Karnataka Weather Forecast: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್
Monsoon 2026: ತೀವ್ರಗೊಳ್ಳುತ್ತಿರುವ ಬಿಸಿಲ ಬೇಗೆಯ ನಡುವೆ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಮಳೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮೇ 26 ರಂದು ಕೇರಳಕ್ಕೆ ಪ್ರವೇಶಿಸಲಿದ್ದು, ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ, ಗುಡುಗು ಸಹಿತ ಭಾರೀ ಮಳೆ ಮತ್ತು ಬಿರುಗಾಳಿಯ ಎಚ್ಚರಿಕೆ ನೀಡಿದೆ. ಹಾಗಾದ್ರೆ, ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಬೆಂಗಳೂರು, (ಮೇ 20): ನೈಋತ್ಯ ಮುಂಗಾರು (Monsoon) ಇದೇ ಮೇ 26ಕ್ಕೆ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕರ್ನಾಟಕದಲ್ಲೂ ಮಳೆಯಾಗಲಿದೆ (Karnataka Rains) ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದ್ರೆ, ಅದಕ್ಕೂ ಮುನ್ನ ಅಂದರೆ ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಇಂದಿನಿಂದ (ಮೇ 20) ಮೇ 22ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿ (ಗಂಟೆಗೆ 50-60 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಮುಖ್ಯಾಂಶಗಳು
- ಇದೇ ಮೇ 26ಕ್ಕೆ ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆ ಎಂದ ಐಎಂಡಿ
- ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ
- ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ-ಆರೇಂಜ್ ಅಲರ್ಟ್
- ಕರಾವಳಿಯಲ್ಲಿ ಗಾಳಿ ಸಮೇತ ಮಳೆ
ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ-ಆರೇಂಜ್ ಅಲರ್ಟ್
ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು (ಮೇ20) ಮತ್ತು ಮೇ 21ರಂದು ವೇಳೆಗೆ ಗುಡುಗು ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ (Yellow Alert) ನೀಡಲಾಗಿದೆ.
#ಮಳೆ #ಮುನ್ನೆಚ್ಚರಿಕೆ : #rainfall #Warning for south interior #Karnataka : #thunderstorm #lightning #KSNDMC@KarnatakaVarthe #KarnatakaRains #Premonsoon@KodaguDC @DEO_CHIKMAGALUR @DcDeoHassan @dc_mandya @DCMysuru pic.twitter.com/23Fh0fCo4j
— Karnataka State Natural Disaster Monitoring Centre (@KarnatakaSNDMC) May 20, 2026
ಉತ್ತರ ಒಳನಾಡು
ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು ಗರಿಷ್ಠ 39°C ನಿಂದ 42°C ವರೆಗೆ ಇರಲಿದ್ದು, ಒಣಹವೆ ಮುಂದುವರಿಯಲಿದೆ. ಆದರೆ ಸಂಜೆ ವೇಳೆ ತಂಪಾದ ಗಾಳಿ ಅಥವಾ ಹಗುರ ಮುಂಗಾರು ಪೂರ್ವ ಮಳೆಯಾಗಬಹುದು.
ಮುಂದಿನ 3 ದಿನಗಳವರೆಗೆ ಮೋಡ, ಸಾಪೇಕ್ಷ ಆರ್ದ್ರತೆ, ಮಳೆ, ತಾಪಮಾನ ಮತ್ತು ಗಾಳಿಯ ಧಿಕ್ಕು ಹಾಗೂ ವೇಗದಂತಹ ಗ್ರಾಮ ಪಂಚಾಯತ್ ಮಟ್ಟದ ಮುನ್ಸೂಚನೆ. Gram Panchayat level Forecast -Cloudiness, Relative Humidity, Rainfall, Temperature & Wind speed & direction for the next 3 days. #KSNDMC pic.twitter.com/XhZAPYfzBD
— Karnataka State Natural Disaster Monitoring Centre (@KarnatakaSNDMC) May 20, 2026
ಕರಾವಳಿಯಲ್ಲಿ ಗಾಳಿ ಸಮೇತ ಮಳೆ
20th & 21st May 2026. Thunderstorm accompanied with gusty wind with speed 40-50 kmph likely to occur at one or two places over SIK from 22nd to 24th May 2026. Thunderstorm accompanied with gusty wind 30-40 kmph likely to occur at one or two places over Coastal Karnataka from
— Karnataka State Natural Disaster Monitoring Centre (@KarnatakaSNDMC) May 20, 2026
ಮೇ 20 ಮತ್ತು 21ರ ವರೆಗೆ ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು 22 ರಿಂದ 24ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ





