ಕೇವಲ ಸೂಚನೆ ಅಲ್ಲ, ಎಚ್ಚರಿಕೆ; ಪ್ರಕೃತಿ ವಿಕೋಪ ತಡೆಗೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಗಳಿವು

ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕೇವಲ ಸೂಚನೆ ಅಲ್ಲ, ಎಚ್ಚರಿಕೆ; ಪ್ರಕೃತಿ ವಿಕೋಪ ತಡೆಗೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಗಳಿವು
ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜತೆ ಸಭೆ ನಡೆಸಿದರು.
Follow us
Ganapathi Sharma
|

Updated on: May 23, 2023 | 5:20 PM

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರುಪೂರ್ವ ಮಳೆ (Pre Monsoon Rain) ಆರಂಭವಾಗಿದ್ದು, ಕೆಲವೆಡೆ ಪ್ರಾಕೃತಿಕ ವಿಕೋಪಗಳಿಂದಾಗಿ ಸಾವು ಸಂಭವಿಸಿವೆ. ಈ ಮಧ್ಯೆ, ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಗಾರು ಆರಂಭವಾಗುತ್ತಾ ಇದೆ. ಹೀಗಾಗಿ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ. ನಾನು ಕೇವಲ ಸೂಚನೆ ಕೊಡುತ್ತಿಲ್ಲ, ಎಚ್ಚರಿಕೆ ನೀಡುತ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಬೇಕಾಗುತ್ತದೆ ಎಂದು ಹೇಳಿದರು.

ಏನೇನು ಸೂಚನೆ ಕೊಟ್ಟರು ಸಿದ್ದರಾಮಯ್ಯ?

  1. ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭವಾಗಿದ್ದು, ಬಿತ್ತನೆ ಆರಂಭಿಸಲಾಗಿದೆ. ಜೂನ್​​ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಮುಂಗಾರುಪೂರ್ವ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಜನ ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
  2. ನಿಮ್ಮ ಬಳಿ ಅನುದಾನ ಲಭ್ಯವಿದೆ. ಹೆಚ್ಚುವರಿ ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು
  3. ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.
  4. ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್​​ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ
  5. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು.
  6. ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.
  7. ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು
  8. ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ