ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ (Praveen Nettaru) ನನ್ನು ಮಂಗಳವಾರ (26-07-22) ಬರ್ಬರವಾಗಿ ಕೊಲೆ ಮಾಡಿದ್ದು, ನಿನ್ನೆ (ಜುಲೈ 27)ರಂದು ಅಂತ್ಯಕ್ರಿಯೆ ಕೂಡ ನೆರವೇರಿಸಲಾಗಿದೆ. ಸದ್ಯ ಪ್ರವೀಣ್ ಹತ್ಯೆಗೆ ಟ್ವಿಸ್ಟ್ ಸಿಕ್ಕಿದ್ದು, 40 ನಿಮಿಷ ಕಾದು ರಕ್ತದೋಕುಳಿ ಹರಿಸಿದ್ರಾ ಕಿಲ್ಲರ್ಸ್ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಕೊಲೆಗೂ ಮೊದಲು ಅದೊಂದು ಜಾಗದಲ್ಲೇ ಹಂತಕರು ಟೆಂಟ್ ಹಾಕಿದ್ದು, ಸಿಸಿಟಿವಿಯಲ್ಲಿ ಹಂತಕರ ಹೆಜ್ಜೆಗುರುತು ಸೆರೆಯಾಗಿದೆ. ಈ ಕುರಿತಾಗಿ ಟಿವಿ9 ಬಳಿ ಹಂತಕರ ಎಕ್ಸ್ಕ್ಲೂಸಿವ್ ವಿಡಿಯೋ ಲಭ್ಯವಾಗಿದೆ. ಪ್ರವೀಣ್ ಮರ್ಡರ್ಗೂ ಮೊದಲು ಹಂತಕರು ಭಯಾನಕ ಸಂಚು ರೂಪಿಸಿದ್ದು, ಪ್ರವೀಣ್ ಚಿಕನ್ ಅಂಗಡಿಯಿಂದ 50 ಮೀ. ದೂರದಲ್ಲಿ 40 ನಿಮಿಷದವರೆಗೂ ಒಂದೇ ಜಾಗದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ 8 ಗಂಟೆ 1 ನಿಮಿಷ 51 ಸೆಕೆಂಡ್ಗೆ ಎಂಟ್ರಿ ಕೊಟ್ಟಿದ್ದು, 8 ಗಂಟೆ 1 ನಿಮಿಷ 57 ಸೆಕೆಂಡ್ಗೆ 50 ಮೀ. ದೂರ ಸ್ಟಾಪ್ ಮಾಡಿದ್ದಾರೆ. 8 ಗಂಟೆ 33 ನಿಮಿಷಕ್ಕೆ ಅಂಗಡಿ ಮುಂದೆ ಹೋಗಿದ್ದು, ಚಿಕನ್ ಅಂಗಡಿ ಮುಂದೆ ಹೋಗಿ ಮತ್ತೆ ಜಾಗದಲ್ಲಿ ಸ್ಟಾಪ್ ಆಗಿದ್ದಾರೆ.
ಇದನ್ನೂ ಓದಿ: ಪ್ರವೀಣ್ ಹತ್ಯೆ: ಆರೋಪಿಗಳ ಬಂಧಿಸುವರೆಗೂ ವಿಶ್ರಮಿಸುವುದಿಲ್ಲ, ಅಗತ್ಯಬಿದ್ರೆ ಎನ್‌ಐಎ ತನಿಖೆಗೆ ವಹಿಸ್ತೇವೆ : ಸಿಎಂ ಬೊಮ್ಮಾಯಿ
8 ಗಂಟೆ 38 ನಿಮಿಷಕ್ಕೆ ಮತ್ತೆ ಅಂಗಡಿ ದಿಕ್ಕಿನತ್ತ ಹಂತಕರು ಸಾಗಿದ್ದು, 8.38 ರಿಂದ 8.40 ರ ಸಮಯದಲ್ಲಿ ಹತ್ಯೆ ನಡೆದಿರುವ ಸಾಧ್ಯತೆಯಿದ್ದು, 8 ಗಂಟೆ 40 ನಿಮಿಷಕ್ಕೆ ಅಂಗಡಿಯತ್ತ ಜನ ಓಡೋಡಿ ಬಂದಿದ್ದಾರೆ. ಸದ್ಯ 40 ನಿಮಿಷ ನಿಂತಿದ್ದ ಬೈಕ್ ಪತ್ತೆಗಾಗಿ ಬೆಳ್ಳಾರೆ ಠಾಣೆ ಪೊಲೀಸರು ಬೆನ್ನುಬಿದಿದ್ದು, ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದ್ದಾರೆ. ಅನುಮಾನಾಸ್ಪದ ಬೈಕ್, ಮೂವರಿಗಾಗಿ ಖಾಕಿ ತಲಾಶ್ ನಡೆಸಿದ್ದಾರೆ.
ಸರ್ಕಾರದ ಜನೋತ್ಸವ ಕಾರ್ಯಕ್ರಮ ರದ್ದು: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿ ಮೂರು ವರ್ಷಗಳು ತುಂಬಿರುವ ನಡುವಲ್ಲೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಹತ್ಯೆ (Praveen Murder) ಸರ್ಕಾರಕ್ಕೆ ಆಘಾತ ನೀಡಿದೆ. ಅಲ್ಲದೆ, ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದ ರಾಜ್ಯ ಬಿಜೆಪಿ ಸರ್ಕಾರ, ಇಂದು ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಈ ಬಗ್ಗೆ ಮಧ್ಯರಾತ್ರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಪ್ರವೀಣ್ ಅವರ ಹತ್ಯೆ ಸಂದರ್ಭದಲ್ಲಿ ಕಾರ್ಯಕ್ರಮ ಸೂಕ್ತವಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಹಾಗೂ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ: ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಬಿಎಸ್ ಯಡಿಯೂರಪ್ಪ
ನಿನ್ನೆ ರಾತ್ರಿಯಿಂದ ಪ್ರವೀಣನ ಹತ್ಯೆ ಸುದ್ದಿ ಬಂದ ಮೇಲೆ ಸಾಕಷ್ಟು ನೋವು, ಕಳವಳ ನನ್ನೊಳಗೆ ನಡೀತಿತ್ತು. ಪೊಲೀಸರಿಗೆ ಕೊಡಬೇಕಾದ ಸೂಚನೆಗಳನ್ನ ಕೊಟ್ಟಿದ್ದೆ. ಅಮಾಯಕ ಯುವಕನನ್ನ ಯೋಜನಾಬದ್ಧವಾಗಿ ಹತ್ಯೆಗೈದಿದ್ದು ಖಂಡನೀಯ. ಮಾತಿನಲ್ಲಿ ಖಂಡನೆಗಿಂತ ನಮ್ಮ ಮನಸ್ಸಿನಲ್ಲಿ ಖಂಡನೆಯಿದೆ. ಒಬ್ಬ ಕಾರ್ಯಕರ್ತನ ಕಟುಂಬ ಕಷ್ಟದಲ್ಲಿದ್ದಾಗ ರಾಜ್ಯಾಧ್ಯಕ್ಷರು ಹೋಗಿ ಸಾಂತ್ವನ ಹೇಳಿದ್ದು ಶ್ಲಾಘನೀಯ ಎಂದು ಸಿಎಂ ಬೊಮ್ಮಾಯಿ ಹೇಳಿದರು.