
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರುಪೂರ್ವ ಮಳೆ (Pre Monsoon Rain) ಆರಂಭವಾಗಿದ್ದು, ಕೆಲವೆಡೆ ಪ್ರಾಕೃತಿಕ ವಿಕೋಪಗಳಿಂದಾಗಿ ಸಾವು ಸಂಭವಿಸಿವೆ. ಈ ಮಧ್ಯೆ, ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಗಾರು ಆರಂಭವಾಗುತ್ತಾ ಇದೆ. ಹೀಗಾಗಿ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ. ನಾನು ಕೇವಲ ಸೂಚನೆ ಕೊಡುತ್ತಿಲ್ಲ, ಎಚ್ಚರಿಕೆ ನೀಡುತ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ