿ ನಡೆಸಲಾಗಿತ್ತು. ಈ ಸಂಚು ವಿಫಲಗೊಂಡ ನಂತರ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಜಾಕೀರ್ ಮತ್ತು ಶಫೀಕ್ ತಂಡದ ಸಂಪರ್ಕದಲ್ಲಿದ್ದರು.

ಪ್ರವೀಣ್ ಹಂತಕರ ಸುಳಿವು

ಪ್ರವೀನ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರ ಬಂಧನವಾದ ಬಗ್ಗೆ ಹೇಳಿಕೆ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಪ್ರಕರಣ ಸಂಬಂಧ ಇಬ್ಬರನ್ನ ಬೆಂಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ. ಇವರೊಂದಿಗೆ ಅನೇಕರನ್ನು ವಶಕ್ಕೆ ಪಡೆದು ವಿಚಾರ ಮಾಡಲಾಗುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಕೃತ್ಯ ಎಸಗಿದವರನ್ನು ಬಂಧಿಸಲಾಗುವುದು. ಎಂದರು.

ಪ್ರವೀಣ್ ಅವರ ಹತ್ಯೆ ಮಾಡಿದವರು ಯಾರು ಎಂಬುದು ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಸಹಾಯ ಮಾಡಿದವರು ಈಗ ಬಂಧಿಸಲಾಗಿದ್ದು, ಹಂತಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಅವರು ಒಂದೇ ಕಡೆ ಇಲ್ಲ, ಬೇರೆಬೇರೆ ಕಡೆಗಳಲ್ಲಿ ಓಡಾಡುತ್ತಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಇವರನ್ನೂ ಬಂಧಿಸಲಾಗುವುದು. ಪ್ರಕರಣವು ತನಿಖಾ ಹಂತದಲ್ಲಿ ಇರುವುದರಿಂದ ಹೆಚ್ಚಿನ ಮಾಹಿತಿ ಹೇಳಲು ಸಾಧ್ಯವಿಲ್ಲ ಎಂದರು.

ಮಸೂದ್ ಹಂತಕರ ಬಂಧನ

ಮಸೂದ್ ಹಾಗೂ ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಗೃಹಸಚಿವರು, ಮಸೂದ್ ಹತ್ಯೆ ಪ್ರಕರಣದಲ್ಲಿ ಎಲ್ಲರ ಬಂಧನ ಆಗಿದೆ. ಫಾಝಿಲ್ ಕೊಲೆ ಪ್ರಕರಣದ ತನಿಖೆ ಮುಂದುವರಿದಿದೆ. ಯಾವುದೇ ಪ್ರಕರಣಗಳಲ್ಲೂ ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ. ಪೊಲೀಸರು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಫಾಜಿಲ್ ಹಂತಕರಿಂದ ತಪ್ಪೊಪ್ಪಿಗೆ

ಮಂಗಳೂರಿನ ಸುರತ್ಕಲ್​ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣ ಸಂಬಂಧ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಪಣಂಬೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನ ಬಂಧಿಸಲಾಗಿದೆ. ಆರೋಪಿಗಳು ಕೃತ್ಯವೆಸಗಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದರು.

Published On - 11:07 am, Tue, 2 August 22

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ